More

    ನಾಮಫಲಕಕ್ಕೆ ಮಸಿ ಬಳಿದು ಕಾರ್ಯಕರ್ತರ ಆಕ್ರೋಶ

    ಬೆಳಗಾವಿ: ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಅನಿಲ ಬೆನಕೆ ಭಾವಚಿತ್ರವಿದ್ದ ಹಾಗೂ ಮರಾಠಿ ಭಾಷೆಯಲ್ಲಿ ಅಳವಡಿಸಿದ್ದ ಕ್ರಿಕೆಟ್ ಕ್ರೀಡಾಕೂಟದ ಪ್ರಚಾರ ಬ್ಯಾನರ್‌ಗೆ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಗುರುವಾರ ಮಸಿ ಬಳಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿರುವ ಶಾಸಕ ಅನಿಲ ಬೆನಕೆ ಅವರು ಕರ್ನಾಟಕ ಸರ್ಕಾರದಿಂದ ಎಲ್ಲ ಸೌಲಭ್ಯಗಳನ್ನು ಪಡೆದುಕೊಂಡು ಮರಾಠಿ ಭಾಷೆ ಪರವಾಗಿ ಕೆಲಸ ಮಾಡುತ್ತಿದ್ದಾರೆ.

    ಕ್ಷೇತ್ರದಲ್ಲಿ ಕನ್ನಡಿಗರು ವಾಸಿಸುವ ಪ್ರದೇಶಗಳಲ್ಲಿ ಅಭಿವೃದ್ಧಿ ಕೆಲಸ ಮಾಡುತ್ತಿಲ್ಲ. ಮರಾಠಿಗರು ವಾಸಿಸುವ ಪ್ರದೇಶಗಳಿಗೆ ಹೆಚ್ಚು ಅನುದಾನ ಖರ್ಚು ಮಾಡುತ್ತಿದ್ದಾರೆ. ಸರ್ಕಾರದ ಸೌಲಭ್ಯಕ್ಕೆ ಮರಾಠಿ ಭಾಷಿಕ ಫಲಾನುಭವಿಗಳನ್ನು ಆಯ್ಕೆ ಮಾಡುವ ಮೂಲಕ ಕನ್ನಡಿಗರಿಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಕಾರ್ಯಕರ್ತರು ದೂರಿದರು.

    ನಾಲ್ಕೈದು ತಿಂಗಳಿಂದ ಶಾಸಕ ಅನಿಲ ಬೆನಕೆ ತಮ್ಮ ಕ್ಷೇತ್ರದ ಪ್ರಮುಖ ವೃತ್ತಗಳಲ್ಲಿ ಮಾರಾಠಿ ಭಾಷೆಯಲ್ಲಿಯೇ ಬ್ಯಾನರ್ ಅಳವಡಿಸುತ್ತಿದ್ದಾರೆ. ನಗರದ ಆರ್‌ಟಿಒ ವೃತ್ತದಲ್ಲಿ ಮರಾಠಿ ಭಾಷೆಯಲ್ಲಿ ದೊಡ್ಡದಾಗಿ ಪ್ರಚಾರ ಫಲಕ ಅಳವಡಿಸಿದ್ದಾರೆ. ಅದನ್ನು ಖಂಡಿಸಿ ಕಪ್ಪು ಮಸಿ ಬಳಿಯಲಾಗಿದೆ. ಸರ್ಕಾರ ತಕ್ಷಣ ಕ್ರಮ ಜರುಗಿಸಬೇಕು ಎಂದು ಕನ್ನಡ ಹೋರಾಟಗಾರ್ತಿ ಕಸ್ತೂರಿ ಭಾವಿ ಮತ್ತು ಕನ್ನಡ ಸಂಘಟನೆಗಳ ಕಾರ್ಯಕರ್ತರು ಆಗ್ರಹಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts