More

    ಗೋಹತ್ಯೆ ನಿಷೇಧ ಕಾಯ್ದೆ ಪಾಸ್‌ ಹಿನ್ನೆಲೆ, ನಳಿನ್‌ ಗೋಪೂಜೆ

    ಮಂಗಳೂರು: ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಾದ ಹಿನ್ನೆಲೆಯಲ್ಲಿ ಗುರುವಾರ ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗೂಪೂಜೆ ಸಲ್ಲಿಸಿದರು. ಮಂಗಳೂರಿನ ಬಿಜೆಪಿ ಕಚೇರಿ ಮುಂಭಾಗದಲ್ಲಿ ಗೋ ಪೂಜೆ ನೆರವೇರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತೀಯ ಸಂಸ್ಕೃತಿಯಲ್ಲಿ ಗೋಮಾತೆಗೆ ವಿಶೇಷ ಸ್ಥಾನವಿದೆ, ವಿಧಾನಸಭೆಯಲ್ಲಿ ಗೋಹತ್ಯೆ ನಿಷೇಧದ ಮಸೂದೆ ಮಂಡನೆ ಮಾಡಿದೆ, ಇದಕ್ಕಾಗಿ ಯಡಿಯೂರಪ್ಪ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ,ರಾಜ್ಯದಲ್ಲಿ ಗೋ ಸಂಸ್ಕೃತಿ ಉಳಿಸುವುದಕ್ಕೆ ಈ ಮಸೂದೆ ಬಂದಿದೆ ಎಂದರು.

    ಕಾಂಗ್ರೆಸ್ ಈ ಹಿಂದೆ ಮಸೂದೆ ತೆಗೆಯುವಾಗ ಚರ್ಚೆ ಮಾಡಿತ್ತಾ? ಈಗ ಚರ್ಚೆ ಆಗಬೇಕು ಎನ್ನುವುದು ಕೇವಲ ಕಾಂಗ್ರೆಸ್‌ನ ತುಷ್ಠೀಕರಣ ನೀತಿಯ ಭಾಗ, ಸಿದ್ದರಾಮಯ್ಯ ಸೆಗಣಿ ಎತ್ತಿದ್ದೇನೆ ಅಂತಾ ಹೇಳ್ತಾರೆ, ಆದರೆ ಸೆಗಣಿ ಎತ್ತಿದ್ದರಿಂದ ಏನೂ ಆಗೋದಿಲ್ಲ, ಗೋವನ್ನು ಆರಾಧನೆ ಮಾಡಬೇಕು, ಸೆಗಣಿ ಎತ್ತಿ ನಾಟಕ ಮಾಡೋದ್ರಿಂದ ಪ್ರಯೋಜನ ಇಲ್ಲ, ಕಾಂಗ್ರೆಸ್ ರೈತರ ಹೆಸರಿನಲ್ಲಿ ರಾಜಕಾರಣ ಮಾಡುತ್ತಿದೆ ಎಂದರು.

    ಗೋ ಹತ್ಯೆ ನಿಷೇಧ ರೈತರಿಗೆ ಪೂರಕವಾದ ಅಂಶವೇ ಆಗಿದೆ, ಈ ಹಿಂದೆ ತಲ್ವಾರ್ ಹಿಡಿದು ಗೋ ಕಳ್ಳತನಮಾಡಿದವರ ಬಂಧನ ಯಾಕೆ ಕಾಂಗ್ರೆಸ್‌ ಸರ್ಕಾರ ಮಾಡಿಲ್ಲ ಎಂದು ಪ್ರಶ್ನಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts