

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿರ್ಮಾಣವಾಗಿರುವ ನಾಡಪ್ರಭು ಕೆಂಪೇಗೌಡರ ಬೃಹತ್ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಇಂದು(ಶುಕ್ರವಾರ) ಅನಾವರಣ ಮಾಡಿದರು. ಈ ವೇಳೆ ತೆಗೆದ ಫೋಟೋವೊಂದನ್ನು ಟ್ವಿಟರ್ನಲ್ಲಿ ಶೇರ್ ಮಾಡಿಕೊಂಡಿರುವ ಕಾಂಗ್ರೆಸ್, ರಾಜ್ಯ ಬಿಜೆಪಿ ನಾಯಕರನ್ನು ಟೀಕಿಸಿದೆ.
'ಸ್ವಾಮೀಜಿಗಳಿಗೆ ಅವರದ್ದೇ ಆದ ಗೌರವವಿರುತ್ತದೆ. ಘನತೆ ಇರುತ್ತದೆ. ಅವರ ಹೆಗಲ ಮೇಲೆ ಕೈ ಹಾಕುವಷ್ಟು ಆದಿಚುಂಚನಗಿರಿ ಶ್ರೀಗಳು ಆರ್. ಅಶೋಕ್ ಅವರಿಗೆ ಸದರ ಎನಿಸಿದ್ದಾರೆಯೇ? ಇದೇ ರೀತಿ ಮೋದಿ ಹೆಗಲಿಗೆ ಕೈ ಹಾಕುವ ಧೈರ್ಯವಿದೆಯೇ? ಧರ್ಮ, ಸಂಸ್ಕೃತಿಯ ಬಗ್ಗೆ ಮಾತಾಡುವ ಕರ್ನಾಟಕ ಬಿಜೆಪಿ ನಾಯಕರಿಗೆ ಕನಿಷ್ಠ ಸಂಸ್ಕಾರದ ಜ್ಞಾನವಿಲ್ಲ' ಎಂದು ಕಾಂಗ್ರೆಸ್ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದೆ.
ಕೆಂಪೇಗೌಡರ ಪ್ರತಿಮೆ ಬಳಿ ಪ್ರಧಾನಿ ನರೇಂದ್ರ ಮೋದಿ, ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ರಾಜ್ಯಪಾಲ ಥಾವರ್ ಚಂದ್ ಗೆಲ್ಹೋಟ್, ಸಿಎಂ ಬಸವರಾಜ ಬೊಮ್ಮಾಯಿ, ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಹಲವರು ಗ್ರೂಪ್ ಫೋಟೋ ತೆಗೆಸಿಕೊಂಡಿದ್ದಾರೆ. ಈ ವೇಳೆ ನಿರ್ಮಲಾನಂದನಾಥ ಶ್ರೀಗಳ ಹೆಗಲ ಮೇಲೆ ಸಚಿವ ಆರ್.ಅಶೋಕ್ ಕೈ ಹಾಕಿದ್ದಾರೆ. ಅಶೋಕ್ರ ಈ ವರ್ತನೆಯನ್ನ ಕಾಂಗ್ರೆಸ್ ಟೀಕಿಸಿದೆ.