More

    ನಮೀಬಿಯಾ ಚೀತಾಗಳು ಕುನೋ ಉದ್ಯಾನವನದ ವಾತಾವರಣಕ್ಕೆ ಹೊಂದಿಕೊಂಡಿವೆ; ಮಾಹಿತಿ ಹಂಚಿಕೊಂಡ ಕೇಂದ್ರ ಸಚಿವ

    ನವದೆಹಲಿ: ನಮೀಬಿಯಾದಿಂದ ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನಕ್ಕೆ ತರಲಾದ ಎಲ್ಲಾ ಎಂಟು ಚೀತಾಗಳು ಹೊಸ ಪರಿಸರಕ್ಕೆ ಹಾಗೂ ಇಲ್ಲಿನ ವಾತಾವರಣಕ್ಕೆ ಚೆನ್ನಾಗಿ ಹೊಂದಿಕೊಳ್ಳುತ್ತಿವೆ ಎಂದು ಕೇಂದ್ರ ಪರಿಸರ ಸಚಿವ ಭೂಪೇಂದರ್ ಯಾದವ್ ತಿಳಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡುತ್ತಾ, ಆರಂಭದಲ್ಲಿ ಇಲ್ಲಿನ ವಾತಾವರಣಕ್ಕೆ ಚೀತಾಗಳು ಹೊಂದಿಕೊಳ್ಳುತ್ತವೇಯೋ ಎಂಬ ಚಿಂತೆಯಿತ್ತು. ಆದರೆ ಎಲ್ಲಾ ಚೀತಾಗಳು ಪರಿಸರಕ್ಕೆ ಹೊಂದಿಕೊಂಡಿವೆ. ಸಚಿವ ಭೂಪೇಂದರ್ ಯಾದವ್ ತಿಳಿಸಿದ್ದಾರೆ.

    ಕೇಂದ್ರ ಪರಿಸರ ಸಚಿವ ಭೂಪೇಂದರ್ ಯಾದವ್ ಕುನೋ ರಾಷ್ಟ್ರೀಯ ಉದ್ಯಾನವನಕ್ಕೆ ಭೇಟಿ ನೀಡಿ, ಅಲ್ಲಿನ ಸಂಶೋಧಕರು, ವಿಜ್ಞಾನಿಗಳು ಮತ್ತು ಅರಣ್ಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ. ಜತೆಗೆ ಚೀತಾಗಳ ಚಲನವಲನಗಳ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.

    ಸೆ.17ರಂದು ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿಂದು ನಮೀಬಿಯಾದಿಂದ 8 ಚೀತಾಗಳು ಭಾರತಕ್ಕೆ ಕರೆತರಲಾಗಿತ್ತು. ಚೀತಾಗಳನ್ನು ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಆರಂಭದ ದಿನಗಳಲ್ಲಿ ಕ್ವಾರಂಟೈನ್​ಗೆ ಒಳಪಡಿಸಲಾಗಿತ್ತು. ಇದೀಗ ಎಲ್ಲಾ ಚೀತಾಗಳನ್ನು ಕ್ವಾರಂಟೈನ್​ನಿಂದ ಮುಕ್ತಗೊಳಿಸಲಾಗಿದೆ. (ಏಜೆನ್ಸೀಸ್)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts