ಬೆಂಗಳೂರು: ವಿಶ್ರಾಂತ ನ್ಯಾಯಮೂರ್ತಿ ಎಸ್.ಆರ್. ನಾಯಕ್ (80) ಭಾನುವಾರ ಮಧ್ಯಾಹ್ನ 2.18 ಕ್ಕೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮೃತರು ಛತ್ತೀಸ್‌ಗಢದ ಮುಖ್ಯ ನ್ಯಾಯಮೂರ್ತಿಗಳಾಗಿ ಸೇವೆ ಸಲ್ಲಿಸಿದ್ದು, ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ, ಕರ್ನಾಟಕ ರಾಜ್ಯ ಕಾನೂನು ಆಯೋಗದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.

ಪತ್ನಿ ಶಾಲಿನಿ ಎಸ್ ನಾಯಕ್, ಪುತ್ರ ಡಾ. ರಾಹುಲ್ ಎನ್.ಎಸ್, ಪುತ್ರಿ ನಿಶಾ ಗಾಂವ್ಕರ್ ಹಾಗೂ ನಾಲ್ವರು ಮೊಮ್ಮಕ್ಕಳು ಮತ್ತು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಶ್ರೀಯುತರಿಗೆ ನಾಡೋಜ, ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ವಿವಿಧ ಗೌರವ ಪ್ರಶಸ್ತಿಗಳು ಬಂದಿದ್ದವು.
ಇಂದು (ಸೋಮವಾರ) ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನಂ.399, 4ನೇ ಅಡ್ಡರಸ್ತೆ, 2ನೇ ಹಂತ, ಆರ್‌ಎಂವಿ 2ನೇ ಸ್ಟೇಜ್ ಬೆಂಗಳೂರಿನ ನಿವಾಸದಲ್ಲಿ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ಇರಿಸಲಾಗುವುದು.
ಸಂಜೆ 4 ಗಂಟೆಗೆ ಹೆಬ್ಬಾಳದ ಚಿತಾಗಾರದಲ್ಲಿ ಅಂತಿಮ ವಿಧಿವಿಧಾನಗಳು ನಡೆಯಲಿವೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.