More

    ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯವಲ್ಲ: ಸರ್ಕಾರ

    ಬೆಂಗಳೂರು:    ಖಾಸಗಿ ಶಾಲೆಗಳಿಗೆ ನಾಡಗೀತೆ ಹಾಡುವುದಕ್ಕೆ ವಿನಾಯಿತಿ ನೀಡಿದ ಸರ್ಕಾರ,  ಸರ್ಕಾರಿ ಶಾಲೆಗಳು ಮತ್ತು ಅನುದಾನಿತ ಶಾಲೆಗಳಲ್ಲಿ  ಮಾತ್ರ ನಾಡಗೀತೆ ಹಾಡಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಿವಾದಿತ ಆದೇಶವನ್ನು ಹೊರಡಿಸಿದೆ.

    ಈ ಹಿಂದೆ ಎಲ್ಲಾ ಶಾಲೆಗಳಲ್ಲಿ ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ನಾಡಗೀತೆಯನ್ನು ಹಾಡಬೇಕಿತ್ತು. ಇದಲ್ಲದೆ ಸರ್ಕಾರಿ ಇಲಾಖೆ, ಕಚೇರಿ, ಪ್ರಾಧಿಕಾರಗಳು, ಸರ್ಕಾರದ ಸಂಸ್ಥೆಗಳ ಅಧಿಕೃತ ಕಾರ್ಯಕ್ರಮಗಳನ್ನು ಏರ್ಪಡಿಸುವ ಮುನ್ನ ನಾಡಗೀತೆ ಹಾಡಬೇಕು ಎಂದು ಆದೇಶಿಸಲಾಗಿತ್ತು.

    ರಾಜ್ಯ ಸರ್ಕಾರದ ಸುತ್ತೋಲೆಯಲ್ಲಿ ಏನಿದೆ?

    ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯವಲ್ಲ: ಸರ್ಕಾರ

    ಈ ಹಿಂದಿನ ಆದೇಶವನ್ನು ಬದಲಾವಣೆ ಮಾಡಿದ ರಾಜ್ಯ ಸರ್ಕಾರ ಈಗ ಎಲ್ಲಾ ಶಾಲೆಗಳು ಎಂಬುದರ ಬದಲಾಗಿ ಸರ್ಕಾರಿ ಶಾಲೆಗಳು ಎಂದು ಬದಲಾವಣೆ ಮಾಡಿ ಆದೇಶ ಹೊರಡಿಸಿದೆ.

    ಖಾಸಗಿ ಶಾಲೆಗಳಲ್ಲಿ (Private Schools) ಇನ್ನು ಮುಂದೆ ನಾಡಗೀತೆ ಹಾಡುವುದು ಕಡ್ಡಾಯವಲ್ಲ ಎಂಬರ್ಥದ ಸುತ್ತೋಲೆಯನ್ನು ರಾಜ್ಯ ಸರ್ಕಾರ ಫೆಬ್ರವರಿ 16ರಂದು ಹೊರಡಿಸಿರುವುದು ಇದೀಗ ತಿಳಿದುಬಂದಿದೆ. ರಾಜ್ಯ ಸರ್ಕಾರದ ಈ ನಡೆ ಕೂಡ ವಿರೋಧಕ್ಕೆ ಗುರಿಯಾಗುವ ಸಾಧ್ಯತೆಗಳಿವೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts