More

    ದೇಶ-ಧರ್ಮ ರಕ್ಷಣೆಗೆ ನಮೋ ಅಗತ್ಯ

    ಕುಮಟಾ: ಕಾರ್ಯಕರ್ತರು ಮನೆ ಮನೆಗೆ ತೆರಳಿ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಸರ್ಕಾರದ ಸಾಧನೆ ತಿಳಿಸಿ ಮೇರಾ ಬೂತ್ ಸಬಸೇ ಮಜಬೂತ್ ಮಾಡಬೇಕು ಎಂದು ಉತ್ತರ ಕನ್ನಡ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.

    ಪಟ್ಟಣದಲ್ಲಿ ಮಂಗಳವಾರ ಪ್ರಚಾರ ಸಭೆಯಲ್ಲಿ ಮಾತನಾಡಿ, ಪ್ರಧಾನಮಂತ್ರಿ ಬೆಳೆ ವಿಮೆ ಯೋಜನೆಯಡಿ ಜಿಲ್ಲೆಗೆ ಕೇಂದ್ರ ಸರ್ಕಾರವು 100 ಕೋಟಿ ರೂ. ನೀಡಿದೆ. ಕರೊನಾ ಲಸಿಕೆ ನೀಡಿ ಜನರ ಜೀವ ಉಳಿಸಿದ್ದಾರೆ. ಪ್ರತಿ ಕುಟುಂಬಕ್ಕೂ ಶುದ್ಧ ಕುಡಿಯುವ ನೀರು ಲಭಿಸಬೇಕೆಂದು ಮನೆ ಮನೆಗೆ ಗಂಗೆ ಯೋಜನೆ ಅನುಷ್ಠಾನಗೊಳಿಸಲಾಗಿದೆ. ದೇಶಕ್ಕೆ, ಧರ್ಮಕ್ಕೆ ಒಳ್ಳೆಯದಾಗಲು ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು. ಗಡಿ ರಕ್ಷಣೆ, ಸೈನಿಕರಿಗೆ ಶಕ್ತಿ ತುಂಬಿ ದೇಶದಲ್ಲಿ ಭಯೋತ್ಪಾದನೆ ಸರ್ವನಾಶ ಮಾಡಲು ಮೋದಿ ಕಾರಣರಾಗಿದ್ದಾರೆ ಎಂದರು.

    ಭಾರತ ವಿಶ್ವಗುರು ಸ್ಥಾನದಲ್ಲಿ ನಿಲ್ಲಬೇಕೆಂದು ಪಣ ತೊಟ್ಟಿರುವ ಮೋದಿ, ಜಗತ್ತಿಗೆ ಯೋಗವನ್ನು ಪರಿಚಯಿಸಿದ್ದಾರೆ. 5ನೇ ಆರ್ಥಿಕ ದೊಡ್ಡ ದೇಶವಾಗಿ ಭಾರತ ಹೊರ ಹೊಮ್ಮಲು ಪ್ರಧಾನಿ ಕಾರಣ. ಮೋದಿ ಅವರ ಸಾಧನೆಗಳನ್ನು ಸಾಕಷ್ಟು ಹೇಳಬಹುದಾಗಿದ್ದು, ಎಲ್ಲ ಕಾರ್ಯಕ್ರಮಗಳನ್ನು ಮತದಾರರಿಗೆ ಮನದಟ್ಟು ಮಾಡಿಕೊಡಬೇಕು ಎಂದು ವಿನಂತಿಸಿದರು.

    ಹೋರಾಟ, ತ್ಯಾಗದ ಪ್ರತೀಕವಾದ ರಾಮ ಮಂದಿರ ನಿರ್ಮಾಣಕ್ಕೆ ಬಿಜೆಪಿ ಸರ್ಕಾರವು ಅಧಿಕಾರಕ್ಕೆ ಬರಬೇಕಾಯಿತು. ಮೇ 7ರಂದು ಲೋಕಸಭಾ ಚುನಾವಣೆಯಲ್ಲಿ ಕಮಲದ ಚಿಹ್ನೆಗೆ ಮತ ಹಾಕುವ ಮೂಲಕ ಮೂರನೇ ಬಾರಿಗೆ ನರೇಂದ್ರ ಮೋದಿ ಪ್ರಧಾನಮಂತ್ರಿಯಾಗಲು ಎಲ್ಲರೂ ಕೈಜೋಡಿಸಬೇಕು ಎಂದು ಮನವಿ ಮಾಡಿದರು.

    ಪರೇಶ ಮೇಸ್ತ ಪ್ರಕರಣದಲ್ಲಿ ವಿಶ್ವೇಶ್ವರ ಹೆಗಡೆ ಮೇಲೆ ಯಾಕೆ ಪ್ರಕರಣ ದಾಖಲಾಗಿಲ್ಲ ಎಂದು ಕಾಂಗ್ರೆಸಿಗರು ಕೇಳುತ್ತಿದ್ದಾರೆ. ಆಗ ಅಧಿಕಾರದಲ್ಲಿದ್ದಿದ್ದು ಕಾಂಗ್ರೆಸ್ ಸರ್ಕಾರ. ನನ್ನ ಮೇಲೆ ಪ್ರಕರಣ ದಾಖಲಿಸಲು ವಿರೋಧಿಸಿಲ್ಲ. ಕಾಂಗ್ರೆಸ್ ಕೈಗೊಂಬೆಯಂತೆ ವರ್ತಿಸುತ್ತಿದ್ದ ಪೊಲೀಸ್ ಅಧಿಕಾರಿ ಹೇಮಂತ ನಿಂಬಾಳ್ಕರ್ ಅವರಿಂದ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಲು ಕಾರಣವಾಯಿತು. ಸಾವಿರಾರು ಮುಗ್ಧ ಹಿಂದು ಯುವಕರನ್ನು ಟಾರ್ಗೆಟ್ ಮಾಡಿಕೊಂಡು ಪ್ರಕರಣ ದಾಖಲಿಸಿದರು. ನಂತರ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಅಮಾಯಕ ಯುವಕರ ಮೇಲಿನ ಪ್ರಕರಣ ವಾಪಸು ಪಡೆದಿದೆ. ಇಂತಹ ಕಾಂಗ್ರೆಸ್‌ನ್ನು ಬುಡಸಮೇತ ಕಿತ್ತೊಗೆಯಬೇಕು ಎಂದರು.

    ಶಾಸಕ ದಿನಕರ ಶೆಟ್ಟಿ, ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಎಸ್. ಹೆಗಡೆ, ಜೆಡಿಎಸ್ ಮುಖಂಡ ಸೂರಜ ನಾಯ್ಕ, ಬಿಜೆಪಿ ಮುಖಂಡ ಶಿವಾನಂದ ಹೆಗಡೆ ಕಡತೋಕಾ, ವೆಂಕಟ್ರಮಣ ಹೆಗಡೆ ಕವಲಕ್ಕಿ, ನಿಕಟಪೂರ್ವ ಅಧ್ಯಕ್ಷ ವೆಂಕಟೇಶ ನಾಯಕ, ಸುಬ್ರಾಯ ವಾಳ್ಕೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಶಾಂತ ನಾಯ್ಕ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts