ಸಿನಿಮಾ

ಸೋಲಿನ ಹೊಣೆ ಹೊರುತ್ತೇನೆ: ನಳಿನ್‍ಕುಮಾರ್ ಕಟೀಲ್

ಬೆಂಗಳೂರು: ರಾಜ್ಯದ ಅಸೆಂಬ್ಲಿ ಚುನಾವಣಾ ಫಲಿತಾಂಶ ಅನಿರೀಕ್ಷಿತವಾಗಿದ್ದು, ಬಿಜೆಪಿಗೆ ಹಿನ್ನಡೆಯಾಗಿದೆ. ರಾಜ್ಯಾಧ್ಯಕ್ಷನಾಗಿ ಸೋಲಿನ ಹೊಣೆ ಹೊರುತ್ತೇನೆ ಎಂದು ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಚೇರಿಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಾ, ರಾಜ್ಯದ ಒಳ್ಳೆಯ ವಿರೋಧ ಪಕ್ಷವಾಗಿ ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಲಿದ್ದೇವೆ ಎಂದು ತಿಳಿಸಿದರು.

ಇದನ್ನೂ ಓದಿ: VIDEO | ಬೆಳಗಾವಿ ಕಾಂಗ್ರೆಸ್ ಅಭ್ಯರ್ಥಿಯ ಗೆಲುವಿನ ಸಂಭ್ರಮಾಚರಣೆ ವೇಳೆ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ

ಆಯ್ಕೆಯಾದ ನಮ್ಮ ಅಭ್ಯರ್ಥಿಗಳಿಗೆ ಅಭಿನಂದನೆಗಳು. ರಾಜ್ಯದ ಮತದಾರರಿಗೆ ಮತ್ತು ವಿಶೇಷವಾಗಿ ನಮ್ಮ ಕಾರ್ಯಕರ್ತರಿಗೆ ಕೃತಜ್ಞತೆಗಳನ್ನು ಸಲ್ಲಿಸುವುದಾಗಿ ತಿಳಿಸಿದ ಅವರು, ಅಹೋರಾತ್ರಿ ದುಡಿದು ಪಕ್ಷಕ್ಕಾಗಿ ಶ್ರಮಿಸಿದ್ದಾರೆ. ಅದಕ್ಕಾಗಿ ಕಾರ್ಯಕರ್ತರು ಮತ್ತು ಮುಖಂಡರಿಗೆ ಧನ್ಯವಾದಗಳು ಎಂದು ತಿಳಿಸಿದರು.

ನಮ್ಮ ಸರಕಾರ ಒಳ್ಳೆಯ ಕಾರ್ಯಗಳನ್ನು ಮಾಡಿದೆ. ಅಭಿವೃದ್ಧಿ ಕಾರ್ಯದಲ್ಲಿ ಯಡಿಯೂರಪ್ಪ- ಬಸವರಾಜ ಬೊಮ್ಮಾಯಿ ಅವರು ಉತ್ತಮ ಸಾಧನೆ ಮಾಡಿದ್ದಾರೆ ಎಂದ ಅವರು, ಹೊಸ ಸರಕಾರದ ಒಳ್ಳೆಯ ಕಾರ್ಯಗಳಿಗೆ ಸಹಕಾರ ನೀಡಲಿದ್ದೇವೆ ಎಂದು ಹೇಳಿದರು.

ಇದನ್ನೂ ಓದಿ: ಇದು ಸಿದ್ಧಾಂತದ ಸೋಲಲ್ಲ, ವೈಯುಕ್ತಿಕ ಸೋಲು: ಸಿ.ಟಿ.ರವಿ

ಹಿನ್ನಡೆಗೆ ಕಾರಣವನ್ನು ವಿಶ್ಲೇಷಣೆ ಮಾಡುತ್ತೇವೆ ಎಂದು ಅವರು ಪ್ರಶ್ನೆಗೆ ಉತ್ತರವಾಗಿ ತಿಳಿಸಿದರು. ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಮುಖ್ಯ ವಕ್ತಾರ ಎಂ.ಜಿ.ಮಹೇಶ್, ರಾಜ್ಯ ಮಾಧ್ಯಮ ಸಂಚಾಲಕ ಕರುಣಾಕರ ಖಾಸಲೆ ಮತ್ತಿತರರು ಇದ್ದರು.

Latest Posts

ಲೈಫ್‌ಸ್ಟೈಲ್