ಬಾಳೆಹೊನ್ನೂರಿನಲ್ಲಿ ಸಂಭ್ರಮದ ನಾಗರ ಪಂಚಮಿ

ಬಾಳೆಹೊನ್ನೂರು: ಹೋಬಳಿಯಾದ್ಯಂತ ಶ್ರಾವಣ ಮಾಸದ ಮೊದಲ ಹಬ್ಬ ನಾಗರ ಪಂಚಮಿಯನ್ನು ಶುಕ್ರವಾರ ಶ್ರದ್ಧಾ. ಭಕ್ತಿಯಿಂದ ಆಚರಿಸಲಾಯಿತು. ಪಂಚಮಿ ಅಂಗವಾಗಿ ನಾಗ ಬನಕ್ಕೆ ತೆರಳಿ ತನಿ ಎರೆದು, ಅರಶಿನ ಹಚ್ಚಿ ವಿಶೇಷ ಪೂಜೆ ಸಲ್ಲಿಸಿದರು. ಪಟ್ಟಣದ ಸುತ್ತಮುತ್ತಲಿನ ಎಲ್ಲಾ ದೇವಾಲಯಗಳ ನಾಗರ ಕಟ್ಟೆಗಳಲ್ಲಿ ನಡೆದ ವಿಶೇಷ ಪೂಜೆಯಲ್ಲಿ ಭಕ್ತರು ಭಾಗವಹಿಸಿ ಪೂಜೆ ಸಲ್ಲಿಸಿದರು.
ನಾಗಬನದ ನಾಗರ ಕಲ್ಲಿಗೆ ವಿಶೇಷ ಅಭಿಷೇಕ, ಪೂಜೆಗಳು ವಿಜೃಂಭಣೆಯಿಂದ ನಡೆದವು. ಪಟ್ಟಣದ ಮಾರ್ಕಾಂಡೇಶ್ವರ ದೇವಸ್ಥಾನದಲ್ಲಿ ಪ್ರಧಾನ ಅರ್ಚಕ ಕೆ.ಎಸ್.ಪ್ರಕಾಶ್‌ಭಟ್ ನೇತೃತ್ವದಲ್ಲಿ 10 ಹೆಚ್ಚು ಅರ್ಚಕರು ನಾಗದೇವರಿಗೆ ಪಂಚಾಮೃತಾಭಿಷೇಕ, ಪುಷ್ಪಾಲಂಕಾರ ಸೇರಿದಂತೆ ವಿವಿಧ ಧಾರ್ಮಿಕ ಕೈಂಕರ್ಯಗಳನ್ನು ನಡೆಸಿದರು.
ಪಟ್ಟಣದ ಬಂಡಿಮಠ ಬಾಲಸುಬ್ರಹ್ಮಣ್ಯ ದೇವಸ್ಥಾನ, ಗಣಪತಿ ದೇವಸ್ಥಾನ, ಮಸೀದಿಕೆರೆ ನಾಗರಕಟ್ಟೆ, ರಂಭಾಪುರಿ ಪೀಠ, ರೇಣುಕಾನಗರದ ಗಣಪತಿ ದೇವಸ್ಥಾನ, ಅಕ್ಷರನಗರ ಗುರಿಕಟ್ಟೆಬೈಲು ಚಾಮುಂಡೇಶ್ವರಿ ದೇಗುಲದ ನಾಗಬನದಲ್ಲಿ ವಿಶೇಷ ಧಾರ್ಮಿಕ ಕೈಂಕರ್ಯಗಳು ನಡೆದವು. ನಾಗರ ಪಂಚಮಿಯೊಂದಿಗೆ ಶ್ರಾವಣ ಮಾಸದ ಹಬ್ಬಗಳಿಗೆ ಚಾಲನೆ ದೊರೆತಿದ್ದು ಇನ್ನು ಒಂದು ತಿಂಗಳಲ್ಲಿ ಸಾಲು ಸಾಲು ಹಬ್ಬಗಳು ಬರಲಿವೆ.

Share This Article

ತೂಕ ಇಳಿಸಿಕೊಳ್ಳಬೇಕಾ? ಸುಮ್ಮನೆ ಈ ಹಣ್ಣು, ಸೊಪ್ಪಿನ ವಾಸನೆಯನ್ನು ಒಮ್ಮೆ ಉಸಿರಾಡಿದ್ರೆ ಸಾಕು

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…

ಮುಂಜಾನೆ ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿದು ನೋಡಿ; ಆರೋಗ್ಯ ಸಮಸ್ಯೆಗೆ ಸಿಗುತ್ತೆ ಪರಿಹಾರ …

 ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…

ಬಿಕ್ಕಳಿಕೆ ಏಕೆ ಬರುತ್ತದೆ? ಕಿರಿಕಿರಿ ಉಂಟುಮಾಡುವ ಅದನ್ನು ನಿಯಂತ್ರಿಸುವುದು ಹೇಗೆ?

 ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…