More

  ಮೈಸೂರಿನಲ್ಲಿ ಜೂ. 4 ರಂದು ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ

  ಮೈಸೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನಗರ ಪಾಲಿಕೆ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ, ಮೈಸೂರು ಅರಮನೆ ಮಂಡಳಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಜೂ.4 ರಂದು ಬೆಳಗ್ಗೆ 11.30ಕ್ಕೆ ನಗರದ ಕಲಾಮಂದಿರದಲ್ಲಿ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಹಮ್ಮಿಕೊಳ್ಳಲಾಗಿದೆ.

  ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಸ್ಥಿತಿಯಲ್ಲಿ ಕಾರ್ಯಕ್ರಮವನ್ನು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ ಮಹದೇವಪ್ಪ ಉದ್ಘಾಟಿಸಲಿದ್ದಾರೆ. ಶಾಸಕ ಕೆ. ಹರೀಶ್ ಗೌಡ ಅಧ್ಯಕ್ಷತೆ ವಹಿಸಲಿದ್ದಾರೆ. ಪಶುಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ.ವೆಂಕಟೇಶ್ ನಾಲ್ವಡಿ ಕೃಷ್ಣರಾಜ್ ಒಡೆಯರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸುವರು. ಕಾರ್ಯಕ್ರಮದ ಅಂಗವಾಗಿ ಅಂದು ಬೆಳಗ್ಗೆ 9.30ಕ್ಕೆ ಅರಮನೆ ಆವರಣದ ಖಿಲ್ಲೆ ವೆಂಕಟರಮಣಸ್ವಾಮಿ ದೇವಸ್ಥಾನದ ಮುಂಭಾಗದಿಂದ ವಿವಿಧ ಕಲಾತಂಡಗಳ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಎಂ ಡಿ ಸುದರ್ಶನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts