More

    ರಸ್ತೆಯಲ್ಲಿ ನಮಾಜ್​ ಮಾಡುತ್ತಿದ್ದವರ ಮೇಲೆ ಹಲ್ಲೆ ಪ್ರಕರಣ; ಪೊಲೀಸ್​ ಅಧಿಕಾರಿ ಅಮಾನತು

    ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯ ಇಂದರ್​ಲೋಕ್​ ಪ್ರದೇಶದಲ್ಲಿ ರಸ್ತೆಯಲ್ಲೇ ನಮಾಜ್​ ಮಾಡುತ್ತಿದ್ದರು ಎಂಬ ಕಾರಣಕ್ಕೆ ಮುಸ್ಲಿಂ ವ್ಯಕ್ತಿಗಳ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್​ ಅಧಿಕಾರಿಯನ್ನು ಸೇವೆಯಿಂದ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

    ಪೊಲೀಸ್​ ಅಧಿಕಾರಿ ನಮಾಜ್​ ಮಾಡುತ್ತಿದ್ದವರ ಮೇಲೆ ಹಲ್ಲೆ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿತ್ತು ಮತ್ತು ಸಾಕಷ್ಟು ಖಂಡನೆ ವ್ಯಕ್ತವಾಗಿತ್ತು. ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ಪರ-ವಿರೋಧದ ಚರ್ಚೆಗೆ ಆಸ್ಪದ ಮಾಡಿಕೊಟ್ಟಿತ್ತು.

    ಅಮಾನತಾದ ಅಧಿಕಾರಿಯನ್ನು ಮನೋಜ್​ ಕುಮಾರ್​ ತೋಮರ್​ ಎಂದು ಗುರುತಿಸಲಾಗಿದ್ದು, ತಕ್ಷಣವೇ ಜಾರಿಗೆ ಬರುವಂತೆ ಸೇವೆಯಿಂದ ಅಮಾನತು ಮಾಡಿ ಆದೇಶ ಹೊರಡಿಸಲಾಗುತ್ತಿದೆ ಎಂದು ದೆಹಲಿ ಪೊಲೀಸ್​ ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಘಟನೆಯು ಶುಕ್ರವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ನಡೆದಿದ್ದು, ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿತ್ತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts