More

    ಪ್ರಗತಿ ಸ್ಟುಡಿಯೋದ ನಾಗೇಶ್​ ಬಾಬ ಇನ್ನಿಲ್ಲ

    ಬೆಂಗಳೂರು: ಕನ್ನಡದಲ್ಲಿ 350ಕ್ಕೂ ಹೆಚ್ಚು ಚಿತ್ರಗಳಿಗೆ ಸ್ಥಿರ ಛಾಯಾಗ್ರಹಣವಿದ್ದ ಪ್ರಗತಿ ಸ್ಟುಡಿಯೋದ ಮಾಲೀಕರಲ್ಲೊಬ್ಬರಾದ ನಾಗೇಶ್​ ಬಾಬ (82) ಅವರು ಮಂಗಳವಾರ ನಿಧನರಾಗಿದ್ದಾರೆ. ಪತ್ನಿ ಶ್ಯಾಮಲಾ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ.

    ಇದನ್ನೂ ಓದಿ: ಪವನ್ ಕಲ್ಯಾಣ್​ರನ್ನು ಭೇಟಿ ಮಾಡಿದ ಕಿಚ್ಚ ಸುದೀಪ್​

    ಮಂಡ್ಯ ಜಿಲ್ಲೆ ಬೆಳಕವಾಡಿಯವರಾದ ನಾಗೇಶ್​, ಬೆಂಗಳೂರಿನಲ್ಲಿ ಬಿಎಸ್ಸಿ ಪದವಿ ಮುಗಿಸಿ ಕನ್ನಡ ಚಿತ್ರಗಳಲ್ಲಿ ಕೆಲಸ ಮಾಡುವ ನಿಮಿತ್ತ 1956ರಲ್ಲಿ ಮದರಾಸಿಗೆ ತೆರಳಿದರು. ‘ಬೆಟ್ಟದ ಕಳ್ಳ’, ‘ಪ್ರತಿಮಾ’ ಚಿತ್ರಗಳಿಗೆ ಸಹಾಯಕ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ ನಾಗೇಶ್ ಬಾಬ ಅವರು ‘ಕೋಟಿ ಚೆನ್ನಯ’ ತುಳು ಚಿತ್ರಕ್ಕೆ ತಾಂತ್ರಿಕ ನಿರ್ದೇಶಕರಾಗಿ ದುಡಿದರು.

    ‘ತೂಗುದೀಪ’, ‘ನನ್ನ ಕರ್ತವ್ಯ’ ಚಿತ್ರಗಳಿಗೆ ಸಂಭಾಷಣೆ ರಚಿಸಿದ ಅವರು, ‘ಅನಿರೀಕ್ಷಿತ’ (1970) ಅವರು ನಿರ್ಮಿಸಿ, ನಿರ್ದೇಶಿಸಿದ ಸಿನಿಮಾ. ಕೃಷ್ಣಮೂರ್ತಿ ಪುರಾಣಿಕರ ‘ವಸುಂಧರೆ’ ಕೃತಿಯನ್ನು ಆಧರಿಸಿದ ಪ್ರಯೋಗವಿದು. ಚಿತ್ರಕ್ಕೆ ವಿಜಯಭಾಸ್ಕರ್ ಸಂಯೋಜಿಸಿದ ಎರಡು ಟ್ಯೂನ್‌ಗಳಿಗೆ ಪ್ರೇಮಕವಿ ಕೆ.ಎಸ್.ನರಸಿಂಹಸ್ವಾಮಿ ಅವರು ಮದರಾಸಿಗೆ ತೆರಳಿ ಗೀತೆ ರಚಿಸಿಕೊಟ್ಟಿದ್ದು ವಿಶೇಷ.

    ಕನ್ನಡ ಸಿನಿಮಾ ಸ್ಥಿರಚಿತ್ರ ಛಾಯಾಗ್ರಹಣ ವಿಭಾಗದಲ್ಲಿ ದೊಡ್ಡ ಹೆಸರು ಮಾಡಿದ ನಾಗೇಶ್ ಬಾಬ, ಮದರಾಸಿನಲ್ಲಿ ವೆಂಕಟೇಶ್ವರನ್ ಅವರೊಡಗೂಡಿ ‘ತ್ರೀ ಸ್ಟಾರ್ಸ್’ ಸ್ಥಿರಚಿತ್ರ ಛಾಯಾಗ್ರಹಣ ಸಂಸ್ಥೆ ಆರಂಭಿಸಿದರು. ಮುಂದೆ ಬೆಂಗಳೂರಿಗೆ ಮರಳಿದ ನಂತರ 1972ರಲ್ಲಿ ಗಾಂಧಿನಗರದ 6ನೇ ಕ್ರಾಸ್‌ನಲ್ಲಿ ‘ಪ್ರಗತಿ’ ಸ್ಟುಡಿಯೋ ಆರಂಭಿಸಿದರು. ಸಹೋದರ (ಚಿಕ್ಕಪ್ಪನ ಮಗ) ಅಶ್ವತ್ಥ ನಾರಾಯಣ ಅವರು ನಾಗೇಶ್ ಬಾಬರಿಗೆ ಇಲ್ಲಿ ಜೊತೆಯಾದರು.

    ಇದನ್ನೂ ಓದಿ: ಸುಶಾಂತ್​ ಸಾವು: ನಮಗೆ ಮೊದಲೇ ಸತ್ಯಾಂಶ ಗೊತ್ತಿತ್ತು ಎಂದ ಮುಂಬೈ ಪೊಲೀಸ್​

    ಮುಂದೆ ‘ಪ್ರಗತಿ’ ಸ್ಟುಡಿಯೋ ಕನ್ನಡ ಚಿತ್ರರಂಗದ ಇತಿಹಾಸದಲ್ಲಿ ಸ್ಥಾನ ಪಡೆಯಿತು. ಸುಮಾರು 350ಕ್ಕೂ ಹೆಚ್ಚು ಸಿನಿಮಾಗಳಿಗೆ ‘ಪ್ರಗತಿ’ಯ ಸ್ಥಿರಚಿತ್ರ ಛಾಯಾಗ್ರಾಹಣವಿದೆ. 2005ರಲ್ಲಿ ‘ಪ್ರಗತಿ’ ಸ್ಟುಡಿಯೋ ಕಾರ್ಯ ಸ್ಥಗಿತಗೊಳಿಸಿದ ನಂತರ ಅವರು ಚಿತ್ರರಂಗದಿಂದ ದೂರವೇ ಉಳಿದಿದ್ದರು.

    ಪದವಿಪೂರ್ವಕ್ಕೆ ಅಂಜಲಿ ನಾಯಕಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts