ನಗರಕ್ಕೆ ಉಪರಾಷ್ಟ್ರಪತಿ ಆಗಮನ

ಮೈಸೂರು: ಸುತ್ತೂರು ಮಠದ ಕಾರ್ಯಕ್ರಮದಲ್ಲಿ ಭಾಗವಹಿಸಲು ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಸೋಮವಾರ ಸಂಜೆ ಮೈಸೂರಿನ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ, ಜಿಲ್ಲಾ ಪಂಚಾಯಿತಿ ನಯೀಮಾ ಸುಲ್ತಾನ್, ಮೇಯರ್ ಭಾಗ್ಯವತಿ, ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಹಾಗೂ ಜಿಲ್ಲೆಯ ಹಿರಿಯ ಅಧಿಕಾರಿಗಳು ಸ್ವಾಗತಿಸಿದರು.
ನಂಜನಗೂಡು ತಾಲೂಕಿನ ಸುತ್ತೂರಿನಲ್ಲಿ ಆ.28ರಂದು ಬೆಳಗ್ಗೆ 10ಕ್ಕೆ ನಡೆಯುವ ಡಾ.ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳ 103ನೇ ಜಯಂತಿ ಮಹೋತ್ಸವ ಮತ್ತು ಶ್ರೀ ಚನ್ನವೀರ ದೇಶಿಕೇಂದ್ರ ಗುರುಕುಲ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು.