ನಾಗನೂರ ಕೆರೆಯಲ್ಲಿ ಪ್ರತ್ಯಕ್ಷವಾದ 8 ಆನೆಗಳ ಹಿಂಡು: ಅರಣ್ಯ ಪ್ರದೇಶಕ್ಕೆ ಓಡಿಸಲು ಆಗ್ರಹ

blank

ಶಿಗ್ಗಾಂವಿ: ಆಹಾರ ಅರಸಿ ಕಾಡಿನಿಂದ ನಾಡಿಗೆ ಬಂದಿರುವ 8 ಆನೆಗಳ ಹಿಂಡು ತಾಲೂಕಿನ ನಾಗನೂರ ಕೆರೆಯಲ್ಲಿ ಪ್ರತ್ಯಕ್ಷವಾಗಿದ್ದು ಸುತ್ತಲಿನ ಗ್ರಾಮದಲ್ಲಿ ಆತಂಕ ಮೂಡಿಸಿದೆ.
ನಾಗನೂರ ಕೆರೆಯ ನೀರಿನಲ್ಲಿ ಆನೆಗಳ ಹಿಂಡು ಆರಾಮವಾಗಿ ಈಜಾಡಿಕೊಂಡು ನಂತರ ರಸ್ತೆಯ ಅಕ್ಕಪಕ್ಕದಲ್ಲಿ ಬೀಡು ಬಿಟ್ಟಿವೆ. ಭಾನುವಾರ ಬೆಳಗಿನ ಜಾವ ರಸ್ತೆಯಲ್ಲಿ ಹೋಗುತ್ತಿದ್ದ ನಾಗನೂರ ಗ್ರಾಮಸ್ಥರಿಗೆ ಆನೆಗಳು ಕಂಡಿದ್ದು ಕೂಡಲೇ ಅದನ್ನು ಮೊಬೈಲ್​ನಲ್ಲಿ ವೀಡಿಯೊ ಮಾಡಿಕೊಂಡು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದು ರಸ್ತೆಯಲ್ಲಿ ಓಡಾಡುವ ವಾಹನ ಸವಾರರಿಗೆ ಜಾಗೃತಿ ಮೂಡಿಸಿದ್ದಾರೆ. ವಾಹನ ಸವಾರರು ಈ ರಸ್ತೆಯಲ್ಲಿ ಓಡಾಡುವುದಕ್ಕೆ ಹಿಂದೇಟು ಹಾಕುತ್ತಿದ್ದಾರೆ. ಸದ್ಯ ಆನೆಗಳು ಕೆರೆಯ ಸುತ್ತಲಿನ ಪ್ರದೇಶಗಳಲ್ಲಿ ಉಳಿದುಕೊಂಡಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಕೂಡಲೇ ಆನೆಗಳನ್ನು ಅರಣ್ಯ ಪ್ರದೇಶಕ್ಕೆ ಓಡಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Share This Article

ನಿಮ್ಮ ಸಂಪತ್ತು ವೃದ್ಧಿಯಾಗಬೇಕಾ? ಅಕ್ಷಯ ತೃತೀಯದಂದು ಹೀಗೆ ಮಾಡಬೇಕು… Akshaya Tritiya

Akshaya Tritiya: ಅಕ್ಷಯ ತೃತೀಯ ಹಬ್ಬವನ್ನು ಹಿಂದೂಗಳು ಬಹಳ ಪವಿತ್ರವೆಂದು ಪರಿಗಣಿಸುತ್ತಾರೆ. ಈ ಅಕ್ಷಯ ತೃತೀಯ…

ರಾತ್ರಿ ಏನೂ ತಿನ್ನದೆ ಮಲಗುತ್ತಿದ್ದೀರಾ? ಆದರೆ ನೀವು ಖಂಡಿತವಾಗಿಯೂ ಈ ವಿಷಯಗಳನ್ನು ತಿಳಿದುಕೊಳ್ಳಬೇಕು…Health Tips

Health Tips: ಇತ್ತೀಚೆಗೆ, ಅನೇಕ ಜನರು ಸಮಯದ ಅಭಾವ, ಹಸಿವಿನ ಅಭಾವ, ಉದ್ವೇಗ ಸೇರಿದಂತೆ ವಿವಿಧ…

ದಿನಾ ಒಂದು ಮೊಟ್ಟೆ ತಿನ್ನಿರಿ; ದೇಹದ ಸಕಾರಾತ್ಮಕ ಬದಲಾಣೆಗಳನ್ನು ಒಮ್ಮೆ ನೋಡಿ!: | Positive Changes

Positive Changes : ಮೊಟ್ಟೆಗಳನ್ನು ಪೋಷಕಾಂಶಗಳ ಶಕ್ತಿ ಕೇಂದ್ರವೆಂದು ಪರಿಗಣಿಸಲಾಗುತ್ತದೆ. ಇದು ಪ್ರೋಟೀನ್, ಜೀವಸತ್ವಗಳು ಮತ್ತು…