ಅಮರಾವತಿ: ಕೌಶಲ್ಯಭಿವೃದ್ದಿ ನಿಗಮದಲ್ಲಿನ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದು ಮಾಡುವಂತೆ ಕೋರಿ ಆಂಧ್ರಪ್ರದೇಶ ಮಾಜಿ ಮುಖ್ಯಮಂತ್ರಿ, ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ಧಾರೆ.
ಪ್ರಕರಣ ರದ್ದು ಪಡಿಸುವ ಸಂಬಂಧ ಶುಕ್ರವಾರ ಅರ್ಜಿ ವಿಚಾರಣೆ ನಡೆಸಿದ ಆಂಧ್ರಪ್ರದೇಶ ಹೈಕೋರ್ಟ್ ಚಂದ್ರಬಾಬು ನಾಯ್ಡು ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿತ್ತು. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಚಂದ್ರಬಾಬು ನಾಯ್ಡು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.
ಇದನ್ನೂ ಓದಿ: ವಿಶ್ವಸಂಸ್ಥೆ ಸಭೆಯಲ್ಲಿ ಕಾಶ್ಮೀರ ವಿಚಾರ ಪ್ರಸ್ತಾಪಿಸಿದ ಪಾಕಿಸ್ತಾನ; ಪಿಒಕೆಯನ್ನು ತಕ್ಷಣವೇ ಖಾಲಿ ಮಾಡಿ: ಭಾರತ ತಿರುಗೇಟು
ಜೈಲಿನಲ್ಲೇ ವಿಚಾರಣೆ
ಕೌಶಲ್ಯಭಿವೃದ್ದಿ ನಿಗಮದಲ್ಲಿನ ಬಹುಕೋಟಿ ಅಕ್ರಮಕ್ಕೆ ಸಂಬಂಧಿಸಿದಂತೆ ಆಂದ್ರಪ್ರದೇಶ ಸಿಐಡಿ ಚಂದ್ರಬಾಬು ನಾಯ್ಡು ಅವರನ್ನು ರಾಜಮಂಡ್ರಿಯಲ್ಲಿರುವ ರಾಜಮಹೇಂದ್ರವರಂ ಕೇಂದ್ರ ಕಾರಾಗೃಹದಲ್ಲಿ ವಿಚಾರಣೆಗೆ ಒಳಪಡಿಸಿದೆ. ಬೆಳಗ್ಗೆ 9 ಘಂಟೆಯಿಂದ ಸಂಜೆ 5ರ ವರೆಗೆ ವಿಚಾರಣೆಗೆ ಅವಕಾಶ ಕಲ್ಪಿಸಲಾಗಿದೆ.
ವಿಚಾರಣೆ ವೇಳೆ ಚಂದ್ರಬಾಬು ನಾಯ್ಡು ಪರ ವಕೀಲ ಡಿ. ಶ್ರೀನಿವಾಸ್ ಉಪಸ್ಥಿತರಿರಲಿದ್ದು, ಫೋಟೋ ಹಾಗೂ ವಿಡಿಯೋಗಳನ್ನು ಬಹಿರಂಗಪಡಿಸದಂತೆ ನಿರ್ದೇಶಿಸಲಾಗಿದೆ. 12 ಅಧಿಕಾರಿಗಳನ್ನೊಳಗಂಡ ತನಿಖಾ ತಂಡವು ನಾಯ್ಡು ಅವರ ವಿಚಾರಣೆ ನಡೆಸುತ್ತಿದೆ.