More

    ನಾಲ್ವಡಿ ದಾರಿಯಲ್ಲಿ ಸಾಗೋಣ

    ಮಂಡ್ಯ: ಜಿಲ್ಲೆಯ ವಿವಿಧೆಡೆ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯತ್ಯುತ್ಸವವನ್ನು ಗುರುವಾರ ಆಚರಿಸಲಾಯಿತು.
    ತಮ್ಮ ಕಚೇರಿಯಲ್ಲಿರುವ ನಾಲ್ವಡಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ಮಾತನಾಡಿ, ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಯೊಂದು ಕ್ಷೇತ್ರದ ಅಭಿವೃದ್ಧಿಗೆ ಶ್ರಮ ವಹಿಸಿ ಅದ್ಭುತ ಆಡಳಿತ ನೀಡಿದ್ದಾರೆ. ಹಲವಾರು ಸಾಮಾಜಿಕ ಸಮಸ್ಯೆಗಳಿಗೆ ಪರಿಹಾರ ಕೊಟ್ಟಿದ್ದಾರೆ. ಮೂಲಸೌಕರ್ಯ, ಬ್ಯಾಂಕಿಂಗ್ ವಿಭಾಗ ಮತ್ತು ಡ್ಯಾಂಗಳನ್ನು ನಿರ್ಮಾಣ ಮಾಡಿದ್ದಾರೆ ಎಂದರು.
    ಹಳೇ ಮೈಸೂರು ಭಾಗದ ಮಂಡ್ಯ, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳು ನಾಲ್ವಡಿ ಅವರಿಂದಲೇ ಸಮೃದ್ಧಿ ಕಂಡಿವೆ. ಅವರು ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ನಾವೆಲ್ಲರೂ ಮುಂದೆ ಸಾಗೋಣ ಎಂದು ಹೇಳಿದರು.
    ಜಿಲ್ಲಾ ಪಂಚಾಯಿತಿ ಸಿಇಒ ಕೆ.ಯಾಲಕ್ಕಿಗೌಡ, ಅಪರ ಜಿಲ್ಲಾಧಿಕಾರಿ ಟಿ.ಯೋಗೇಶ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕಾಧಿಕಾರಿ ಟಿ.ಕೆ.ಹರೀಶ್ ಇತರರಿದ್ದರು.
    ಹೊಳಲು ಗ್ರಾಮ: ತಾಲೂಕಿನ ಹೊಳಲು ಗ್ರಾಮದ ಡೇರಿ ವತಿಯಿಂದ ಬಲಮುರಿ ಗಣಪತಿ ದೇವಸ್ಥಾನ ಆವರಣದಲ್ಲಿರುವ ನಾಲ್ವಡಿ ಅವರ ಪ್ರತಿಮೆಗೆ ಮಾಲಾರ್ಪಣೆ ಮೂಲಕ ಜಯಂತ್ಯುತ್ಸವ ಆಚರಿಸಲಾಯಿತು.
    ಡೇರಿ ಅಧ್ಯಕ್ಷ ಟಿ.ಟಿ.ಶ್ರೀನಿವಾಸ್ ಮಾತನಾಡಿ, ಮಂಡ್ಯ ಜಿಲ್ಲೆಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗೂ ಸರ್ ಎಂ.ವಿಶ್ವೇಶ್ವರಯ್ಯ ಎರಡು ಕಣ್ಣುಗಳಿದ್ದಂತೆ. ಪ್ರಸ್ತುತ ನಾವೆಲ್ಲ ಬೆಳೆ ಬೆಳೆದು ಅನ್ನ ತಿನ್ನಲು ಈ ಇಬ್ಬರು ಮಹನೀಯರ ಕೊಡುಗೆ ಅಪಾರ. ಈ ಇಬ್ಬರನ್ನೂ ನೆನೆಯುವುದು ನಮ್ಮ ಕರ್ತವ್ಯ ಎಂದರು.
    ಸಂಘದ ಉಪಾಧ್ಯಕ್ಷ ಗಂಗಾಧರ್, ಮುಖಂಡರಾದ ಯೋಗೇಶ್‌ಕುಮಾರ್, ಜಟ್ಟಿ ಕುಮಾರ್, ವಿಎಸ್‌ಎಸ್‌ಎನ್ ಅಧ್ಯಕ್ಷ ಸಚ್ಚಿದಾನಂದ, ಆರ್‌ಎಪಿಸಿಎಂಎಸ್ ನಿರ್ದೇಶಕ ಶ್ರೀಧರ್, ಗ್ರಾ.ಪಂ. ಮಾಜಿ ಅಧ್ಯಕ್ಷ ಪ್ರದೀಪ್‌ಕುಮಾರ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts