ಪ್ರೇಮಿಗಳ ಆಕ್ಷೇಪಾರ್ಹ ವಿಡಿಯೋ ಫೇಸ್​ಬುಕ್​ನಲ್ಲಿ ವೈರಲ್​ ಆಗುತ್ತಿದ್ದಂತೆ ಆತ್ಮಹತ್ಯೆ ಮಾಡಿಕೊಂಡ ಯುವಕ, ಯುವತಿಯೂ ನಾಪತ್ತೆ

ಮೈಸೂರು: ಪ್ರೇಮಿಗಳ ಆಕ್ಷೇಪಾರ್ಹ ವಿಡಿಯೋ ಸಾಮಾಜಿಕ ಜಾಲತಾಣ ಫೇಸ್​ಬುಕ್​ನಲ್ಲಿ ಅಪ್​ಲೋಡ್​ ಆಗಿದ್ದು, ಅವಮಾನಕ್ಕೆ ಹೆದರಿ ವಿಡಿಯೋದಲ್ಲಿರುವ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಗಿರೀಶ್ ಆತ್ಮಹತ್ಯೆಗೆ ಶರಣಾದ ಯುವಕ. ನಂಜನಗೂಡು ತಾಲೂಕು ಮಲ್ಲುಪುರ ಗ್ರಾಮದ ನಿವಾಸಿಯಾಗಿರುವ ಗಿರೀಶ್​, ಟಿವಿಎಸ್ ಕಾರ್ಖಾನೆಯ ಉದ್ಯೋಗಿಯಾಗಿದ್ದ. ಗಿರೀಶ್​​ ಕಾರ್ಯ ಗ್ರಾಮದ ಯುವತಿಯನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ.

ಆಕ್ಷೇಪಾರ್ಹ ವಿಡಿಯೋವನ್ನು ಪ್ರೇಮಿಗಳೇ ತಮ್ಮ ಮೊಬೈಲ್‌ನಲ್ಲಿ ಸೆಲ್ಫಿ ವಿಡಿಯೋ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಯುವತಿಯೇ ಬೆತ್ತಲಾಗಿ ತೆಗೆದ ಸೆಲ್ಫಿ ವಿಡಿಯೋಗಳು ಹಾಗೂ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಆಗಿ ವೈರಲ್​ ಆಗುತ್ತಿದ್ದಂತೆ ಹೆದರಿದ ಗಿರೀಶ್​ ಅತಿಯಾಗಿ ಮಾತ್ರೆ ಸೇವಿಸಿ ಪ್ರಾಣ ಕಳೆದುಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ.

ಮೃತ ಗೀರೀಶನ ಪಾಲಕರು ಹೊಟ್ಟೆನೋವಿನಿಂದ ಆತ ಬಳಲುತ್ತಿದ್ದನೆಂದು ಕಾರಣ ಹೇಳುತ್ತಿದ್ದಾರೆ. ಅತ್ತ ಗಿರೀಶ್ ಸಾವಿನ ನಂತರ ಕಾರ್ಯ ಗ್ರಾಮದಿಂದ ಯುವತಿಯೂ ನಾಪತ್ತೆಯಾಗಿದ್ದಾಳೆ ಎಂದು ಹೇಳಲಾಗುತ್ತಿದೆ. ಈ ಸಂಬಂಧ ಬಿಳಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *