Friday, 14th December 2018  

Vijayavani

ಚಾಮರಾಜನಗರದಲ್ಲಿ ವಿಷವಾದ ಮಾರಮ್ಮನ ಪ್ರಸಾದ- ನಾಲ್ವರ ಸಾವು-40ಕ್ಕೂ ಹೆಚ್ಚು ಭಕ್ತರು ಅಸ್ವಸ್ಥ, ಜಿಲ್ಲಾಧಿಕಾರಿ ಭೇಟಿ        ರಾಜಸ್ಥಾನ ಸಿಎಂ ಆಗಿ ಆಶೋಕ್ ಗೆಹ್ಲೋಟ್, ಯುವ ನಾಯಕ ಸಚಿನ್ ಪೈಲಟ್​​ಗೆ ಡಿಸಿಎಂ ಪಟ್ಟ- ಕಾಂಗ್ರೆಸ್​ನಿಂದ ಅಧಿಕೃತ ಘೋಷಣೆ        ಚೆನ್ನೈನ ರೇಲಾ ಆಸ್ಪತ್ರೆಗೆ ಭೇಟಿ ನೀಡಿ ಸಿದ್ಧಗಂಗಾ ಶ್ರೀಗಳ ಆರೋಗ್ಯ ವಿಚಾರಿಸಿದ ಬಿಎಸ್​ವೈ- ಸಿಎಂ ಎಚ್​ಡಿಕೆ ಚೆನ್ನೈಗೆ ಪ್ರಯಾಣ        ಭದ್ರತೆಗಾಗಿ ರಫೇಲ್ ಖರೀದಿ-ಸುಪ್ರೀಂಕೋರ್ಟ್ ತೀರ್ಪಿನಿಂದ ಭ್ರಮನಿರಸನ-ರಾಗಾ ವಿರುದ್ಧ ಹಾಲಿ ಮಾಜಿ ರಕ್ಷಣಾ ಸಚಿವರ ಕಿಡಿ        ನಾಲ್ಕು ದಿನದಲ್ಲಿ ಎಲ್ಲ ಸರಿಹೋಗುತ್ತೆ-ಪ್ರಯಾಣಿಕರಿಗೆ ಯಾವುದೇ ಆತಂಕ ಬೇಡ-ಪಿಲ್ಲರ್ ಬಿರುಕಿಗೆ BMRCL ಎಂಡಿ ಸ್ಪಷ್ಟನೆ        ನನಗೂ ಸಚಿವೆಯಾಗುವ ಆಸೆ ಇದೆ- ಅಂತರಂಗ ತೆರೆದಿಟ್ಟ ಲಕ್ಷ್ಮೀ ಹೆಬ್ಬಾಳ್ಕರ್- ಕೈ ಸಚಿವಾಕಾಂಕ್ಷಿಗಳ ಪಟ್ಟಿಗೆ ಈಗ ಹೊಸ ಸೇರ್ಪಡೆ       
Breaking News

ಬಿಜೆಪಿ ಶಾಸಕರನ್ನು ಮುಟ್ಟಿ ನೋಡೋಣ. ಅವರು ಸಿಂಹ ರೂಪದವರು: ಕೆ.ಎಸ್‌. ಈಶ್ವರಪ್ಪ

Thursday, 09.08.2018, 9:40 AM       No Comments

ಮೈಸೂರು: ಮಂತ್ರಿಗಳು ವರ್ಗಾವಣೆಯ ಕಮಿಷನ್ ಏಜೆಂಟ್​ಗಳಾಗಿದ್ದಾರೆ. ರಾಜ್ಯ ಇತಿಹಾಸದಲ್ಲೇ ಇಷ್ಟೊಂದು ವರ್ಗಾವಣೆ ಭ್ರಷ್ಟಾಚಾರ ಆಗಿಲ್ಲ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌.ಈಶ್ವರಪ್ಪ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ, ಚಾಮುಂಡಿ ಸನ್ನಿಧಾನದಲ್ಲಿ ನಿಂತು ನಾನು ಈ ಮಾತನ್ನು ಜವಾಬ್ದಾರಿಯುತವಾಗಿ ಹೇಳುತ್ತಿದ್ದೇನೆ. ಸಿಎಂ ಕಣ್ಮುಂಚಿ ಕುಳಿತು ಕೊಂಡಿರುವುದು ಒಳ್ಳೆಯದಲ್ಲ. ಎಲ್ಲ ಹಂತದ ಅಧಿಕಾರಿಗಳ ವರ್ಗಾವಣೆಗೆ ಹಣ ಪಡೆಯಲಾಗುತ್ತಿದೆ. ಅಧಿಕಾರಿಗಳಿಗೆ ಯಾವ ಕ್ಷಣದಲ್ಲಿ ಈ ಸರ್ಕಾರ ಬೀಳುತ್ತೋ, ಯಾವ ಕ್ಷಣದಲ್ಲಿ ನಮ್ಮ ವರ್ಗಾವಣೆ ಆಗುತ್ತೋ ಎಂಬ ಆತಂಕವಿದೆ ಎಂದರು.

ಕೈ ಶಾಸಕರನ್ನು ಸರ್ಕಾರ ಬೀಳಿಸೋಣಾ ಬನ್ನಿ ಎಂದು ನಾವು ಕರೆಯಲ್ಲ. ಬಿಜೆಪಿ ಕರೆದ ಕೂಡಲೇ ಬರುವಷ್ಟು ಕಾಂಗ್ರೆಸ್ ಶಾಸಕರು ದುರ್ಬಲರಾ? ಅವರ ಶಾಸಕರ ಬಗ್ಗೆ ಅವರ ಅಧ್ಯಕ್ಷರಿಗೆ ನಂಬಿಕೆ ಇಲ್ಲ. ರಾಜ್ಯದ ಜೆಡಿಎಸ್-ಕಾಂಗ್ರೆಸ್ ಶಾಸಕರು ದುರ್ಬಲರು. ಇಂಥ ಸರ್ಕಾರ ಉಳಿಯುತ್ತಾ? ನಮ್ಮ ಒಬ್ಬ ಶಾಸಕರನ್ನು ಮುಟ್ಟಿ ನೋಡೋಣಾ? ಬಿಜೆಪಿಯ ಶಾಸಕರು ಸಿಂಹ ರೂಪದ ಶಾಸಕರು ಎಂದು ಕಿಡಿಕಾರಿದರು. (ದಿಗ್ವಿಜಯ ನ್ಯೂಸ್)

Leave a Reply

Your email address will not be published. Required fields are marked *

Back To Top