ನಾಗಮಂಗಲದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ

* 8 ಯುವಕರು, ನಾಲ್ವರು ಪೊಲೀಸರಿಗೆ ಪೆಟ್ಟು
*ಗಣಪತಿ ಮೆರವಣಿಗೆಗೆ ಅಡ್ಡಿ ಹಿನ್ನೆಲೆ

ನಾಗಮಂಗಲ : ಪಟ್ಟಣದ ಬದ್ರಿಕೊಪ್ಪಲಿನ ಗಣೇಶ ಮೂರ್ತಿ ವಿಸರ್ಜನೆ ಅಂಗವಾಗಿ ಪಟ್ಟಣದ ಪ್ರಮುಖ ಬೀದಿಯಲ್ಲಿ
ಮೆರವಣಿಗೆ ತೆರಳುತ್ತಿದ್ದ ಸಂದರ್ಭ ಎರಡು ಕೋಮಿನ ನಡುವೆ ಮಾರಾಮಾರಿ ನಡೆದಿದೆ. ಪ್ರತಿ ವರ್ಷದ ಪದ್ಧತಿಯಂತೆ ಬುಧವಾರ ರಾತ್ರಿ ಗಣೇಶ ಮೂರ್ತಿ ಮೆರವಣಿಗೆ ನಡೆಯುತ್ತಿತ್ತು. ಪಟ್ಟಣದ ಕೊಳದಲ್ಲಿ ವಿಸರ್ಜನೆ ಮಾಡುವ ಮುನ್ನ ಎರಡು ಕೋಮಿನ ನಡುವೆ ಮಾತಿಗೆ ಮಾತು ಬೆಳೆಯಿತು. ಮೈಸೂರು ರಸ್ತೆಯಲ್ಲಿರುವ ಮಸೀದಿ ರಸ್ತೆಯಲ್ಲಿ ಮೆರವಣಿಗೆ ಸಾಗಬಾರದು ಎಂದು ಅನ್ಯ ಕೋಮಿನವರು ಪಟ್ಟು ಹಿಡಿದರು.
ಈ ಸಂದರ್ಭ ಹಿಂದು ಸಂಘಟನೆಗಳ ಯುವಕರು ಜೈ ಶ್ರೀರಾಮ್ ಘೋಷಣೆ ಕೂಗಿ ಮೆರವಣಿಗೆ ಮುಂದುವರಿಸಲು ಮುಂದಾದರು. ಗಣೇಶ ಮೂರ್ತಿ ಮೇಲೆ ಚಪ್ಪಲಿ ಎಸೆದರು ಎನ್ನುವ ಸುದ್ದಿ ಹರಡುತ್ತಿದ್ದಂತೆ ಪರಿಸ್ಥಿತಿ ನಿಯಂತ್ರಣ ತಪ್ಪಿತು. ಮೆರವಣಿಗೆಯಲ್ಲಿದ್ದ ಯುವಕರ ಮೇಲೆ ಅನ್ಯ ಕೋಮಿನ ಗುಂಪು ಬಾಟಲಿ, ಕಲ್ಲು ಮತ್ತು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಪರಿಣಾಮ 8 ಜನ ಯುವಕರು ಹಾಗೂ ನಾಲ್ವರು ಪೊಲೀಸರಿಗೆ ತೀವ್ರ ಪೆಟ್ಟಾಯಿತು. ಗಾಯಾಳುಗಳು ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹಲ್ಲೆ ನಡೆಸಿರುವ ಆರೋಪಿಗಳಿಂದ ಲಾಂಗ್ ಸೇರಿದಂತೆ ಮಾರಕಾಸ್ತ್ರಗಳನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಎರಡೂ ಗುಂಪಿನವರ ಗಲಭೆಯಿಂದ ಪಟ್ಟಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಪೊಲೀಸರು ರಾತ್ರಿ 11 ರ ವೇಳೆಯಲ್ಲಿ ಪರಿಸ್ಥಿತಿ ನಿಯಂತ್ರಿಸಲು ಹರಸಾಹಸ ಪಡುತ್ತಿದ್ದರು.
ಠಾಣೆ ಎದುರು ಪ್ರತಿಭಟನೆ: ಗಣೇಶ ಮೆರವಣಿಗೆಗೆ ಅಡ್ಡಿಪಡಿಸಿ, ಭಕ್ತರ ಮೇಲೆ ಹಲ್ಲೆ ನಡೆಸಿದ್ದನ್ನು ಖಂಡಿಸಿ ಹಿಂದು ಸಂಘಟನೆಗಳ ಯುವಕರು ಪಟ್ಟಣ ಪೊಲೀಸ್ ಠಾಣೆ ಎದುರು ಗಣೇಶ ಮೂರ್ತಿ ಇರಿಸಿ ಕೆಲಕಾಲ ಪ್ರತಿಭಟನೆ ನಡೆಸಿದರು. ಪೊಲೀಸರ ಮನವೊಲಿಕೆ ನಂತರ ಗಣೇಶ ಮೂರ್ತಿ ವಿಸರ್ಜಿಸಿದರು.ಜಿಲ್ಲಾ ರಕ್ಷಣಾಧಿಕಾರಿ ಪರಿಸ್ಥಿತಿ ಅವಲೋಕಿಸಲು ಸ್ಥಳಕ್ಕೆ ಭೇಟಿ ನೀಡಿದ್ದರು.

Share This Article

ದೀಪಾವಳಿಗೆ ಮನೆ ಸ್ವಚ್ಛ ಮಾಡ್ತಾ ಇದ್ದೀರಾ? ಮನೆಯಲ್ಲಿ cockroach ಇದ್ರೆ ಹೀಗೆ ಮಾಡಿ…

ಬೆಂಗಳೂರು: ಅನೇಕ ಜನರು ತಮ್ಮ ಮನೆಯಲ್ಲಿ ಜಿರಳೆಗಳ ( cockroach )  ಸಮಸ್ಯೆಯನ್ನು ಎದುರಿಸುತ್ತಾರೆ. ಅವುಗಳನ್ನು…

Crab Sukka : ಭಾನುವಾರದ ಬಾಡೂಟಕ್ಕೆ ಮಾಡಿ ರುಚಿಯಾದ ಏಡಿ ಸುಕ್ಕ..

ಬೆಂಗಳೂರು: ವಾರದ ಕೊನೆಯಲ್ಲಿ ಮಧ್ಯಾಹ್ನದ ಸಮಯಕ್ಕೆ ರುಚಿಯಾದ ಅಡುಗೆ ಏನಾದರು ಮಾಡುವ ಪ್ಲಾನ್ (Plan)​ ಹಾಕಿಕೊಂಡಿದ್ದೀರಾ?ಆದಿತ್ಯವಾರದಂದು…

ಹಾವು ಕಚ್ಚಿದಾಗ ಮಾಡುವ ಈ ಒಂದು ತಪ್ಪಿನಿಂದ ಪ್ರಾಣ ಹೋಗುತ್ತೆ ಎಚ್ಚರ! ಈ ರೀತಿ ಮಾಡೋದನ್ನು ತಪ್ಪಿಸಿ | Snakes

ಕೊಲ್ಲಂ: ಹಾವುಗಳು ( Snakes ) ಕಚ್ಚಿದ ಸಂದರ್ಭದಲ್ಲಿ ಯಾವ ಹಾವು ಕಚ್ಚಿತ್ತು ಎಂಬುದನ್ನು ತಿಳಿದುಕೊಳ್ಳಲು…