

ಗಂಗೊಳ್ಳಿ: ಗುಜ್ಜಾಡಿ ಗ್ರಾಮದ ಬೆಣ್ಗೆರೆ ಶ್ರೀ ನಾಗ ದೇವಸ್ಥಾನದಲ್ಲಿ ನಾಗಮಂಡಲೋತ್ಸವ ಸುವರ್ಣ ಮಹೋತ್ಸವ ಪ್ರಯುಕ್ತ ಮಾ.31ರವರೆಗೆ ನಡೆಯಲಿರುವ ಶ್ರೀ ನಾಗದೇವರ ಜೀರ್ಣಾಷ್ಟಬಂಧ ಪುರಃಸರ ಪುನಃಪ್ರತಿಷ್ಠಾಪನಾ ಮಹೋತ್ಸವ, ಬ್ರಹ್ಮಕಲಶೋತ್ಸವ ಮತ್ತು ಅಷ್ಟ ಪವಿತ್ರ ನಾಗಮಂಡಲೋತ್ಸವದ ಧಾರ್ಮಿಕ ವಿಧಿವಿಧಾನ ಮಂಗಳವಾರ ನಡೆಯಿತು.
ಬೆಳಗ್ಗೆ ಗುರುಗಣಪತಿ ಪೂಜೆ, ಪ್ರಾಸಾದ ಶುದ್ಧಿ, ರಾಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಪೂಜಾ ಬಲಿ, ಬಿಂಬ ಜಲಾಧಿವಾಸ, ನೇತ್ರೋನ್ಮಿಲನ, ಧಾನ್ಯಾಧಿವಾಸ ಪೂಜೆ, ಪ್ರತಿಷ್ಠಾಧಿವಾಸ ಹೋಮ, ಶಯ್ಯಕಲ್ಪನ, ಅಷ್ಟೋತ್ತರ ಶತ ಪರಿಕಲಶ್ಯೈ ಸಹ ಬ್ರಹ್ಮಕಲಶ ಸ್ಥಾಪನೆ ಮತ್ತಿತರ ಧಾರ್ಮಿಕ ಕಾರ್ಯಕ್ರಮ ಪ್ರಧಾನ ತಂತ್ರಿ ಬಲರಾಮ ಸೋಮಯಾಜಿ ಕೋಟ ಹಾಗೂ ಪ್ರಧಾನ ಪುರೋಹಿತ ರಾಘವೇಂದ್ರ ಅಡಿಗ ನಾಯಕವಾಡಿ ಮತ್ತು ವೈದಿಕರಿಂದ ನೆರವೇರಿತು.
ದೇವಸ್ಥಾನ ಅರ್ಚಕ ಉಮೇಶ ಎಲ್.ಮೇಸ್ತ, ಕಾರ್ಯದರ್ಶಿ ಶ್ರೀಧರ ಪಿ.ಮೇಸ್ತ, ಸುವರ್ಣ ಮಹೋತ್ಸವ ಸಮಿತಿ ಅಧ್ಯಕ್ಷ ಗಣಪತಿ ವಿ.ಮೇಸ್ತ, ಕಾರ್ಯದರ್ಶಿ ರಾಘವೇಂದ್ರ ವಿ.ಮೇಸ್ತ, ದೇವಸ್ಥಾನ ಸೇವಾ ಸಮಿತಿ ಸದಸ್ಯರು, ಸುವರ್ಣ ಮಹೋತ್ಸವ ಸಮಿತಿ ಸದಸ್ಯರು, ಮಹಿಳ ಮಂಡಳಿ ಸದಸ್ಯರು ಮೊದಲಾದವರು ಉಪಸ್ಥಿತರಿದ್ದರು.