More

    VIDEO | ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ 4 ಮರಿಗಳಿಗೆ ಜನ್ಮ ನೀಡಿದ ನಮೀಬಿಯಾದ ಚೀತಾ

    ಮಧ್ಯಪ್ರದೇಶ: ನಮೀಬಿಯಾದಿಂದ ಭಾರತಕ್ಕೆ ಬಂದಿದ್ದ ಚೀತಾವೊಂದು ಇದೀಗ 4 ಮರಿಗಳಿಗೆ ಜನ್ಮ ನೀಡಿದೆ. ಈ ಬಗ್ಗೆ ಕೇಂದ್ರ ಸಚಿವ ಭೂಪೇಂದರ್ ಸಿಂಗ್ ಟ್ವಿಟರ್​ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

    ಕಳೆದ ವರ್ಷ ಸೆ.17ರಂದು ನಮೀಬಿಯಾ ದೇಶದಿಂದ 8 ಚೀತಾಗಳನ್ನು ಭಾರತಕ್ಕೆ ಕರೆತರಲಾಗಿತ್ತು. 8 ರಲ್ಲಿ 5 ಹೆಣ್ಣು ಮತ್ತು 3 ಗಂಡು ಚೀತಾಗಳು. ನಮೀಬಿಯಾ ರಾಜಧಾನಿ ವಿಂಡ್ಹೋಕ್​ನಿಂದ ವಿಶೇಷವಾಗಿ ಡಿಸೈನ್​ ಮಾಡಲಾದ ಹುಲಿ ಮುಖದ ಬಿ-747 ಜಂಬೋ ಜೆಟ್​ನಿಂದ ಚೀತಾಗಳನ್ನು ಕರೆತರಲಾಗಿತ್ತು. ಅವುಗಳನ್ನು ಪ್ರಧಾನಿ ಮೋದಿ ಅವರು ತಮ್ಮ ಜನ್ಮದಿನದಂದೇ ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾವನಕ್ಕೆ ಬಿಟ್ಟಿದ್ದರು.

    70 ವರ್ಷಗಳ ಹಿಂದೆಯೇ ಅಳಿದು ಹೋಗಿದ್ದ ಚೀತಾ ಸಂತತಿಯನ್ನು ಮರುಸ್ಥಾಪಿಸುವ ಉದ್ದೇಶದಿಂದ ಭಾರತಕ್ಕೆ ಚೀತಾಗಳನ್ನು ಕರೆತರಲಾಗಿದೆ. ಇದಕ್ಕಾಗಿ ಪ್ರಾಜೆಕ್ಟ್​ ಚೀತಾ ಹೆಸರಿನಲ್ಲಿ ಭಾರತವು ನಮೀಬಿಯಾದೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿತ್ತು.

    ನಮೀಬಿಯಾದಿಂದ ತರಲಾಗಿದ್ದ ಸಶಾ(3) ಹೆಸರಿನ ಹೆಣ್ಣು ಚೀತಾ ಮೂತ್ರಪಿಂಡ ಸೋಂಕಿನಿಂದ ಕಳೆದ ಸೋಮವಾರ ಮೃತಪಟ್ಟಿತ್ತು. ಭಾರತಕ್ಕೆ ತರುವ ಮೊದಲೇ ಕಿಡ್ನಿ ಸಂಬಂಧಿತ ಖಾಯಿಲೆಯಿಂದ ಬಳಲುತ್ತಿದ್ದ ಚೀತಾವನ್ನ ಕ್ವಾರಂಟೈನ್​ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಸದ್ಯ ಉಳಿದ ಏಳು ಚೀತಾಗಳು ಆರೋಗ್ಯವಾಗಿದ್ದು, ಕುನೋ ರಾಷ್ಟ್ರೀಯ ಉದ್ಯಾನವನದ ಅರಣ್ಯ ಪ್ರದೇಶದಲ್ಲಿವೆ. ಅವುಗಳು ಸಕ್ರೀಯವಾಗಿ ಬೇಟೆಯಾಡುತ್ತಿವೆ ಎಂದು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಜೆಎಸ್ ಚೌಹಾಣ್ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts