ಮಾಜಿ ಸಿಎಂ ಚಂದ್ರಬಾಬು ನಾಯ್ಡು ಬಂಧನ ಖಂಡನೀಯ: ನಟ ಪವನ್​ ಕಲ್ಯಾಣ್​ ಕಿಡಿ

Pawan Naidu
Published on

ಅಮರಾವತಿ: ಬಹುಕೋಟಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮಾಜಿ ಮುಖ್ಯಮಂತ್ರಿ, ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರ ಬಂಧನವನ್ನು ಖಂಡಿಸಿರುವ ತೆಲುಗು ನಟ, ಜನಸೇನಾ ಪಕ್ಷದ ಮುಖ್ಯಸ್ಥ ಪವನ್​ ಕಲ್ಯಾಣ್​ ಇದು ದ್ವೇಷ ರಾಜಕಾರಣದ ಪರಮಾವಧಿ ಎಂದು ಕಿಡಿಕಾರಿದ್ದಾರೆ.

ಈ ಕುರಿತು ಮಾತನಾಡಿದ ಪವನ್​ ಕಲ್ಯಾಣ್​ ಅವರನ್ನು ಬಂಧಿಸಿರುವ ರೀತಿ ಸರಿಯಿಲ್ಲ ಅವರನ್ನು ಬಂಧನವನ್ನು ನಾವು ಖಂಡಿಸುತ್ತೇವೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಈ ರೀತಿಯ ಘಟನೆಗಳು ನಡೆಯುವುದು ದುರದೃಷ್ಟಕರ ಎಂದು ಹೇಳಿದ್ದಾರೆ.

ಆಂಧ್ರಪ್ರದೇಶ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಬಂಧನವನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ, ಪ್ರಜಾಪ್ರಭುತ್ವದಲ್ಲಿ ಇಂತಹ ಘಟನೆಗಳು ನಡೆಯುವುದು ದುರದೃಷ್ಟಕರ ಸಂಗತಿ. ಅವರನ್ನು ಬಂಧಿಸಿರುವ ರೀತಿ ನಮಗೆ ತುಂಬಾ ನೋವುಂಟು ಮಾಡಿದೆ. ಇದನ್ನು ನಾವು ಬಹಿರಂಗವಾಗಿಯೇ ವಿರೋಧಿಸುತ್ತೇವೆ. ಸಿಐಡಿ ಅಧಿಕಾರಿಗಳು ಆಡಳಿತ ಪಕ್ಷದ ಕೈಗೊಂಬೆಯಂತೆ ವರ್ತಿಸುತ್ತಿರುವುದು ಖಂಡನೀಯ ಎಂದಿದ್ದಾರೆ.

ಆಂಧ್ರಪ್ರದೇಶ ಕೌಶಲ್ಯಭಿವೃದ್ದಿ ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಅಡಿ ಸಿಐಡಿ ಅಧಿಕಾರಿಗಳು ಚಂದ್ರಬಾಬು ನಾಯ್ಡು ಅವರನ್ನು ಆಂಧ್ರಪ್ರದೇಶದ ನಂದ್ಯಾಲದಲ್ಲಿ ಶನಿವಾರ ಬೆಳಗ್ಗೆ 6 ಘಂಟೆಗೆ ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net