More

    ಮೊನ್ನೆ ಜಗ್ಗೇಶ್​ಗೆ ಕನ್ನಡ ಪಾಠ ಮಾಡಿದ್ದ ‘ಮೇಷ್ಟ್ರು’, ಇಂದು ಸಚಿವರು-ಸರ್ಕಾರಿ ಅಧಿಕಾರಿಗಳಿಗೂ ಕಿವಿಮಾತು

    ಬೆಂಗಳೂರು: ಇತ್ತೀಚೆಗಷ್ಟೇ ನಟ ಜಗ್ಗೇಶ್​ ಟ್ವೀಟ್​ನಲ್ಲಿನ ವ್ಯಾಕರಣ ದೋಷ ಕುರಿತು ತಿಳಿಹೇಳಿದ್ದ ‘ಮೇಷ್ಟ್ರು’, ಇಂದು ಸಚಿವರು-ಸರ್ಕಾರಿ ಅಧಿಕಾರಿಗಳಿಗೂ ಕಿವಿಮಾತು ಹೇಳಿದ್ದಾರೆ. ಈ ಮೇಷ್ಟ್ರ ಕಿವಿಮಾತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡೆಯೇ ಪ್ರೇರಣೆಯಂತೆ.

    ಅಂದಹಾಗೆ ಸಚಿವರು-ಅಧಿಕಾರಿಗಳಿಗೆ ಈ ಕಿವಿಮಾತು ಹೇಳಿರುವುದು ಕನ್ನಡ ಚಿತ್ರರಂಗದಲ್ಲಿ ‘ಮೇಷ್ಟ್ರು’ ಎಂದೇ ಖ್ಯಾತರಾಗಿರುವ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್. ವಾಸ್ತು ಕಾರಣಕ್ಕೆ ಮುಚ್ಚಲಾಗಿದ್ದ ಮುಖ್ಯಮಂತ್ರಿ ಕಚೇರಿಯ ದ್ವಾರವೊಂದನ್ನು ನಿನ್ನೆ ತೆರೆಸಿ ಅದರ ಮೂಲಕವೇ ಪ್ರವೇಶಿಸಿ ಹೊರಬಂದ ಸಿಎಂ ಸಿದ್ದರಾಮಯ್ಯ ಅವರ ನಡೆಯಿಂದ ಪ್ರೇರಿತರಾಗಿ ಅವರು ಈ ಕಿವಿಮಾತು ಹೇಳಿದ್ದಾರೆ.

    ಇದನ್ನೂ ಓದಿ: ಅನಗತ್ಯವಾಗಿ ಮಹಾಪ್ರಾಣ ಪ್ರಯೋಗಿಸಬೇಡಿ..: ನಟ ಜಗ್ಗೇಶ್​ಗೆ ‘ಮೇಷ್ಟ್ರ’ ಕನ್ನಡ ಪಾಠ!

    ನಿನ್ನೆಯ ಸಿಎಂ ಕಚೇರಿಯ ಘಟನೆಯನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ನಾಗತಿಹಳ್ಳಿ, ‘ಇದೊಂದು ಸಣ್ಣಘಟನೆ ಎಂದು ಪರಿಗಣಿಸಬಾರದು. ಜನ ತಮ್ಮ ಖಾಸಗಿ ನಂಬಿಕೆಗಳನ್ನು ಅವರ ಮನೆಯೊಳಗೆ ಹೇಗಾದರೂ ಆಚರಿಸಿಕೊಳ್ಳಲಿ. ವಿಧಾನಸೌಧದಲ್ಲಿ ಮುಖ್ಯಮಂತ್ರಿಗಳ ವಾಸ್ತು ವಿರೋಧಿ ನಡೆ ಅವರೆಲ್ಲ ಮಂತ್ರಿಗಳಿಗೂ ಅಧಿಕಾರಿಗಳಿಗೂ ಮತ್ತು ಸರ್ಕಾರಿ ಕಛೇರಿಗಳಿಗೂ ಮಾದರಿಯಾಗಲಿ. ಒಳ್ಳೆಯ ಗಾಳಿ, ಬೆಳಕು ಮತ್ತು ಹೃದಯ ನಿಜವಾದ ವಾಸ್ತು. ವಿಜ್ಞಾನದ ಎಲ್ಲ ಬಾಗಿಲುಗಳೂ ತೆರೆಯಲಿ’ ಎಂದು ಹೇಳಿದ್ದಾರೆ.

    ಸ್ಲೀಪ್ ಡೈವೋರ್ಸ್: ಇದು ಗಂಡ-ಹೆಂಡಿರ ಹೊಸ ಟ್ರೆಂಡ್!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts