More

    ಐಪಿಎಸ್​ ರೂಪಾ Vs ಐಎಎಸ್​ ರೋಹಿಣಿ ಸಿಂಧೂರಿ: ಫೇಸ್’ಬುಕ್’ನಲ್ಲಿ ಆರೋಪಗಳ ಸುರಿಮಳೆಗೈದ ರೂಪಾ ಮೌದ್ಗಿಲ್

    ಬೆಂಗಳೂರು: ಜೆಡಿಎಸ್​ ಶಾಸಕ ಸಾರಾ ಮಹೇಶ್​ ಜೊತೆ ಐಎಎಸ್​ ಅಧಿಕಾರಿ ರೋಹಿಣಿ ಸಿಂಧೂರಿ ಅವರು ಸಂಧಾನ ಮಾಡಿಕೊಂಡಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿರುವ ಬೆನ್ನಲ್ಲೇ ಇದೀಗ ರೋಹಿಣಿ ಸಿಂಧೂರಿ ವಿರುದ್ಧ ಐಪಿಎಸ್​ ಅಧಿಕಾರಿ ರೂಪಾ ಮೌದ್ಗಿಲ್​ ಅವರು ಫೇಸ್​ಬುಕ್​ ಮೂಲಕ ಸಮರ ಸಾರಿದ್ದು, ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.

    ರೂಪಾ ಅವರು ಫೇಸ್​ಬುಕ್​ನಲ್ಲಿ ಬರೆದುಕೊಂಡಿರುವ ಸಾಲುಗಳಳು ಈ ಕೆಳಕಂಡಂತಿದೆ….
    ಇಂದಿನ ಸುದ್ದಿ ಎಲ್ಲ ಕಡೆ ವೈರಲ್​ ಆಗಿರುವುದು ರೋಹಿಣಿ ಸಿಂಧೂರಿ, ಶಾಸಕ ಸಾರಾ ಮಹೇಶ್ ಬಳಿ ಸಂಧಾನಕ್ಕೆ ಹೋಗಿದ್ದರು ಎಂಬುದು. ಸಂಧಾನಕ್ಕೆ ಹೋಗುವುದು ಅಂದರೆ ಅರ್ಥ ಏನು? ಯಾವ ಐಎಎಸ್ ಅಧಿಕಾರಿ ಕೂಡ ಎಂಎಲ್ಎ ಅಥವಾ ರಾಜಕೀಯ ವ್ಯಕ್ತಿಗಳ ಜೊತೆ ತಾವು ನಿರ್ವಹಿಸಿದ ಕರ್ತವ್ಯ ನಿಮಿತ್ತ ಸಂಧಾನಕ್ಕೆ ಹೋಗಿದ್ದನ್ನು ನಾನು ಇದೇ ಮೊದಲು ಕೇಳಿದ್ದು. ಹಾಗಾದರೆ, ರೋಹಿಣಿ ಸಿಂಧೂರಿ ಸಂಧಾನಕ್ಕೆ ಹೋಗಿದ್ದು ಯಾಕೆ? ಆಕೆ ಏನನ್ನು ಮುಚ್ಚಿಕೊಳ್ಳುವ ಪ್ರಯತ್ನ ನಡೆಸಿದ್ದಾರೆ? ತಮ್ಮ ಕರ್ತವ್ಯಲೋಪದ ಬಗ್ಗೆಯೋ ಅಥವಾ ತಮ್ಮ ಭ್ರಷ್ಟಾಚಾರ ಬಗ್ಗೆಯೋ ಏನು?

    1. ದಿವಂಗತ ಐಎಎಸ್​ ಅಧಿಕಾರಿ ಡಿಕೆ ರವಿ ಕುರಿತ ಸಿಬಿಐ ರಿಪೋರ್ಟ್​ನಲ್ಲಿ ರೋಹಿಣಿ ಅವರ ಚಾಟ್ಸ್ ಬಗ್ಗೆ ಉಲ್ಲೇಖ ಇದ್ದು, ರವಿ ಅವರು ಎಂದಾದರೂ ಹದ್ದು ಮೀರಿದ ತಕ್ಷಣವೇ ಅವರನ್ನು ಬ್ಲಾಕ್ ಮಾಡಬಹುದಿತ್ತು. ಆದರೆ, ಪರ್ಮನೆಂಟ್ ಆಗಿ ಬ್ಲಾಕ್ ಮಾಡಲಿಲ್ಲ ಈಕೆ. ಬ್ಲಾಕ್ ಮಾಡದೆ ಇದ್ದದ್ದು ಉತ್ತೇಜನ ಕೊಡುವ ಹಾಗೆ ಎಂಬಂತೆಯೇ ಕಾಣುತ್ತದೆ ಎಂಬುದು ಅನೇಕರ ಅಭಿಪ್ರಾಯ.
    2. ಮುಂದೆ ಮಂಡ್ಯ ಸಿಇಒ ಆದಾಗ ಈಕೆ ಕಟ್ಟಿಸಿದ ಟಾಯ್ಲೆಟ್​ಗಳಿಗಿಂತ ಹೆಚ್ಚು ತೋರಿಸಿ ಕೇಂದ್ರ ಸರ್ಕಾರದ ಪ್ರಶಸ್ತಿ ತೆಗೆದುಕೊಂಡರು ಎಂಬ ಆರೋಪ ಕೇಳಿ ಬಂತು. ಅದರ ತನಿಖೆಯೇ ಆಗಲಿಲ್ಲ.
    3. ಚಾಮರಾಜನಗರದಲ್ಲಿ 24 ಜನರು ಆಮ್ಲಜನಕ ಇಲ್ಲದೇ ಸತ್ತಾಗ, ಆಪಾದನೆಗಳು ಇವರ ಮೇಲೆ ನೇರವಾಗಿ ಬಂತು. ಅದರಿಂದ ಹೇಗೋ ಪಾರಾದರು.
    4. ಕನ್ನಡದ ಹುಡುಗಿ ಐಎಎಸ್​ ಶಿಲ್ಪಾ ನಾಗ್ ಅವರ ಜೊತೆ ಜಗಳ ಏತಕ್ಕಾಗಿ? ಅಲ್ಲಿ ಯಾವುದೇ ಮೌಲ್ಯಾಧಾರಿತ ವಸ್ತು ವಿಷಯ ಇರಲಿಲ್ಲ. ಅದೊಂದು ಕೋಳಿ ಜಗಳ. ಶಿಲ್ಪಾ ಅವರೇ ಹೆಚ್ಚು ಕೆಲಸ ಮಾಡಿದ್ದು, ಹೆಚ್ಚು ಅವರ ಬಗ್ಗೆ ಪಾಸಿಟಿವ್ ಆಗಿ ಬರೆಯಲಾಯಿತು. ಅದನ್ನು ಸಹಿಸಿಕೊಳ್ಳಲಾಗದೆ ಶಿಲ್ಪಾಗೆ ಕಿರುಕುಳ ಮಾಡಿದರು ಎಂದು ಕೆಲವರು ಹೇಳಿದರು.
    5. ಐಎಎಸ್​ ಹರ್ಷ ಗುಪ್ತ ಅವರು ಅತ್ಯಂತ ಪ್ರಾಮಾಣಿಕ ಅಧಿಕಾರಿ. ಅವರ ಜೊತೆ ಜಗಳ ಮಾಡಿಕೊಂಡರು. ಎಲ್ಲ ಐಎಎಸ್ ಅಧಿಕಾರಿಗಳಿಗೂ ಈ ವಿಷಯ ಗೊತ್ತಿದೆ.
    6. ಐಎಎಸ್​ ಮಣಿವಣ್ಣನ್ ಜೊತೆ ಲೇಬರ್/ ಕಾರ್ಮಿಕ ಇಲಾಖೆಯಲ್ಲಿ ಇದ್ದಾಗ ಜಗಳ ಮಾಡಿದ್ದು ಜಗಜನಿತ. ಮಣಿವಣ್ಣನ್ ಒಂದು ರೀತಿ ಅಜಾತಶತ್ರು. ಅಂಥದರಲ್ಲಿ ಅವರ ಜೊತೆ ಜಗಳ ಮಾಡಿದರು.
    7. ಡಿಕೆ ರವಿ ತೀರಿದ ಕೆಲ ತಿಂಗಳು ಮುಂಚೆ ಕನ್ನಡದ ಹುಡುಗ, ಐಪಿಎಸ್​ ಎನ್​. ಹರೀಶ್, ಈಕೆಯ ಸಹಪಾಠಿ. ಆತ ಮದ್ವೆ ಆಗಿರಲಿಲ್ಲ. ಆತ, ಈಕೆಗಾಗಿ ಕಾದು ಕಾದು ಆತ್ಮಹತ್ಯೆ ಮಾಡಿಕೊಂಡಿದ್ದು ಎಂದು ಹಲವರು ಹೇಳಿದರೂ, ನಾನು ಅದನ್ನು ನಂಬಲಿಲ್ಲ, ಈಗೂ ನಂಬಿಲ್ಲ.
    8. ಶಾಸಕ ಸಾರಾ ಮಹೇಶ್​, ರೋಹಿಣಿ ಅವರ ಮೇಲೆ ಅನೇಕ ಆಪಾದನೆಗಳನ್ನು ಮಾಡಿದರು. ಈಕೆ ಒಂದನ್ನೂ ಸಾಬೀತು ಮಾಡಲಿಲ್ಲ. ಅದಕ್ಕೆ ಸಂಧಾನಕ್ಕೆ ಹೋದರಾ?
    9. ಮೈಸೂರು ಎಂಪಿ ಪ್ರತಾಪ್ ಸಿಂಹ ಸೇರಿ ಅನೇಕರ ವಿರುದ್ಧ ಈಕೆ ಸಾಬೀತು ಮಾಡಲಾರದ ಆರೋಪಗಳನ್ನು ಮಾಡಿದರು. ಅಂದರೆ, ಪ್ರತಾಪ್ ಸಿಂಹ ಅವರು ಖಾಸಗಿ ಕ್ಲಿನಿಕ್​ಗೆ ಆಮ್ಲಜನಕ ಕೇಳುತ್ತಾ ತಮ್ಮ ಸ್ವಂತ ಲಾಭಕ್ಕೆ ನಿಂತಿದ್ದಾರೆ ಎಂಬ ನಿರಾಧಾರ ಆರೋಪ ಮಾಡಿದರು. ನಿಜ ಇದ್ದಿದ್ದೇ ಆದರೆ ಅದನ್ನು ಯಾಕೆ ಸಾಬಿತು ಮಾಡಲಿಲ್ಲ.
    10. ಹಾಸನದಲ್ಲಿ ತನ್ನನ್ನು ಒಂದು ವರ್ಷದ ಒಳಗೆ ಎತ್ತಂಗಡಿ ಮಾಡಿದ ಸರ್ಕಾರದ ವಿರುದ್ಧ ಕೇಂದ್ರೀಯ ಆಡಳಿತ ನ್ಯಾಯಮಂಡಳಿಯಲ್ಲಿ ದಾವೆ ಹೂಡಿದರು. ಆ ದಾವೆಗೆ ಅರ್ಜಿ ಬರೆದು ಕೊಟ್ಟಿದ್ದೇ ನನ್ನ ಪತಿ ಐಎಎಸ್​ ಮನೀಶ್​ ಮೌದ್ಗಿಲ್. ನನ್ನೆದುರಿಗೆ ಬರೆದು ಆಕೆಗೆ, ಆಕೆಯ ತಂದೆಗೆ ಹಾಗೂ ಲಾಯರ್​ಗೆ ಕಳಿಸಿದ್ದರು. ಆದರೆ ಈಕೆ ಮೈಸೂರು ಡಿಸಿ ಆಗಿ ಹೋದದ್ದು ಹೇಗೆ? ತನಗಿಂತ ಕೇವಲ 29 ದಿನ ಮುಂಚೆ ಮೈಸೂರಿಗೆ ಡಿಸಿ ಎಂದು ವರ್ಗಾವಣೆಯಾಗಿದ್ದ ಕನ್ನಡ ಹುಡುಗ ಶರತ್ ಅವರನ್ನು ಒಕ್ಕಲೆಬ್ಬಿಸಿದ್ದು ನ್ಯಾಯವೇ? ತನ್ನಂತೆ ಪರರು ಎಂಬ ಭಾವನೆ ಇಲ್ಲವೇಕೆ? 29 ದಿನದಲ್ಲಿ ಯಾವುದೇ ಕಳಂಕ, ಆರೋಪ ಇಲ್ಲದ ಶರತ್​​ರನ್ನು ವರ್ಗಾವಣೆ ಮಾಡಿದ್ದು ಈಕೆ ಯಾವ ಉನ್ನತ ಮಟ್ಟದ ಪ್ರಭಾವದಿಂದ?
    11. ಐಎಎಸ್​ ಡಾ. ರವಿಶಂಕರ್​ ಈಕೆಯ ಮೇಲೆ ಪ್ರಾಥಮಿಕ ತನಿಖೆಯಲ್ಲಿ ತಪ್ಪುಮಾಡಿರುವುದು ಸಾಬೀತಾಗಿದೆ. ಮೈಸೂರಿನ ಡಿಸಿ ಮನೆ, ಪಾರಂಪರಿಕ ಕಟ್ಟಡ ಅಂತಾ ಇದ್ದರೂ ಅಲ್ಲಿ ಟೈಲ್ಸ್ ಹಾಕಿದ್ದು, ಸ್ವಿಮ್ಮಿಂಗ್ ಪೂಲ್ ಮಾಡಿದ್ದು, ಮನುಷ್ಯತ್ವ ಇರೋರು ಕೋವಿಡ್​ ಸಮಯದಲ್ಲಿ ಜನ ಸಾಯುತ್ತಿರುವಾಗ ಸ್ವಿಮ್ಮಿಂಗ್ ಪೂಲ್ ಕಟ್ಟಿಸಿಕೊಳ್ತಾರಾ? ರೋಮ್ ಹೊತ್ತಿ ಉರಿಯುತ್ತಿದ್ದಾಗ ಜಾನ್ ಪಿಟೀಲು ಬಾರಿಸುತ್ತಿದ್ದ ಅಂದ ಹಾಗೆ. ಮೇರಿ ಅಂಟೋನೆಟ್ ಎಂಬ ರಾಣಿ, ಜನರು ಬ್ರೆಡ್​ ಇಲ್ಲದೆ ಸಾಯುತ್ತಿದ್ದಾರೆ ಅಂತಾ ಕೇಳಿಸಿಕೊಂಡಾಗ, ಬ್ರೆಡ್​ ಇಲ್ಲದೆ ಇದ್ದರೆ ಏನು, ಜನರು ಕೇಕ್​ ತಿನ್ನಲಿ ಅಂದಳಂತೆ. ಆ ರಾಣಿಯ ನೆನಪಾಯ್ತು.

    12. ಹಿಂದೆ ನನಗೆ ಒಬ್ಬರು whatsapp ಮೆಸೇಜ್ ಮಾಡಿ ತಾವು ರೋಹಿಣಿ ಪರವಾಗಿ ನಡೆಸುವ ಸಾಮಾಜಿಕ ಜಾಲತಾಣ ನಿರ್ವಹಣ ಏಜೆನ್ಸಿ ಒಂದರಲ್ಲಿ ಕೆಲಸ ಮಾಡಿದ್ದು, ಈಗ ಆ ಕೆಲಸ ಬಿಟ್ಟಿದ್ದೇನೆ ಎಂದು ಹೇಳುತ್ತಾ, ಅಲ್ಲಿ ಹೇಗೆ ಈಕೆಯ ಪರವಾಗಿ ಸುದ್ದಿ, ಫೋಟೋಗಳು, ವಿಡಿಯೋಗಳನ್ನು ಸೃಷ್ಟಿ ಮಾಡುತ್ತಾರೆ? ಹೇಗೆ ಈಕೆಯ ವಿರುದ್ಧ ಟ್ರೋಲ್ ಮಾಡುವ ಕಂಟೆಂಟ್​ ಹಾಗೂ ಹ್ಯಾಂಡಲ್​ಗಳು ತಯಾರಾಗುತ್ತವೆ ಎಂಬುದು ಹೇಳಿದ್ದರು. ನಾನು ಅದನ್ನು ಫೇಸ್​ಬುಕ್​ನಲ್ಲಿಯೂ ಹಾಕಿದ್ದೆ.
    13. ಈಕೆಯ ಮೇಲೆ ಅಗ್ಗದ ಬ್ಯಾಗ್​ಗಳನ್ನೂ ಅತಿ ಹೆಚ್ಚು ಬೆಲೆಗೆ ಮಾರಾಟ ಮಾಡಿರುವ ದೂರು ಲೋಕಾಯುಕ್ತದಲ್ಲಿ ದಾಖಲಾಗಿದ್ದು, ಅದರ ತನಿಖೆ ಕೈಗೆತ್ತಿಕೊಳ್ಳಲು ಲೋಕಾಯುಕ್ತ ಈಗಾಗಲೇ ಸರ್ಕಾರಕ್ಕೆ ಬರೆದಿದ್ದರೂ ಸರ್ಕಾರ ಮಟ್ಟದಲ್ಲಿ ಕಾರಣ ಕೊಡದೆ ಆಕೆಯನ್ನು ತನಿಖೆಗೆ ಒಳಪಡಿಸಲು ಅನುಮತಿ ನಿರಾಕರಣೆ ಮಾಡಲಾಗಿದೆ. ಅದರ ಕಾಪಿ ನನ್ನ ಬಳಿ ಇದೆ. ಸಾಮಾನ್ಯವಾಗಿ ಅಧಿಕಾರಿಗಳಿಗೆ ಈ ರೀತಿಯ ಬೆಂಬಲ ಇರುತ್ತದೆಯೇ?
    14.ಈಕೆ ಕೆಲವು ಐಎಎಸ್ ಅಧಿಕಾರಿಗಳಿಗೆ, ಒಂದಲ್ಲ, ಎರಡಲ್ಲ, ಅನೇಕರಿಗೆ ತನ್ನ ಚಿತ್ರಗಳನ್ನು ಕಳಿಸಿರುವ ಹಾಗೂ ಅವರನ್ನು ಉತ್ತೇಜಿಸುವ ಕಾರ್ಯ ಮಾಡಿರುವ ಆಪಾದನೆ ಇದೆ. ಆ ಫೋಟೋಗಳು ಪಿಕ್ಸ್ ಗಳು ನನಗೆ ಸಿಕ್ಕಿವೆ. ಇದು ಖಾಸಗಿ ವಿಷಯ ಆಗುವುದಿಲ್ಲ. ಅಖಿಲ ಭಾರತ ಸೇವಾ ನಡವಳಿಕೆ ನಿಯಮಗಳ ಪ್ರಕಾರ ಹಿರಿಯ ಅಧಿಕಾರಿಗಳು ಈ ರೀತಿಯ ಫೋಟೋ, ಸಂಭಾಷಣೆ ಮಾಡುವುದು ಅಪರಾಧ. ಈ ಆಪಾದನೆಗಳನ್ನು ಸರ್ಕಾರ ತನಿಖೆ ಮಾಡುವುದೇ, ನೋಡಬೇಕಿದೆ. ಏಕೆಂದರೆ ಸತ್ಯಾಸತ್ಯತೆ ಹೊರ ಬರಬೇಕಿದೆ.
    15. ಮೊನ್ನೆ ಇವರ ಭಾವ ಮಧುಸೂಧನ್ ರೆಡ್ಡಿ ಅವರು, ಲಕ್ಕಿ ಅಲಿ ಎಂಬ ಗಾಯಕರ ಜಾಗಕ್ಕೆ 20-30 ಜನ ಕರೆದುಕೊಂಡು ಹೋಗಿ ರೌಡಿಸಂ ಮಾಡಿರುವ ವಿಷಯ ಮಾಧ್ಯಮಗಳಲ್ಲಿ ಬಂತು. ಈಕೆಯು ತನ್ನ ಐಎಎಸ್ ಪ್ರಭಾವ ಬಳಸಿ ದುರುಪಯೋಗ ಮಾಡಿಕೊಂಡು ಇರುವುದಾಗಿ ಲಕ್ಕಿ ಅಲಿ ಆರೋಪ ಮಾಡಿದರು. ವ್ಯಾಜ್ಯದ ಜಮೀನಿಗೆ 20-30 ಜನ ಕರೆದುಕೊಂಡು ಹೋಗಿ ಕಾನೂನು ಕೈಗೆ ತೆಗೆದುಕೊಳ್ಳಬಹುದು? ಈ ರೀತಿಯ ಭಂಡ ಧೈರ್ಯ ಎಲ್ಲಿಂದ ಬರುತ್ತದೆ? ಐಎಎಸ್ ಅಧಿಕಾರದಿಂದ?
    16. ಇವರ ಗಂಡ ಹಾಗೂ ಇವರ ಮಾವನವರು (ಈಗ ತೀರಿ ಹೋಗಿದ್ದಾರಂತೆ) ರಿಯಲ್​ ಎಸ್ಟೇಟ್​ ಬ್ಯುಸಿನೆಸ್ ನಡೆಸುತ್ತಾರೆ. ಅನೇಕ ಬಾರಿ ಸರ್ವೆ ಹಾಗೂ ಭೂ ದಾಖಲೆ ಕಚೇರಿಯ ಮೂಲಕ ತನ್ನ ಕೌಟುಂಬಿಕ ವ್ಯವಹಾರಕ್ಕೆ ಅಗತ್ಯ ಇರುವ ಅನೇಕ ಭೂ ಸಂಬಂಧ ಮಾಹಿತಿ , ಅಂದರೆ, ಒಂದು ಭೂಮಿಯ ಫೋಡಿ, ಇನ್ನೊಂದರ ಬಗ್ಗೆ ಅದು ವ್ಯಾಜ್ಯ ಇರುವ ಭೂಮಿಯೇ ಅಥವಾ ಖರೀದಿಸಲು ಯೋಗ್ಯವೇ ಎಂಬಂತಹ ಮಾಹಿತಿಗಳನ್ನು ತಮ್ಮ ಐಎಎಸ್ ಸ್ಥಾನ ಅಧಿಕಾರದಿಂದ ಪಡೆದು ಕೊಂಡಿರುವ ಮಾಹಿತಿ ದಾಖಲೆ ಸಮೇತ ಇದ್ದು, ಇದರ ಮೇಲೆ ಕ್ರಮ ಆಗುತ್ತದೆಯೇ? ನೋಡಬೇಕು.
    17. ಅನೇಕ ಬಾರಿ ಸರ್ಕಾರ ಅಧಿಕಾರಿಗಳನ್ನು ವರ್ಗಾವಣೆ ಮಾಡಿದಾಗ ಆ ಜಾಗದಲ್ಲಿ ಇದ್ದವರು ಕ್ಯಾಟ್/ಕೋರ್ಟ್​ಗೆ ಹೋಗುವುದು ಸಹಜ. ನಾನು 3 ವರ್ಷ ದೂರದ ಯಾದಗಿರಿಯಲ್ಲಿ ಕೆಲಸ ಮಾಡಿ, ಬೆಂಗಳೂರಿಗೆ ನನಗೆ ವರ್ಗವಾದಾಗ, ಆ ಜಾಗದಲ್ಲಿ ಇದ್ದ ಅಧಿಕಾರಿ ಪವಾರ್, ನನ್ನ ವರ್ಗಾವಣೆ ಪ್ರಶ್ನಿಸಿ ಕ್ಯಾಟ್​ಗೆ ಹೋದರು. ಆದರೆ, ರೋಹಿಣಿ ಸಿಂಧೂರಿಗೆ ಸಾಕ್ಷಾತ್ ಅಡ್ವೊಕೇಟ್ ಜನರಲ್ ಅವರೇ ಬಂದು ವಾದ ಮಾಡಿದರಲ್ಲ, ಮೈಸೂರು ಡಿಸಿ ವರ್ಗಾವಣೆ ವಿಷಯದಲ್ಲಿ, ಆ ಸೌಲಭ್ಯ ನನಗೇಕೆ ಸಿಗಲಿಲ್ಲ? ನನ್ನಂತಹ ಕನ್ನಡಿಗ ಅಧಿಕಾರಿಗಳು ಹೇಗೆ ನಡೆಸಿಕೊಂಡರೂ ಸುಮ್ಮನೆ ಇರ್ತಾರೆ ಅಂತಲೇ? ಸ್ವತಃ ಅಡ್ವೊಕೇಟ್ ಜನರಲ್ ಹಾಜರಾಗಿ ವಾದ ಮಾಡಿದ್ದು ಈಕೆಗಲ್ಲದೆ ಮತ್ಯಾವ ಅಧಿಕಾರಿಗೂ ಈ ಸೌಲಭ್ಯ ಸಿಕ್ಕಿಲ್ಲ. ಯಾಕೆ ಈ ಮಲತಾಯಿ ಧೋರಣೆ?

    18. ಈಕೆ ಪ್ರೊಬೇಷನರಿ ಅಂತ ಇದ್ದಾಗ ಅಲ್ಲಿಯ ಡಿಸಿ ಹಾಗೂ ಅವರ ಪತ್ನಿ ನೆರೆಯ ಜಿಲ್ಲೆಯ ಡಿಸಿ, ಇವರಿಬ್ಬರ ಸಂಸಾರದಲ್ಲಿ ಹುಳಿ ಬಿದ್ದು ಅವರು ಬೇರ್ಪಟ್ಟಿದ್ದಾರೀಗ ಹಾಗೂ ಇದು ಈಕೆಯ ದೆಸೆಯಿಂದ ಎಂಬ ಮಾತು ಅನೇಕರ ಬಾಯಲ್ಲಿ ಕೇಳಿದ್ದೇನೆ.

    19. ಜಾಲಹಳ್ಳಿಯಲ್ಲಿ ಈಕೆಯ ಪತಿಯದ್ದು ಇದ್ದರೂ ಈಕೆಯದೂ ಆಗುತ್ತದೆ.ದೊಡ್ಡ ಮನೆ ಒಂದು ಕಟ್ಟುತ್ತಿದ್ದು, ಐಎಎಸ್ ಅಧಿಕಾರಿ ಸಲ್ಲಿಸಬೇಕಾದ ಸ್ಥಿರ ಆಸ್ತಿ ಹಿಂದಿರುಗಿಸುತ್ತದೆ ಲ್ಲಿ ಈ ಮನೆಯ ಉಲ್ಲೇಖವಿರದೆ ಬೇರೆಲ್ಲಾ ಲಂಗು ಲೊಟ್ಟು ಆಸ್ತಿಯ ಬಗ್ಗೆ ವರದಿ ಕೊಟ್ಟಿದ್ದಾರೆ. ಆ ಮನೆಗೆ ಕೋಟಿಗಟ್ಟಲೆ ಇಟಲಿ ಫರ್ನೀಚರ್, 26 ಲಕ್ಷದ ಜರ್ಮನ್ ಉಪಕರಣಗಳು ಮತ್ತು ಅದನ್ನು ತೆರಿಗೆ ಉಚಿತ ಮಾಡಿಸಿಕೊಳ್ಳುವ ಬಗ್ಗೆ ಚರ್ಚೆ ಇದೆ. 6 ಲಕ್ಷ ಕೇವಲ ಬಾಗಿಲಿಗೆಗೆ ಖರ್ಚ್ ಮಾಡಿರುವ ಬಗ್ಗೆ ಈಕೆ ಮಾಡಿರುವ ಚಾಟ್​ಗಳ ಮಾಹಿತಿ ಸರ್ಕಾರಕ್ಕೆ ಸಿಕ್ಕಿದೆ. ಇದರ ಮೇಲೆ ಕೂಲಂಕುಷ ತನಿಖೆ ಆಗುವುದೇ ನೋಡಬೇಕಿದೆ.

    ಇಷ್ಟೆಲ್ಲಾ ಆದ್ರೂ ಯಾರು ಪ್ರತಿ ಬಾರಿ ಈಕೆಯನ್ನು ತನಿಖೆಗೂ ಒಳಪಡಿಸದೇ ಬಚಾವ್ ಮಾಡುತ್ತಾ ಇರುವುದು. ಈಕೆ ಕೆಮ್ಮಿದ್ದೂ ಕ್ಯಾಕರಿಸಿದ್ದೂ ತಮ್ಮ TRP ಗೋಸ್ಕರ ಹಾಕುವ ಮೀಡಿಯಾಗಳೇ ಈಕೆಯನ್ನು ಹೀರೋ/ಹೀರೋಯಿನ್ ಮಾಡುವ ಮೂಲಕ ಈಕೆ ಯಾವುದೇ ಶಿಕ್ಷೆಯಿಲ್ಲದೆ ಪ್ರತಿ ಬಾರಿ ಬಚಾವ್ ಆಗಿರುವುದೇ? ಅಥವಾ ಕಿಂದರಿ ಜೋಗಿ ಮಾಡಿದ ರೀತಿಯಲ್ಲಿ ಸರ್ಕಾರದಲ್ಲಿ ಇರುವ ಪ್ರಭಾವಿಗಳು ಕಿಂದರಿ ಜೋಗಿಯ ಪಾಶಕ್ಕೆ ಸಿಲುಕಿದರೆ?

    ಮಂಡ್ಯದ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ಜತೆ ಸೊಂಟ ಬಳುಕಿಸಿದ ಪ್ರಾಧ್ಯಾಪಕ! ರೀಲ್ಸ್ ವೀಡಿಯೋ ವೈರಲ್

    ಮದ್ವೆ ಮಾಡಿಕೊಳ್ಳುವ ಬಯಕೆ ವ್ಯಕ್ತಪಡಿಸಿದ ಪುತ್ರನನ್ನು ಹೊಡೆದು ಕೊಂದ ತಂದೆ-ತಾಯಿ!

    ಲಿವ್ ಇನ್ ಸಂಗಾತಿ ಕೊಂದು ಶವ ಫ್ರಿಜ್​ನಲ್ಲಿಟ್ಟ ಕೇಸ್: ಆರೋಪಿಗೆ ಕಾನ್​​ಸ್ಟೇಬಲ್​ ನೆರವು, ಸ್ಫೋಟಕ ಮಾಹಿತಿ ಬಯಲು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts