More

    ಮೈಸೂರಿನಲ್ಲಿ ಜೂನ್​ 14ರ ನಂತರವೂ ಲಾಕ್​ಡೌನ್​ ಮುಂದುವರಿಕೆ: ಸಚಿವ ಎಸ್​.ಟಿ. ಸೋಮಶೇಖರ್​ ಘೋಷಣೆ

    ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಜೂನ್​ 14ರ ನಂತರವೂ ಲಾಕ್​ಡೌನ್​ ಮುಂದುವರಿಯಲಿದೆ ಎಂದು ಉಸ್ತುವಾರಿ ಸಚಿವ ಎಸ್​.ಟಿ. ಸೋಮಶೇಖರ್​ ಘೋಷಣೆ ಮಾಡಿದ್ದಾರೆ.

    ಜೂ.14ರಿಂದ ಮತ್ತೆ ಒಂದು ವಾರಗಳ ಕಾಲ ಅಂದರೆ ಜೂನ್​ 21ರ ವರೆಗೆ ಮೈಸೂರಿನಲ್ಲಿ ಲಾಕ್‌ಡೌನ್ ಮುಂದುವರಿಯಲಿದೆ ಎಂದು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಎಸ್​.ಟಿ. ಸೋಮಶೇಖರ್​ ಹೇಳಿದರು.

    ಕರೊನಾ ನಿಯಂತ್ರಣಕ್ಕಾಗಿ ಜನಪ್ರತಿನಿಧಿಗಳ ಅಭಿಪ್ರಾಯ ಸಂಗ್ರಹಿಸಿದ್ದೇನೆ. ಜೂನ್ 14ರ ನಂತರವೂ ಮೈಸೂರಿನಲ್ಲಿ ಲಾಕ್‌ಡೌನ್ ಮುಂದುವರಿಯಲಿದೆ. ಆದರೆ ಯಾವುದಕ್ಕೆ ವಿನಾಯಿತಿ ಕೊಡಬೇಕು ಎಂಬುದರ ಕುರಿತು ಚರ್ಚಿಸಿ ಅಧಿಕಾರಿಗಳು ಮುಂದಿನ ದಿನಗಳಲ್ಲಿ ಆದೇಶ ಹೊರಡಿಸಲಿದ್ದಾರೆ ಎಂದರು.

    ಅಲ್​ಲಾಕ್ ಮಾಡಬೇಕಿದ್ರೆ ಶೇ.5 ಕ್ಕಿಂತ ಕಡಿಮೆ ಪಾಸಿಟಿವಿಟಿ ರೇಟ್ ಇರಬೇಕು ಅನ್ನುವ ನಿಯಮ ಇದೆ. ಮೈಸೂರಿನಲ್ಲಿ ಈಗ ಶೇ.20 ರಷ್ಟು ಪಾಸಿಟಿವಿಟಿ ರೇಟ್ ಇದೆ. ಇದನ್ನು ಅತೀ ಶೀಘ್ರದಲ್ಲಿ ಶೇ.5 ಕ್ಕಿಳಿಸುವ ನಿಟ್ಟಿನಲ್ಲಿ ಪ್ರಯತ್ನಗಳಾಗಬೇಕಿದೆ. ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿ, ಜಿ.ಪಂ. ಸಿಇಒ ಹಾಗೂ ಎಸ್ಪಿ ಒಂದೇ ಕಾರಿನಲ್ಲಿ ಕ್ಷೇತ್ರ ಸಂಚಾರ ಮಾಡಲಿದ್ದಾರೆ. ಮೈಸೂರಿನ ಎಲ್ಲ 11 ಕ್ಷೇತ್ರಗಳಿಗೂ ಒಟ್ಟಿಗೆ ಭೇಟಿ ಕೊಟ್ಟು ಕರೊನಾ ಪರಿಸ್ಥಿತಿ ತಹಬದಿಗೆ ತರಲಿದ್ದಾರೆ ಎಂದು ಸಭೆ ಬಳಿಕ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು. (ದಿಗ್ವಿಜಯ ನ್ಯೂಸ್​)

    5 ರೂಪಾಯಿ ನೋಟು ವಿನಿಮಯ ಮಾಡಿ 30 ಸಾವಿರ ರೂ. ಸಂಪಾದಿಸಿ! ಹೇಗೆ ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ

    ಐದು ಹೆಣ್ಣು ಮಕ್ಕಳೊಂದಿಗೆ ರೈಲಿಗೆ ತಲೆ ಕೊಟ್ಟ ಮಹಿಳೆ! ಕಂಠ ಪೂರ್ತಿ ಕುಡಿದು ಬರುತ್ತಿದ್ದವ ಈಗ ಒಬ್ಬಂಟಿ

    ನಟ ಸುಶಾಂತ್​ ಸಿಂಗ್ ಬಗೆಗಿನ ಚಲನಚಿತ್ರ ಬಿಡುಗಡೆಗೆ ತಡೆ ಇಲ್ಲ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts