More

    ಬೆಳಗಾವಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 10,560ಕ್ಕೆ ಏರಿಕೆ

    ಬೆಳಗಾವಿ: ಜಿಲ್ಲೆಯಲ್ಲಿ ಕರೊನಾ ಅಟ್ಟಹಾಸ ಎಗ್ಗಿಲ್ಲದೇ ಮುಂದುವರಿದಿದೆ. ಮಂಗಳವಾರ ಮತ್ತೆ 298 ಜನರಲ್ಲಿ ಕರೊನಾ ಸೋಂಕು ದೃಢವಾಗಿದೆ. ಸೋಂಕಿತರ ಸಂಖ್ಯೆ 10,560ಕ್ಕೆ ಏರಿಕೆಯಾಗಿದೆ. ಗೋಕಾಕ ತಾಲೂಕಿನ 50 ವರ್ಷದ ಮಹಿಳೆ ಹಾಗೂ ಬೆಳಗಾವಿ ತಾಲೂಕಿನ 56 ವರ್ಷದ ಪುರುಷ ಕರೊನಾದಿಂದ ಮೃತಪಟ್ಟಿದ್ದಾರೆ. ವೈರಸ್‌ಗೆ ಬಲಿಯಾದವರ ಸಂಖ್ಯೆ 163ಕ್ಕೆ ಏರಿಕೆಯಾಗಿದೆ.

    ಬೆಳಗಾವಿ ನಗರ ಮತ್ತು ತಾಲೂಕಿನಲ್ಲಿ 87, ಬೈಲಹೊಂಗಲ ಮತ್ತು ಚಿಕ್ಕೋಡಿ ತಾಲೂಕಿನಲ್ಲಿ ತಲಾ 39, ಗೋಕಾಕ 28, ರಾಯಬಾಗ 27, ಅಥಣಿ 20, ಸವದತ್ತಿ ಹುಕ್ಕೇರಿ ತಲಾ 18, ರಾಮದುರ್ಗ 12, ಖಾನಾಪುರ ತಾಲೂಕಿನಲ್ಲಿ 7, ಬಾಗಲಕೋಟೆ ಜಿಲ್ಲೆ ವ್ಯಾಪ್ತಿಯ 2, ಹುಬ್ಬಳಿ ವ್ಯಾಪ್ತಿಯ ಓರ್ವನಿಗೆ ಕರೊನಾ ಸೋಂಕು ದೃಢವಾಗಿದೆ.

    ಕರೊನಾ ಸೋಂಕು ತಗುಲಿದ್ದ 181 ಜನರು ಸಂಪೂರ್ಣ ಗುಣಮುಖರಾಗಿದ್ದು, ಮಂಗಳವಾರ ಜಿಲ್ಲಾಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಟ್ಟು ಬಿಡುಗಡೆಯಾದವರ ಸಂಖ್ಯೆ 6,182 ಏರಿಕೆಯಾಗಿದೆ. 4,215 ಕರೊನಾ ಸಕ್ರೀಯ ಪ್ರಕರಣಗಳಿವೆ. 2,249 ಶಂಕಿತರ ಗಂಟಲು ದ್ರವದ ಪರೀಕ್ಷಾ ವರದಿ ಬರುವುದು ಬಾಕಿ ಇದೆ ಎಂದು ಜಿಲ್ಲಾ ಆರೋಗ್ಯ ಇಲಾಖೆ ಪ್ರಕಟಣೆ ತಿಳಿಸಿದೆ.

    ಕೋವಿಡ್-19 ನಿರ್ವಹಣೆ ಮಾಹಿತಿ ವೆಬ್‌ಸೈಟ್‌ಗೆ: ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ (ಬಿಮ್ಸ್)ನಲ್ಲಿ ಕೋವಿಡ್-19 ನಿರ್ವಹಣೆ ಕುರಿತು ಆಸ್ಪತ್ರೆಯಲ್ಲಿ ಲಭ್ಯತೆ ಇರುವ ಹಾಸಿಗೆಗಳ ವಿವರ ಪ್ರತಿದಿನ ಬೆಳಗ್ಗೆ 10ಗಂಟೆಗೆ ಹಾಗೂ ಸಂಜೆ 5 ಗಂಟೆಗೆ ವೆಬ್‌ಸೈಟ್ ನಲ್ಲಿ ಪ್ರಕಟಿಸಲಾಗುತ್ತಿದೆ. ಸಾರ್ವಜನಿಕರು ಮಾಹಿತಿಯನ್ನು ಪಡೆದುಕೊಳ್ಳಬಹುದು ಎಂದು ಬಿಮ್ಸ್ ನಿರ್ದೇಶಕ ಡಾ. ವಿನಯ ದಾಸ್ತಿಕೊಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts