ಅಂತರ್ಜಾತಿ ವಧು-ವರರ ಮದುವೆ

Latest News

ಬಿ.ಆರ್.ಅಂಬೇಡ್ಕರ್ ಸಂಘಗಳ ಒಕ್ಕೂಟದಿಂದ ಪ್ರತಿಭಟನೆ

ಚಾಮರಾಜನಗರ: ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ರಾಜ್ಯ ಬಿಜೆಪಿ ಸರ್ಕಾರ ಅಗೌರವ ತೋರಿದೆ ಎಂದು ಆರೋಪಿಸಿ ಚಂದಕವಾಡಿ ಹೋಬಳಿಯ ಡಾ.ಬಿ.ಆರ್.ಅಂಬೇಡ್ಕರ್ ಸಂಘಗಳ ಒಕ್ಕೂಟದ ವತಿಯಿಂದ ಭಾನುವಾರ...

ಪಕ್ಷಾಂತರಿಗಳ ವಿರುದ್ಧ ಆಕ್ರೋಶ

ಮೈಸೂರು: ಪಕ್ಷಾಂತರಿಗಳ ವಿರುದ್ಧ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ನಗರದ ರೈಲ್ವೆ ನಿಲ್ದಾಣದ ಬಳಿ ಭಾನುವಾರ ಪ್ರತಿಭಟನೆ ನಡೆಸಿದರು. ಪಕ್ಷಾಂತರಿಗಳು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು...

ನಗರದಲ್ಲಿ ಪೊರಕೆ ಹಿಡಿದು ಪ್ರತಿಭಟನೆ

Whispers and protests in the city ಚಾಮರಾಜನಗರ: ಅಂಬೇಡ್ಕರ್ ಒಬ್ಬರೇ ಸಂವಿಧಾನ ಬರೆದಿಲ್ಲ ಎಂದು ಶಿಕ್ಷಣ ಇಲಾಖೆಯು...

ಸುಪ್ರೀಂ ಕೋರ್ಟ್​ ನ್ಯಾಯಾಧೀಶ ಎಸ್​​. ಅಬ್ದುಲ್ ನಜೀರ್ ಅವರಿಗೆ Z ಕೆಟಗರಿ ಭದ್ರತೆ

ನವದೆಹಲಿ: ಅಯೋಧ್ಯೆ ರಾಮಜನ್ಮಭೂಮಿ ಪ್ರಕರಣದ ತೀರ್ಪು ನೀಡಿದ ಪೀಠದಲ್ಲಿದ್ದ ನ್ಯಾಯಾಧೀಶ ಎಸ್​​.ಅಬ್ದುಲ್ ನಜೀರ್​ ಅವರಿಗೆ "Z" ಕೆಟಗರಿ ಭದ್ರತೆ ನೀಡಲು ಕೇಂದ್ರ ಸರ್ಕಾರ...

ಸಂಘಗಳಿಗೆ ಸಾಲ ಪ್ರಮಾಣ ಕಡಿತ

ಶೃಂಗೇರಿ: ಕೃಷಿ ಪತ್ತಿನ ಸಹಕಾರ ಸಂಘಗಳಿಂದ ಶೇ.22ರಷ್ಟು ರೈತರು ಸಾಲ ಸೌಲಭ್ಯ ಪಡೆಯುತ್ತಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಈ ದಿಕ್ಕಿನಲ್ಲಿ ಆಲೋಚಿಸಿ...

ನಾಲತವಾಡ: ಪಟ್ಟಣದ ಹಳ್ಳೂರ ಪ್ಯಾಲೇಸ್‌ನಲ್ಲಿ ದುದ್ದಗಿ, ಬರಗುಂಡಿ ಮನೆತನದಿಂದ ವಿನೂತನ ಕಲ್ಯಾಣ ಮಹೋತ್ಸವ ನಡೆಯಿತು. ಹಾಲುಮತದ ವಧು ಬಣಜಿಗ ಸಮುದಾಯದ ವರನಿಗೆ ತಾಳಿ ಕಟ್ಟಿದ್ದು 12 ಶತಮಾನದ ಕಲ್ಯಾಣ ಕ್ರಾಂತಿಯ ಧ್ಯೋತಕಕ್ಕೆ ಐದು ಸಾವಿರಕ್ಕೂ ಅಧಿಕ ಜನರು ಸಾಕ್ಷಿಯಾದರು.

ಅಪ್ಪಟ ಬಸವ ಧರ್ಮದಂತೆ ಜರುಗಿದ ಈ ಕಲ್ಯಾಣ ಮಹೋತ್ಸವದಲ್ಲಿ ಇಲಕಲ್ಲದ ಗುರು ಮಹಾಂತ ಸ್ವಾಮೀಜಿ ನೇತೃತ್ವ ವಹಿಸಿ ಮಾತನಾಡಿ, ಹುಡುಗ ಹುಡುಗಿಗೆ ತಾಳಿ ಕಟ್ಟಿದಂತೆ ಹುಡುಗಿಯೂ ಹುಡುಗನಿಗೆ ತಾಳಿ ಕಟ್ಟುತ್ತಾಳೆ. ಇದು ಸಮಾನತೆಯ ಸಂಕೇತ. ಪುರುಷ ಮೇಲು, ಸ್ತ್ರೀ ಕೀಳೆಂಬ ಭಾವನೆ ತೊಲಗಬೇಕು. ನ್ಯಾದಾನ ಮಾಡಕೂಡದು. ಮಗಳನ್ನು ದಾನ ಕೊಡಲು ಅವಳು ವಸ್ತುವಲ್ಲ, ಹಸು, ಎತ್ತು ಕತ್ತೆಯಲ್ಲ ಎಂದು ಆಶೀರ್ವಚನ ನೀಡಿದರು.

ಮಧ್ಯಸ್ಥಗಾರರಿಲ್ಲದ ಈ ಮದುವೆಗೆ ಆರತಕ್ಷತೆ, ಶುಭ ಮುಹೂರ್ತವನ್ನೂ ನಿಗದಿಪಡಿಸಿರಲಿಲ್ಲ. ವಧು-ವರರಿಗೆ ಅಕ್ಷತೆಯ ಬದಲಾಗಿ ಪುಷ್ಪವೃಷ್ಟಿ ಮಾಡಲಾಯಿತು.

ವಿಶ್ವ ಮಹಿಳಾ ದಿನದ ಅಂಗವಾಗಿ ಶತಾಯುಷಿ ಸಂಗಮ್ಮ ದುದ್ದಗಿಯವರ ಶತಮಾನೋತ್ಸವ ನಿಮಿತ್ತ ಚಂದ್ರಶೇಖರ ವಸ್ತ್ರದ ಸಂಪಾದಕತ್ವದಲ್ಲಿ ನಾಡಿನ ಹೆಸರಾಂತ ಕವಿಗಳು ತಾಯಿಯ ಕುರಿತು ರಚಿಸಿದ ‘ಅವ್ವ ನನ್ನವ್ವ’ ಕವನಗಳ ಸಂಕಲನ ಬಿಡುಗಡೆ ಮಾಡಲಾಯಿತು.

ಪ್ರಭುರಾಜ ಜತೆ ಅಂಕಿತಾ ಹಾಗೂ ಅಮಿತ ಜತೆ ಪ್ರಿಯಾ ಅವರು ಶರಣ ಸಮ್ಮತ ಸಮಯದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಮದುವೆ ನಂತರ ಜರುಗಿದ ಕಾರ್ಯಕ್ರಮದಲ್ಲಿ ಖ್ಯಾತ ಅರ್ಥಶಾಸ್ತ್ರಜ್ಞ ಹಂಪಿ ವಿವಿ ಅಭಿವೃದ್ಧಿ ಅಧ್ಯಯನದ ನಿವೃತ್ತ ಮುಖ್ಯಸ್ಥ ಪ್ರೊ. ಟಿ.ಆರ್. ಚಂದ್ರಶೇಖರ ದಂಪತಿ, ಕನ್ನಡ ಸಾರಸ್ವತ ಲೋಕಕ್ಕೆ ನೂರಾರು ಕೃತಿಗಳನ್ನು ನೀಡಿದ ಶರಣ ಸಾಹಿತಿ, ಶಿಕ್ಷಕ ಡಿ.ಎಂ. ಧನ್ನೂರ ಹಾಗೂ ಹಲವಾರು ಪುಸ್ತಕಗಳ ಸಂಪಾದಕರಾದ ಚಂದ್ರಶೇಖರ ವಸ್ತ್ರದ ಹಾಗೂ ಚಿತ್ರದುರ್ಗದ ರುದ್ರಮೂರ್ತಿ ದಂಪತಿಗಳನ್ನು ಸನ್ಮಾನಿಸಲಾಯಿತು.

ಲಿಂಗಸಗೂರಿನ ವಿಜಯ ಮಹಾಂತೇಶ ಮಠದ ಸಿದ್ದಲಿಂಗ ಶ್ರೀಗಳು, ಗುಳೇದಗುಡ್ಡದ ಬಸವರಾಜ ದೇವರು, ಮಹಾಂತ ತೀರ್ಥ, ಸತ್ತಿ ಮಠದ ಬಸವಲಿಂಗ ಶ್ರೀಗಳು, ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಶರಣರು ಇದ್ದರು.

ಅತಿಥಿಗಳಿಗೆ ಸಕಲ ವ್ಯವಸ್ಥೆ
ಎಲ್ಲರಿಗೂ ಊಟದೊಂದಿಗೆ ಎಳನೀರು, ಪಾನಕ, ಮಜ್ಜಿಗೆ, ಕಲ್ಲಂಗಡಿ, ಐಸ್ ಕ್ರೀಂ ವ್ಯವಸ್ಥೆ ಮಾಡಿದ್ದು ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು. ಬೆಂಗಳೂರು ಬಸವ ಕೇಂದ್ರದವರು ವಚನ ಸುಧೆ, ಲಿಂಗಾಯತ ಧರ್ಮ, ಎಂ.ಎಂ. ಕಲಬುರ್ಗಿಯವರ ವಚನ ವರ್ಷ ಪುಸ್ತಕಗಳನ್ನು ಬಂದ ಅತಿಥಿಗಳಿಗೆ ಉಚಿತವಾಗಿ ವಿತರಿಸಲಾಯಿತು.

ಜಾತಿ, ಧರ್ಮದ ಹೆಸರಿನಲ್ಲಿ ಬಡಿದಾಡುವವರು ಇವರನ್ನು ನೋಡಿ ಕಲಿಯಲಿ. ಇದೊಂದು ಸರಳ, ಆದರ್ಶ ವಿವಾಹ ಮಹೋತ್ಸವ.
ಬಸವಮೂರ್ತಿ ಶರಣರು, ಮಾದಾರ ಚನ್ನಯ್ಯ ಗುರುಪೀಠ ಚಿತ್ರದುರ್ಗ

ಜಾತ್ಯತೀತ ನಿಲುವಿನ ಬಸವಧರ್ಮ ಪಾಲನೆಯ ಇಂಥ ಮದುವೆಗಳು ಅಪರೂಪ.
ಪ್ರೊ.ಟಿ.ಆರ್. ಚಂದ್ರಶೇಖರ ಹಂಪಿ ವಿವಿ ಅಭಿವೃದ್ಧಿ ಅಧ್ಯಯನದ ನಿವೃತ್ತ ಮುಖ್ಯಸ್ಥ

- Advertisement -

Stay connected

278,541FansLike
570FollowersFollow
609,000SubscribersSubscribe

ವಿಡಿಯೋ ನ್ಯೂಸ್

VIDEO| ಲೋಕಸಭಾಧ್ಯಕ್ಷ ಓಂ...

ಜೈಪುರ: ಬಾಲಿವುಡ್​ ನಟಿ ರಾಣಿ ಮುಖರ್ಜಿ ಅವರ ಮುಂದಿನ ಚಿತ್ರ ಮರ್ದಾನಿ-2ಗೆ ಬಿಡುಗಡೆ ಮುನ್ನವೇ ವಿರೋಧದ ಕೂಗು ಕೇಳಿಬಂದಿದೆ. ಚಿತ್ರದ ವಿರುದ್ಧ ರಾಜಸ್ಥಾನದ ಕೋಟಾ ನಗರದ ನಿವಾಸಿಗಳು ಲೋಕಸಭಾ ಸ್ಪೀಕರ್​...

VIDEO| ಭಾರಿ ಭದ್ರತೆಯೊಂದಿಗೆ...

ಶಬರಿಮಲೆ: ವಿವಾದದ ನಡುವೆಯೇ ಭಾರಿ ಭದ್ರತೆಯೊಂದಿಗೆ ಅಯ್ಯಪ್ಪ ದೇವಸ್ಥಾನದ ಮುಖ್ಯ ದ್ವಾರವನ್ನು ಶನಿವಾರ ಸಂಜೆ ತೆರೆಯಲಾಯಿತು. ಸುದೀರ್ಘ ಎರಡು ತಿಂಗಳ ಮಂಡಲ-ಮಕರವಿಳಕ್ಕು ಪೂಜೆಗಾಗಿ ದೇವಸ್ಥಾನ ಬಾಗಿಲನ್ನು ಇಂದು ತೆರೆಯಲಾಗಿದೆ. ದೇವಸ್ಥಾನದ ಪ್ರಧಾನ...

VIDEO| ಹಿರಿಯ ಗಾಯಕಿ...

ಬೆಂಗಳೂರು: ಹಿರಿಯ ಗಾಯಕಿ ಲತಾ ಮಂಗೇಶ್ಕರ್ (90) ಅನಾರೋಗ್ಯದಿಂದ ಬಳಲುತ್ತಿದ್ದು ಕಳೆದ ಆರು ದಿನಗಳಿಂದ ಮುಂಬೈನಲ್ಲಿರುವ ಬ್ರೀಚ್​ ಕ್ಯಾಂಡಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ನಡುವೆ ಕಳೆದೆರಡು ದಿನಗಳಿಂದ...

VIDEO: ನೆಟ್ಟಿಗರ ಪ್ರೀತಿಯನ್ನು...

ನವದೆಹಲಿ: ಈ ನಾಲ್ಕು ತಿಂಗಳ ಪುಟಾಣಿ ಕಪ್ಪುಬೆಕ್ಕಿಗೆ ಎರಡು ಮುಖ ! ಅದರ ವಿಲಕ್ಷಣ ರೂಪಕ್ಕೆ ನೆಟ್ಟಿಗರು ಮನಸೋತಿದ್ದಾರೆ. ಎರಡು ಮುಖದ ಬೆಕ್ಕಿನ ಮರಿ ತುಂಬ ಆರೋಗ್ಯಕರವಾಗಿ ಬೆಳೆಯುತ್ತಿದ್ದು ಅದನ್ನು...

VIDEO: ಸುಮ್ಮಸುಮ್ಮನೆ ಟ್ರಾನ್ಸ್​ಫರ್​...

ನವದೆಹಲಿ: ಸರ್ಕಾರಿ ಕೆಲಸದಲ್ಲಿ ಇರುವವರಿಗೆ ವರ್ಗಾವಣೆ ಸಾಮಾನ್ಯ. ಆದರೆ ಕೆಲವು ಸಲ ಮೇಲಧಿಕಾರಿಗಳ ಸರ್ವಾಧಿಕಾರಿ ಧೋರಣೆಯಿಂದ ಅಧೀನ ಅಧಿಕಾರಿಗಳು ಸುಮ್ಮನೆ ವರ್ಗಾವಣೆಯಾಗುತ್ತಾರೆ. ಸಣ್ಣ ತಪ್ಪಿಗೂ ಬೇರೆ ಕಡೆ ವರ್ಗಗೊಳ್ಳಬೇಕಾದ ಪರಿಸ್ಥಿತಿ ಬರುತ್ತದೆ. ಹಾಗೆ ವರ್ಗಾವಣೆಗೊಂಡ...

VIDEO: ಪುನೀತ್ ರಾಜ್​ಕುಮಾರ್​​...

ಬೆಂಗಳೂರು: ಪುನೀತ್​ ರಾಜ್​ಕುಮಾರ್ ಅವರ ಪಿಆರ್​ಕೆ ಸಂಸ್ಥೆಯಲ್ಲಿ ನಿರ್ಮಾಣವಾಗಿರುವ ಮಾಯಾ ಬಜಾರ್​-2016 ಸಿನಿಮಾದ ಟೀಸರ್​ ನಿನ್ನೆ (ನ.15)ರಂದು ಸಂಜೆ 7.30ಕ್ಕೆ ಬಿಡುಗಡೆಯಾಗಿದೆ. 56 ಸೆಕೆಂಡ್​​ಗಳ ಟೀಸರ್​ ಬಿಡುಗಡೆಯಾಗಿದೆ. ನವೆಂಬರ್​ 8, 2016ರಂದು 500 ರೂ.ಹಾಗೂ...

VIDEO| ಆಯುಷ್ಮಾನ್​ ಭವ...

ಬೆಂಗಳೂರು: ಹ್ಯಾಟ್ರಿಕ್​ ಹಿರೋ ಶಿವರಾಜ್​ಕುಮಾರ್​ ಹಾಗೂ ಡಿಂಪಲ್​ ಕ್ವೀನ್​ ರಚಿತಾ ರಾಮ್ ನಟನೆಯ "ಆಯುಷ್ಮಾನ್​ ಭವ" ಚಿತ್ರ ಇಂದು ತೆರೆಕಂಡಿದೆ. ವಿಶೇಷವೆಂದರೆ ಈ ಚಿತ್ರದ ಮೂಲಕ ಸಂಗೀತ ನಿರ್ದೇಶಕ ಗುರುಕಿರಣ್​...

VIDEO| ಐತಿಹಾಸಿಕ ಪಾತ್ರದಲ್ಲಿ...

ಮುಂಬೈ: ಇತ್ತೀಚೆಗೆ ಬಿಡುಗಡೆಯಾದ ಹೌಸ್​ಫುಲ್​-4 ಚಿತ್ರದ ಯಶಸ್ಸಿನಲ್ಲಿ ತೇಲುತ್ತಿರುವ ಬಾಲಿವುಡ್​ ನಟ ಅಕ್ಷಯ್​ ಕುಮಾರ್​ ತಮ್ಮ ಮುಂದಿನ ಐತಿಹಾಸಿಕ ಪ್ರಾಜೆಕ್ಟ್​ಗೆ ತಯಾರಾಗುತ್ತಿದ್ದಾರೆ. ಪೃಥ್ವಿರಾಜ್​ ಹೆಸರಿನ ಇತಿಹಾಸ ಆಧಾರಿತ ಚಿತ್ರದ ಪೂಜಾ...

VIDEO| ಎಸ್ಸೆಸ್ಸೆಲ್ಸಿಯ ಎಲ್ಲ...

ವಡೋದರಾ: ರಿಮೋಟ್​ ಕಂಟ್ರೋಲ್​ನಿಂದ ಆಪರೇಟ್​ ಮಾಡಬಹುದಾದ 35 ದೇಶೀಯ ಹಗುರ ವಿಮಾನ ಮಾದರಿಗಳನ್ನು ತಯಾರಿಸುವ ಮೂಲಕ 17 ವರ್ಷದ ಹುಡುಗನೊಬ್ಬ ಎಲ್ಲರ ಹುಬ್ಬೇರಿಸಿದ್ದಾನೆ. ಪ್ರಿನ್ಸ್​ ಪಂಚಾಲ್ ವಿಮಾನ ಮಾದರಿ ತಯಾರಿಸಿದ ಹುಡುಗ....

ಒಸಮಾ ಬಿನ್​ ಲಾಡೆನ್​,...

ಇಸ್ಲಮಾಬಾದ್​: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ವಿರುದ್ಧ ಹೋರಾಡಲು ಕಾಶ್ಮೀರಿಗಳಿಗೆ ಉಗ್ರ ತರಬೇತಿ ನೀಡಲಾಗುತ್ತಿತ್ತು ಎಂಬುದನ್ನು ಪಾಕಿಸ್ತಾನದ ಮಾಜಿ ಅಧ್ಯಕ್ಷ, ಪಾಕ್​ ಸೇನೆಯ ಮಾಜಿ ಜನರಲ್​ ಫರ್ವೇಜ್​ ಮುಷರಫ್​ ಅವರು ಒಪ್ಪಿಕೊಂಡಿದ್ದಾರೆ....