More

    ಮೈಸೂರು ಮೇಯರ್ ರುಕ್ಮಿಣಿ ಮಾದೇಗೌಡ ಪಾಲಿಕೆ ಸದಸ್ಯತ್ವ ರದ್ದು: ಮೇಯರ್​ ಸ್ಥಾನಕ್ಕೆ ಕಂಟಕ

    ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರು ಮೇಯರ್ ರುಕ್ಮಿಣಿ ಮಾದೇಗೌಡ ಅವರ ಮಹಾನಗರ ಪಾಲಿಕೆ ಸದಸ್ಯತ್ವ ರದ್ದು ಮಾಡಿ ಹೈಕೋರ್ಟ್ ಆದೇಶ ಹೊರಡಿಸಿದ್ದು, ಮೇಯರ್​ ಸ್ಥಾನಕ್ಕೆ ಕಂಟಕ ಎದುರಾಗಿದೆ.

    ಪಾಲಿಕೆಯ 36ನೇ ವಾರ್ಡ್ ಸದಸ್ಯೆಯಾಗಿರುವ ರುಕ್ಮಿಣಿ ಮಾದೇಗೌಡ, ಚುನಾವಣೆ ವೇಳೆ ಸೂಕ್ತ ಆದಾಯ ಪ್ರಮಾಣ ಪತ್ರ ಸಲ್ಲಿಸದ ಹಿನ್ನೆಲೆಯಲ್ಲಿ ಪಾಲಿಕೆ ಸದಸ್ಯತ್ವ ರದ್ದು ಮಾಡಲಾಗಿದೆ.

    ಸುಪ್ರೀಂಕೋರ್ಟ್​ಗೆ ಅರ್ಜಿ ಹಾಕುವವರೆಗೂ ಮೇಯರ್​ಗೆ ಯಾವುದೇ ಅಧಿಕಾರ ಇರುವುದಿಲ್ಲ. ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಮೊರೆ ಹೋಗಲು ರುಕ್ಮಿಣಿ ನಿರ್ಧಾರ ಮಾಡಿದ್ದಾರೆ.

    ಈ ಬಗ್ಗೆ ಮಾತನಾಡಿರುವ ರುಕ್ಮಿಣಿ ಪತಿ ಮಾದೇಗೌಡ, ಹೈಕೋರ್ಟ್ ತೀರ್ಪು ಬಂದಿದೆ. ಆದರೆ, ಅದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೊರೆ ಹೋಗುತ್ತೇವೆ ಎಂದು ಹೇಳಿದ್ದಾರೆ. ಮಾದೇಗೌಡ ಅವರು ಮೈಸೂರು ಜಿಪಂ ಸದಸ್ಯರಾಗಿದ್ದಾರೆ. (ದಿಗ್ವಿಜಯ ನ್ಯೂಸ್​)

    ಸಂಪಾದಕೀಯ: ಅವ್ಯವಹಾರ ನಿಲ್ಲಲಿ; ತನಿಖೆಯಿಂದ ಸತ್ಯಾಂಶ ಹೊರಬೀಳಬೇಕು

    ಜೀ ಕನ್ನಡದಲ್ಲಿ ಮಹಾಸಂಭ್ರಮ 3 ಕಾರ್ಯಕ್ರಮಗಳ ಪ್ರತಿಭೆಗಳು ಒಂದೇ ವೇದಿಕೆಯಲ್ಲಿ

    ವಿಶ್ವ ಟೆಸ್ಟ್ ಫೈನಲ್‌ಗೆ 6ನೇ ದಿನ? ಫಲಿತಾಂಶ ಬರದಿದ್ದರೆ ಹೆಚ್ಚುವರಿ ದಿನ ಆಟವಾಡಿಸಲು ಚಿಂತನೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts