More

    ನಡ್ಡಾ ಭೇಟಿ ಮಾಡಿದ್ದರಲ್ಲಿ ಯಾವುದೇ ತಪ್ಪಿಲ್ಲ – ಲಕ್ಷ್ಮಣ ಸವದಿ

    ಬೆಳಗಾವಿ: ಪಕ್ಷ ಸಂಘಟನೆ, ನೀರಾವರಿ ಇಲಾಖೆಯಲ್ಲಿ ಯೋಜನೆಗಳ ಅನುಷ್ಠಾನ, ಅನುದಾನ ಕುರಿತು ಚರ್ಚಿಸಲು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಿದ್ದಾರೆ. ಅದರಲ್ಲಿ ಯಾವುದೇ ತಪ್ಪಿಲ್ಲ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ.

    ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ರಮೇಶ ಜಾರಕಿಹೊಳಿ ಬಿಜೆಪಿ ರಾಜ್ಯಾಧ್ಯಕ್ಷರ ಪದವಿ ಬಯಸಿದರೆ ಅದರಲ್ಲಿ ತಪ್ಪಿಲ್ಲ. ಹುದ್ದೆಗಳಿಗೆ ಆಕಾಂಕ್ಷಿಗಳಿರುವುದು ಸಹಜ. ಈ ವಿಷಯವನ್ನು ದೊಡ್ಡದು ಮಾಡುವುದು ಯಾವುದೇ ರೀತಿಯಲ್ಲೂ ಸರಿಯಲ್ಲ ಎಂದರು.
    ಬೆಳಗಾವಿಯ ಸಪ್ತನದಿಗಳ ಜಲಾನಯನ ಪ್ರದೇಶದಲ್ಲಿ ಹೆಚ್ಚಿನ ಮಳೆ ಆಗುತ್ತಿದೆ. ಈವರೆಗೆ ಕೃಷ್ಣಾ ನದಿಗೆ 1.9 ಲಕ್ಷ ಕ್ಯೂಸೆಕ್ ನೀರು ಹರಿದು ಬರುತ್ತಿದೆ.

    ಕೃಷ್ಣಾ ನದಿಯ ಒಳಹರಿವು 3 ಲಕ್ಷ ಕ್ಯೂಸೆಕ್ ಆದರೆ ಮಾತ್ರ ನದಿ ಪಾತ್ರದಲ್ಲಿ ಪ್ರವಾಹದ ಆತಂಕವಿರುತ್ತದೆ. ಪ್ರವಾಹ ಪರಿಸ್ಥಿತಿ ನಿಯಂತ್ರಿಸಲು ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದರು.

    ಸುರಕ್ಷಿತ ಸ್ಥಳಕ್ಕೆ ಜನರ ಸ್ಥಳಾಂತರ: ನದಿ ತಟದಲ್ಲಿರುವ ಗ್ರಾಮಗಳಲ್ಲಿ ನದಿಗಳ ಪ್ರವಾಹ ಹೆಚ್ಚಾಗುತ್ತಿರುವ ಕುರಿತು ಡಂಗೂರ ಸಾರಿ ಜಾಗೃತಿ ಮೂಡಿಸಲಾಗುತ್ತಿದೆ. ಕೆಲ ಗ್ರಾಮಗಳಲ್ಲಿನ ಜನರನ್ನು ಮುಂಜಾಗ್ರತ ಕ್ರಮವಾಗಿ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗುತ್ತಿದೆ. ಬೆಳೆ, ಮನೆ ಹಾನಿ ಕುರಿತು ಸರ್ಕಾರಕ್ಕೆ ವರದಿ ಸಲ್ಲಿಸಿದ ಬಳಿಕ ಪರಿಹಾರ ನೀಡಲಾಗುವುದು ಎಂದು ಸವದಿ ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts