18 C
Bangalore
Friday, December 6, 2019

ಬ್ಲೂ ವೇಲ್ ಮಾಯಾಕನ್ನಡಿ

Latest News

ನೀರಿದೆ, ಪೂರೈಕೆ ವ್ಯವಸ್ಥೆ ಇಲ್ಲ

ಚಿಕ್ಕಮಗಳೂರು: ಈ ವರ್ಷ ಮಳೆ ಚೆನ್ನಾಗಿಯೇ ಆಗಿದೆ. ಎಲ್ಲ ನೀರಿನ ಮೂಲಗಳೂ ಭರ್ತಿಯಾಗಿವೆ. ನೀರು ಕೊಡಲು ಇನ್ನೇನು ಸಮಸ್ಯೆ? ನಾಗರಿಕರ ಇಂತಹ ಮಾತು,...

ಕುಕ್ಕರಹಳ್ಳಿ ಕೆರೆಯಲ್ಲಿ ಎರಡು ದ್ವೀಪ ನಿರ್ಮಿಸಿ

ಮೈಸೂರು: ಕುಕ್ಕರಹಳ್ಳಿ ಕೆರೆಯಲ್ಲಿ ಹೊಸದಾಗಿ ಎರಡು ದ್ವೀಪಗಳನ್ನು ನಿರ್ಮಾಣ ಮಾಡುವಂತೆ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯ ಡಾ.ಕೆ.ಎಂ.ಜಯರಾಮಯ್ಯ ಮೈಸೂರು...

ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು

ಮೈಸೂರು: ತೀವ್ರ ಕುತೂಹಲ ಕೆರಳಿಸಿರುವ ಹುಣಸೂರು ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು ಮಾಡಿರುವುದರ ಜತೆಗೆ ಹೆಂಡದ ಘಾಟು ಹೆಚ್ಚು ವಿಜೃಂಭಿಸಿದೆ! ಮತದಾರರನ್ನು ಸೆಳೆಯಲು ಇಲ್ಲಿ...

ಯುವತಿ ಮೇಲೆ ಹಲ್ಲೆ ನಡೆಸಿದ್ದ ಆರೋಪಿ ಸೆರೆ

ಮೈಸೂರು: ಪ್ರೀತಿಸಲು ನಿರಾಕರಿಸಿದ ಯುವತಿಯ ಮೇಲೆ ಹಲ್ಲೆ ನಡೆಸಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಪಿರಿಯಾಪಟ್ಟಣ ಮೂಲದ ಮಂಚೇಗೌಡನಕೊಪ್ಪಲು ನಿವಾಸಿ, ಖಾಸಗಿ ಕಂಪನಿಯ ಉದ್ಯೋಗಿ ಅಮೃತ್...

ಹುಣಸೂರು ಉಪಕದನ ಬಹುತೇಕ ಶಾಂತಿಯುತ

ಮೈಸೂರು: ಜಿದ್ದಾಜಿದ್ದಿನ ಕಣವಾಗಿರುವ ಹುಣಸೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಗುರುವಾರ ಶೇ.76ರಷ್ಟು ಮತದಾನವಾಗಿದೆ. 2018ರ ಸಾರ್ವತ್ರಿಕ ಚುನಾವಣೆಯಲ್ಲಿ ಶೇ.82.54ರಷ್ಟು ಮತ್ತು ಆರು ತಿಂಗಳ...

ಬೆಂಗಳೂರು: ಒಂದಕ್ಕಿಂತ ಒಂದು ಡಿಫರೆಂಟ್ ಸಿನಿಮಾಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ ನಟ ಪ್ರಭು ಮುಂಡ್ಕರ್. ‘ಉರ್ವಿ’ ಚಿತ್ರದಲ್ಲಿ ನೆಗೆಟಿವ್ ಶೇಡ್ ಪಾತ್ರ ಮಾಡಿದ್ದ ಅವರು, ಈಗ ಹರಿಪ್ರಿಯಾ ನಟನೆಯ ‘ಡಾಟರ್ ಆಫ್ ಪಾರ್ವತಮ್ಮ’ ಸಿನಿಮಾದಲ್ಲೊಂದು ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಅಲ್ಲದೆ, ನೈಜ ಘಟನೆ ಆಧಾರಿತ ‘ರಾಂಚಿ’ ಚಿತ್ರಕ್ಕೂ ಅವರು ನಾಯಕ. ಈ ನಡುವೆ ‘ಮಾಯಾಕನ್ನಡಿ’ ಶೀರ್ಷಿಕೆಯ ಸಿನಿಮಾದಲ್ಲೂ ಅವರು ನಟಿಸಿದ್ದು, ಪ್ರಸ್ತುತ ಆ ಚಿತ್ರಕ್ಕೆ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ.

ಅಚ್ಚರಿ ಎಂದರೆ ಬ್ಲೂ ವೇಲ್ ಗೇಮ್ ಕುರಿತಾದ ಕಥೆಯನ್ನು ಈ ಚಿತ್ರ ಹೊಂದಿದೆಯಂತೆ. ಈಗ ಎಲ್ಲೆಲ್ಲೂ ಪಬ್​ಜಿ ಗೇಮ್ ಹಾವಳಿ ಶುರುವಾಗಿರುವಂತೆಯೇ ಕಳೆದ ವರ್ಷ ಬ್ಲೂ ವೇಲ್ ಕೂಡ ವೈರಲ್ ಆಗಿತ್ತು. ಯುವಜನತೆಯ ಮನಸ್ಸಿಗೆ ಹಾನಿ ಉಂಟುಮಾಡುವ, ಆತ್ಮಹತ್ಯೆ ಮತ್ತಿತ್ತರ ಅಪರಾಧ ಚಟುವಟಿಕೆಗೆ ಪ್ರೇರಣೆ ನೀಡುವ ಕಾರಣದಿಂದಾಗಿ ಈ ಗೇಮ್ ಅಪಾಯಕಾರಿ ಎನಿಸಿಕೊಂಡಿತ್ತು. ಆ ಘಟನೆಗಳನ್ನೇ ಆಧಾರವಾಗಿಟ್ಟುಕೊಂಡು ‘ಮಾಯಾಕನ್ನಡಿ’ ತಯಾರಾಗಿದೆ.

ಮಂಗಳೂರು ಮೂಲದ ಅನ್ವಿತಾ ಸಾಗರ್, ಕಾಜಲ್ ಎಂಬಿಬ್ಬರು ಈ ಚಿತ್ರಕ್ಕೆ ನಾಯಕಿಯರು. ಪ್ರಭು ಜತೆ ಅಶ್ವಿನ್ ರಾವ್ ಪಲ್ಲಕ್ಕಿ ಕೂಡ ಪ್ರಮುಖ ಪಾತ್ರದಲ್ಲಿದ್ದಾರೆ. ಅಭಿಷೇಕ್ ಎಸ್.ಎನ್. ಸಂಗೀತ ಸಂಯೋಜನೆಯ ಜವಾಬ್ದಾರಿ ಹೊತ್ತಿದ್ದಾರೆ. ನಿರ್ದೇಶನ ಮತ್ತು ನಿರ್ಮಾಣ ಮಾಡಿರುವುದು ವಿನೋದ್ ಪೂಜಾರಿ. ‘ಕೊಲೆ ಕೌತುಕದ ಮಾದರಿಯಲ್ಲಿ ಕಥೆ ಸಾಗುತ್ತದೆ. ಹೀರೋ-ಹೀರೋಯಿನ್ ಎಂಬುದಕ್ಕಿಂತ ಕಥೆಯೇ ಹೀರೋ ಎನ್ನಬಹುದು. ಬ್ಲೂ ವೇಲ್ ಎಂಬುದು ಭ್ರಮೆಯೋ ವಾಸ್ತವವೋ ಎಂಬ ವಿಚಾರವನ್ನೂ ಹೇಳಲಾಗಿದೆ. ‘ಉಳಿದವರು ಕಂಡಂತೆ’ ರೀತಿ ಹಲವು ದೃಷ್ಟಿಕೋನದಲ್ಲಿ ಈ ಚಿತ್ರ ಸಾಗುತ್ತದೆ’ ಎಂದು ಮಾಹಿತಿ ನೀಡುತ್ತಾರೆ ಮಧು. ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿರುವಾಗಲೇ ‘ಮಾಯಾಕನ್ನಡಿ’ಗೆ ನೆಟ್​ಫ್ಲಿಕ್ಸ್, ಅಮೇಜಾನ್ ಪ್ರೖೆಮ್ ರೀತಿಯ ಡಿಜಿಟಲ್ ಮಾರುಕಟ್ಟೆಯಿಂದ ಬೇಡಿಕೆ ಬಂದಿದೆಯಂತೆ. ಆನ್​ಲೈನ್ ವೀಕ್ಷಕರಿಗೆ ಸೂಕ್ತ ಎನಿಸುವಂತಹ ಕಥಾವಸ್ತು ಇಟ್ಟುಕೊಂಡು ಮಾಡಿರುವುದರಿಂದ ಚಿತ್ರಮಂದಿರದಲ್ಲಿ ರಿಲೀಸ್ ಮಾಡಬೇಕೋ ಅಥವಾ ನೇರವಾಗಿ ಆನ್​ಲೈನ್​ನಲ್ಲೇ ಬಿಡುಗಡೆ ಮಾಡಬೇಕೋ ಎಂಬುದನ್ನು ಚಿತ್ರತಂಡ ಇನ್ನೂ ನಿರ್ಧರಿಸಿಲ್ಲ.

Stay connected

278,730FansLike
580FollowersFollow
619,000SubscribersSubscribe

ವಿಡಿಯೋ ನ್ಯೂಸ್

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...

VIDEO| ಸಫಾರಿ ವಾಹನವನ್ನು ಹಿಮ್ಮೆಟ್ಟಿ ಬಂದ ಹುಲಿ ವಿಡಿಯೋ ವೈರಲ್​:...

ಸವಾಯಿ ಮಧೊಪುರ್​: ರಾಜಸ್ಥಾನದ ರಣಥಂಬೋರ್​ ರಾಷ್ಟ್ರೀಯ ಉದ್ಯಾನವನದಲ್ಲಿ ಹೆಣ್ಣು ಹುಲಿಯೊಂದು ಪ್ರವಾಸಿಗರಿದ್ದ ಸಫಾರಿ ಜೀಪ್​ ಅನ್ನು ಹಿಮ್ಮೆಟ್ಟಿಸಿಕೊಂಡು ಬಂದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವಿಡಿಯೋದಲ್ಲಿರುವ ಹುಲಿಯನ್ನು ಕೋಡ್​...