ವಾಲಿಬಾಲ್‌ನಲ್ಲಿ ನೈಜ ಹೆಗ್ಡೆ ಜಿಲ್ಲಾಮಟ್ಟಕ್ಕೆ

naija
ನೈಜ ಹೆಗ್ಡೆ
Published on

ಕಾರ್ಕಳ: ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಕ್ರಿಶ್ಚಿಯನ್ ಪದವಿ ಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ಉಡುಪಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ನೈಜ ಹೆಗ್ಡೆ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಕುಕ್ಕೆಹಳ್ಳಿ ರಾಜೇಶ್ ಹೆಗ್ಡೆ ಹಾಗೂ ಸಂಧ್ಯಾಕುಮಾರಿ ಶೆಟ್ಟಿ ದಂಪತಿ ಪುತ್ರಿಯಾಗಿದ್ದು, ಅಜೆಕಾರು ಪದ್ಮಗೋಪಾಲ ಎಜ್ಯುಕೇಶನ್ ಟ್ರಸ್ಟ್ ಅಧ್ಯಕ್ಷ ಡಾ.ಸುಧಾಕರ ಶೆಟ್ಟಿ, ಪ್ರಾಂಶುಪಾಲರು ಇವರನ್ನು ಅಭಿನಂದಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net