More

    ಸಮಾಜವಾದಿ ತತ್ವದ ಸಿದ್ಧರಾಮಯ್ಯ ರಬ್ಬರ್ ಸ್ಟ್ಯಾಂಪ್ ಸಿಎಂ ಆಗಿದ್ದಾರೆ: ನಳಿನ್ ಕುಮಾರ್ ಕಟೀಲ್

    ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಎರಡನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದ್ದಾರೆ. ನೂತನ ಮುಖ್ಯಮಂತ್ರಿಗೆ ದೇಶದ ವಿವಿಧ ಗಣ್ಯಾತಿಗಣ್ಯರು ಶುಭಾಶಯ ತಿಳಿಸುತ್ತಿದ್ದಾರೆ. ಆದರೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ ಕಟೀಲ್ ಟ್ವೀಟ್ ಮಾಡಿದ್ದು, ಸಿದ್ದರಾಮಯ್ಯ ಅವರನ್ನು ರಬ್ಬರ್ ಸ್ಟ್ಯಾಂಪ್ ಸಿಎಂ ಆಗಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

    ನಳಿನ್ ಕುಮಾರ್ ಮಾಡಿರುವ ಟ್ವೀಟ್​ನಲ್ಲ ಏನಿದೆ?

    ‘ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಸಂಪುಟದಲ್ಲಿ ಯಾರು ಮಂತ್ರಗಳಾಗಿರಬೇಕು ಎಂದು ನಿರ್ಧರಿಸುವ ಸ್ವಾತಂತ್ರ್ಯ ಕೂಡ ಸಿದ್ದರಾಮಯ್ಯ ಅವರಿಗೆ ಇಲ್ಲ. ಸಮಾಜವಾದಿ ತತ್ವದ ಸಿಎಂ ಸಿದ್ಧರಾಮಯ್ಯನವರು ಮೊದಲ ದಿನವೇ ತಾವು ಕಾಂಗ್ರೆಸ್ ಹೈಕಮಾಂಡಿನ ಕೈಗೊಂಬೆಯಾಗಿದ್ದು, ರಬ್ಬರ್ ಸ್ಟ್ಯಾಂಪ್ ಸಿಎಂ ಆಗಿದ್ದಾರೆ’ ಎಂದು ನಳಿನ್ ಕುಮಾರ್ ಟ್ವೀಟ್ ಮಾಡಿದ್ದಾರೆ. ಸದ್ಯ ನಳಿನ್ ಕುಮಾರ್ ಕಟೀಲ್ ಸಿದ್ದರಾಮಯ್ಯ ಅವರನ್ನು ರಬ್ಬರ್ ಸ್ಟ್ಯಾಂಪ್ ಸಿಎಂ ಎಂದು ಕರೆದಿರುವುದು ಸಾಕಷ್ಟು ಜನರ ಆಕ್ರೋಶಕ್ಕೆ ಕಾರಣವಾಗಿದೆ.

    ಇದನ್ನೂ ಓದಿ: ‘ದಿ ಕೇರಳ ಸ್ಟೋರಿ’ ಸಿನಿಮಾದ ಅದೊಂದು ದೃಶ್ಯದ ಬಗ್ಗೆ ಅಜ್ಜಿಯ ಪ್ರತಿಕ್ರಿಯೆಗೆ ಹೆದರುತ್ತಿದ್ದೆ: ಅದಾ ಶರ್ಮಾ

    ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡ್ತಾರಾ ನಳಿನ್ ಕುಮಾರ್ ಕಟೀಲ್?
    ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹೀನಾಯ ಸೋಲು ಕಂಡಿರುವ ಬೆನ್ನಲ್ಲೇ ನಳಿನ್ ಕುಮಾರ್ ಕಟೀಲ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂಬ ಕೂಗು ಕಾರ್ತಕರ್ತರ ವಲಯದಿಂದಲೇ ಕೇಳಿ ಬಂದಿದೆ. ಹೀಗಾಗಿ ಸಧ್ಯದಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ನಳಿನ್ ಕುಮಾರ್ ಕೆಳಗಿಳಿಯಬಹುದು ಎಂದು ಹೇಳಲಾಗುತ್ತಿದೆ.

    ದೇವರ ಹೆಸರಿನಲ್ಲಿ ಸಿದ್ದರಾಮಯ್ಯ ಪ್ರಮಾಣವಚನ

    ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವಿನೊಂದಿಗೆ ಕಾಂಗ್ರೆಸ್​ ಮತ್ತೊಮ್ಮೆ ರಾಜ್ಯದಲ್ಲಿ ಅಧಿಕಾರದ ಗದ್ದುಗೆ ಏರಿದ್ದು, 24ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದರು. ನಗರದ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ ರಾಜ್ಯಪಾಲ ಥಾವರ ಚಂದ್​ ಗೆಹ್ಲೋಟ್​ ಅವರು ಸಿದ್ದರಾಮಯ್ಯರಿಗೆ ಪ್ರತಿಜ್ಞಾವಿಧಿ ಭೋದಿಸಿದರು. ದೇವರ ಹೆಸರಿನಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದರು.

    ಇದನ್ನೂ ಓದಿ: ತನ್ನನ್ನು ತಾನೇ ವಿವಾಹವಾದ 77ರ ವೃದ್ಧೆ..!

    ನಾಮಫಲಕ ಬದಲಾವಣೆ

    ವಿಧಾನಸೌಧದಲ್ಲಿ ಬಸವರಾಜ ಬೊಮ್ಮಾಯಿ‌ ಹೆಸರಿನದಲ್ಲಿ ಸಿಎಂ ಫಲಕವನ್ನು ತೆಗೆದು ಸಿದ್ದರಾಮಯ್ಯ ಹೆಸರಿನ ನಾಮಫಲಕವನ್ನು ವಿಧಾನಸೌಧ ಸಿಬ್ಬಂದಿ ಅಳವಡಿಸಿದ್ದಾರೆ. ಸಿಎಂ ಕಚೇರಿ ವಿಧಾನಸೌಧದ ಮೂರನೇ ಮಹಡಿಯಲ್ಲಿದೆ. ಕೊಠಡಿ ಸಂಖ್ಯೆ 323 ಆಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts