ಮೆಟ್ರೋ ರೈಲು ಸಂಚಾರದಲ್ಲಿ ವ್ಯತ್ಯಯ; ಯಾವಾಗ, ಏನು? ಇಲ್ಲಿದೆ ವಿವರ…

mtro
Published on

ಬೆಂಗಳೂರು: ಬೈಯಪ್ಪನಹಳ್ಳಿಯಿಂದ ಕೃಷ್ಣರಾಜಪುರ ಮೆಟ್ರೋ ನಿಲ್ದಾಣದ ವರೆಗೆ ಮೆಟ್ರೋ ಸೇವೆಗಳನ್ನು ವಿಸ್ತರಿಸುವ ಸಲುವಾಗಿ, ಆ.09 ರವರೆಗೆ ಬೈಯಪ್ಪನಹಳ್ಳಿ ಟರ್ಮಿನಲ್‌ನಿಂದ ಸ್ವಾಮಿ ವಿವೇಕಾನಂದ ರಸ್ತೆ ಮೆಟ್ರೋ ನಿಲ್ದಾಣ ಹಾಗೂ ಕೃಷ್ಣರಾಜಪುರ ಮತ್ತು ವೈಟ್‌ ಫೀಲ್ಡ್ (ಕಾಡುಗೋಡಿ) ನಿಲ್ದಾಣಗಳವರೆಗೆ ಬೆಳಿಗ್ಗೆ 5.00 ಗಂಟೆಯಿಂದ 7.00 ಗಂಟೆಯವರೆಗೆ ರೈಲು ಸೇವೆಗಳನ್ನು ಸ್ಥಗಿತಗೊಳಿಸಲಾಗಿತ್ತು. ಇದೀಗ ಸಿಗ್ನಲಿಂಗ್ ಮತ್ತು ಇತರ ಸಂಬಂಧಿತ ಕಾಮಗಾರಿಗಳನ್ನು ಪೂರ್ಣಗೊಳಿಸಲು ಆ.10 ಮತ್ತು 11 ರಂದು ಮೆಟ್ರೋ ಸಂಚಾರ ಇರುವುದಿಲ್ಲ ಎಂದು ಬಿಎಂಆರ್​ಸಿಎಲ್ ಮಾಹಿತಿ ನೀಡಿದೆ.

ಆಗಸ್ಟ್ 10, 11 ಮತ್ತು 14 ರಂದು ಬೆಳಿಗ್ಗೆ 5.00 ಗಂಟೆಯಿಂದ 7.00 ಗಂಟೆಯವರೆಗೆ ನೇರಳೆ ಮಾರ್ಗದ ಮೆಟ್ರೋ ರೈಲು ಸೇವೆಗಳಲ್ಲಿ ಬದಲಾವಣೆ ಇರಲಿದೆ.

ಸದರಿ ದಿನಗಳಂದು ಬೆಳಗ್ಗೆ 5.00 ಗಂಟೆಯಿಂದ 7.00 ಗಂಟೆಯವರೆಗೆ, ಸ್ವಾಮಿ ವಿವೇಕಾನಂದ ರಸ್ತೆ ಮೆಟ್ರೋ ನಿಲ್ದಾಣದಿಂದ ಕೆಂಗೇರಿ ನಿಲ್ದಾಣದವರೆಗೆ ಮೆಟ್ರೋ ರೈಲು ಸೇವೆಗಳು ಲಭ್ಯವಿರುತ್ತದೆ.

ಇದಲ್ಲದೆ, ಕೆಂಗೇರಿ ನಿಲ್ದಾಣದಿಂದ ರೈಲು ಸೇವೆಯನ್ನು ಚಲ್ಲಘಟ್ಟ ನಿಲ್ದಾಣದವರೆಗೆ ವಿಸ್ತರಿಸಲು ಸಿಗ್ನಲಿಂಗ್ ಮತ್ತು ಇತರ ಸಂಬಂಧಿತ ಕಾಮಗಾರಿಗಳಿಗಾಗಿ ಆ.14ನೇ ರಂದು ಬೆಳಿಗ್ಗೆ 5.00 ಗಂಟೆಯಿಂದ 7.00 ಗಂಟೆಯವರೆಗೆ ಕೆಂಗೇರಿ ಮತ್ತು ವಿಜಯನಗರ ಮೆಟ್ರೋ ನಿಲ್ದಾಣಗಳ ನಡುವೆ ಮೆಟ್ರೋ ಸೇವೆಗಳು ಇರುವುದಿಲ್ಲ. ಈ ಸಮಯದಲ್ಲಿ ಬೈಯಪ್ಪನಹಳ್ಳಿ ಮತ್ತು ವಿಜಯನಗರ ಮೆಟ್ರೋ ನಿಲ್ದಾಣಗಳ ನಡುವೆ ರೈಲು ಸೇವೆ ಇರುತ್ತದೆ.

ಬೆಳಿಗ್ಗೆ 7.00 ಗಂಟೆಯ ನಂತರ, ಬೈಯಪ್ಪನಹಳ್ಳಿ ಮತ್ತು ಕೆಂಗೇರಿ ಮೆಟ್ರೋ ನಿಲ್ದಾಣಗಳ ನಡುವೆ ಹಾಗೂ ಕೃಷ್ಣರಾಜಪುರ ಮತ್ತು ವೈಟ್‌ಫೀಲ್ಡ್ (ಕಾಡುಗೋಡಿ) ಮೆಟ್ರೋ ನಿಲ್ದಾಣಗಳ ನಡುವೆ ಎಂದಿನಂತೆ ಮೆಟ್ರೋ ರೈಲು ಸೇವೆಗಳು ಸೇವೆಗಳು ರಾತ್ರಿ 11.00 ರವರೆಗೆ ಲಭ್ಯವಿರುತ್ತದೆ. ಹಸಿರು ಮಾರ್ಗದ ರೈಲು ಸೇವೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಬಿಎಂಆರ್​ಸಿಎಲ್ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net