More

    ನಿರ್ಮಲಾನಂದ ಶ್ರೀಗಳ ಫೋನ್​ ಟ್ಯಾಪ್​ ಮಾಡಿಸಿದ್ದು ಎಚ್.ಡಿ.ಕೆ: ಸಚಿವ ಚೆಲುವರಾಯಸ್ವಾಮಿ ಆರೋಪ

    ಮಂಡ್ಯ: ರಾಜ್ಯದಲ್ಲಿ ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಅಭ್ಯರ್ಥಿಗಳು ಹಾಗೂ ರಾಜಕೀಯ ಪಕ್ಷಗಳ ನಾಯಕರು ಮತಬೇಟೆಯಲ್ಲಿ ತೊಡಗಿದ್ದಾರೆ. ಚುನಾವಣೆ ಸಮಯದಲ್ಲಿ ರಾಜಕೀಯ ಪಕ್ಷಗಳ ನಾಯಕರು ಆರೋಪ-ಪ್ರತ್ಯಾರೋಪ ಮಾಡುವುದು ಸಹಜ ಇದೀಗ ಅದಕ್ಕೆ ಪೂರಕವೆಂಬಂತೆ ಕೃಷಿ ಸಚಿವ ಚೆಲುವರಾಯಸ್ವಾಮಿ ಮಾಜಿ ಸಿಎಂ ಎಚ್​.ಡಿ. ಕುಮಾರಸ್ವಾಮಿ ವಿರುದ್ಧ ಫೋನ್ ಟ್ಯಾಪಿಂಗ್​ ಆರೋಪ ಮಾಡಿದ್ದಾರೆ.

    ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಈ ಕುರಿತು ಮಾತನಾಡಿದ ಚೆಲುವರಾಯಸ್ವಾಮಿ 2019ರ ಲೋಕಸಭೆ ಚುನಾವಣೆ ಸಮಯದಲ್ಲಿ ನಿರ್ಮಲಾನಂದ ಶ್ರೀಗಳ ಪೋನ್ ಟ್ಯಾಪಿಂಗ್ ಮಾಡಿಸಿದ್ದು ಯಾರು. ಮಾನ್ಯ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿದ್ದ ಸಮಯದಲ್ಲಿ ಶ್ರೀಗಳ ಫೋನ್​ ಟ್ಯಾಪಿಂಗ್​ ಮಾಡಲಾಗಿತ್ತು. ಧರ್ಮಪೀಠಕ್ಕೆ ಇದಕ್ಕಿಂತ ಅಗೌರವ ಇನ್ನೊಂದಿಲ್ಲ ಎಂದು ಹೇಳಿದ್ದಾರೆ.

    ಇದನ್ನೂ ಓದಿ: ಅಬಕಾರಿ ನೀತಿ ಹಗರಣ; ಬಿಆರ್​ಎಸ್​ ನಾಯಕಿ ಕವಿತಾರನ್ನು ಬಂಧಿಸಿದ ಸಿಬಿಐ

    ಪ್ರಸ್ತುತ ವಾತಾವರಣವನ್ನು ನೋಡಿದರೆ ಬಿಜೆಪಿ ಹಾಗೂ ಜೆಡಿಎಸ್​ನ ಅನೇಕ ನಾಯಕರು ಕಾಂಗ್ರೆಸ್​ ಸೇರುತ್ತಿದ್ದಾರೆ. ಇದನ್ನು ನೋಡಿದರೆ ಕಾಂಗ್ರೆಸ್​ ಪರ ರೆಸ್ಪಾನ್ಸ್​ ಚೆನ್ನಾಗಿದೆ. ನಮ್ಮ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವಂತೆ ಮೈತ್ರಿ ನಾಯಕರು ಸುಪ್ರೀಂ ಕೋರ್ಟ್​ ಮೊರೆ ಹೋಗಿದ್ದಾರೆ. ರೈತ ವಿರೋಧಿ ನೀತಿ ಅನುಸರಿಸುವ ಮೈತ್ರಿಗೆ ಜನರು ಮತ ನೀಡಲ್ಲ ಎಂದು ಹೇಳುತ್ತಿದ್ದಾರೆ. ಮಂಡ್ಯದಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಸ್ಟಾರ್​ ಚಂದ್ರು (ವೆಂಕಟರಮಣೇಗೌಡ) ಗೆಲುವು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ಮೈತ್ರಿ ನಾಯಕರು ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿದ ಕುರಿತು ಪ್ರತಿಕ್ರಿಯಿಸಿ, ಚುನಾವಣೆ ಸಮಯದಲ್ಲಿ ರಾಜಕೀಯ ಪಕ್ಷಗಳ ನಾಯಕರು ಮಠಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆಯುವುದು ಸರ್ವೇ ಸಾಮಾನ್ಯ. ಮೈತ್ರಿ ನಾಯಕರು ಭೇಟಿ ನೀಡುವ ಮೊದಲು ಕಾಂಗ್ರೆಸ್​ ನಿಯೋಗ ಶ್ರೀಗಳ ಬಳಿ ಆಶೀರ್ವಾದ ಪಡೆದಿತ್ತು. ಶ್ರೀಗಳು ದೇವರು ಒಳ್ಳೆಯದು ಮಾಡಲಿ ಎಂದು ಆಶೀರ್ವಾದ ಮಾಡಿರುತ್ತಾರೆ. ನಾವು ಅವರಿಗಿಂತ ಮೊದಲೇ ಹೋಗಿದ್ದೇವೆ ಎಂದು ಹೇಳುವ ಕೃಷಿ ಸಚಿವ ಚೆಲುವರಾಯಸ್ವಾಮಿ ಟಾಂಗ್​ ಕೊಟ್ಟಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts