

ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 10 ಇದೀಗ ಕಡೆಯ ಹಂತಕ್ಕೆ ಬಂದು ತಲುಪಿದ್ದು, ಫಿನಾಲೆಗೆ ಕೇವಲ ಐದು ದಿನಗಳಷ್ಟೇ ಬಾಕಿ ಉಳಿದಿದೆ. ಈ ಮಧ್ಯೆ ಭಾನುವಾರ ನಡೆದ ಎಲಿಮಿನೇಷ್ನಲ್ಲಿ ಫಿನಾಲೆ ಓಟದಿಂದ ನಮ್ರತಾ ಔಟ್ ಆಗಿ ಹೊರಬಂದಿದ್ದಾರೆ. ಸದ್ಯ ಬಿಗ್ ಬಾಸ್ ಪಯಣ ಹಾಗೂ ಒಳಗೆ ಅನುಭವಿಸಿದ ಕೆಲವು ಕ್ಷಣಗಳ ಬಗ್ಗೆ ಕೇಳಲಾದ ಪ್ರಶ್ನೆಗಳಿಗೆ ನಮ್ರತಾ ಕೊಟ್ಟ ಉತ್ತರ ಹೀಗಿದೆ.
"ನಿಜಕ್ಕೂ ತುಂಬ ಬೇಜಾರಾಗ್ತಿದೆ. ಹತ್ತೊಂಬತ್ತು ಜನರಲ್ಲಿ ಏಳನೇ ಸ್ಥಾನದವರೆಗೂ ಬಂದಿರುವುದು ಖಂಡಿತ ಸುಲಭದ ಮಾತಲ್ಲ. ಮೂರು ದಿನಗಳ ಹಿಂದೆ ಹಳೆಯ ಸ್ಪರ್ಧಿಗಳೆಲ್ಲ ಬಂದು ಒಂದು ಬಾಂಬ್ ಹಾಕ್ತಾರೆ. ನಿಂಗೆ ಚಾನ್ಸ್ ಇಲ್ಲ ಅಂತ. ಆಗ ನನಗೆ ಓ ಎಂದು ನನ್ನ ಮೇಲಿನ ಆತ್ಮವಿಶ್ವಾಸ ಕುಗ್ಗಲು ಶುರುವಾಯ್ತು. ಆದರೂ ನನ್ನನ್ನು ನಾನು ಸಂಭಾಳಿಸಿಕೊಂಡು ಆಟವಾಡಲು ಶುರುಮಾಡಿದೆ. ಆದರೆ ಈಗ ಮನೆಯಿಂದ ಹೊರಗೆ ಬಂದಿದ್ದು ನಿಜಕ್ಕೂ ಶಾಕ್ ಆಗಿದೆ" ಎಂದಿದ್ದಾರೆ ನಮ್ರತಾ.
"ಬಿಗ್‌ಬಾಸ್ ಮನೆಯಲ್ಲಿ ಕಳೆದ ದಿನಗಳು ನನ್ನ ಪಾಲಿಗೆ ಸೋಲ್‌ಫುಲ್ ಜರ್ನಿ. ಇಲ್ಲಿ ಯಾರೂ ಕೆಟ್ಟವರಲ್ಲ. ಈ ಪ್ರಯಾಣವನ್ನು ನಾನು ಮರೆಯಲು ಸಾಧ್ಯವೇ ಇಲ್ಲ. ರಿಯಲ್ ಫ್ರೆಂಡ್‌ಷಿಪ್ ಕೂಡ ಮನೆಯೊಳಗಲ್ಲ, ಹೊರಗೂ ಮುಂದುರಿಯುತ್ತದೆ ಅಂದುಕೊಂಡಿದ್ದೇನೆ. ಎಲ್ಲರ ಜತೆಗೂ ಸಂಪರ್ಕದಲ್ಲಿರಲು ಬಯಸುತ್ತೇನೆ" ಎಂದರು.
"ನನ್ನ-ಸಂಗೀತಾ ನಡುವಿನ ಫ್ರೆಂಡ್‌ಷಿಪ್ ಅನ್ನು ಒಂದೇ ಪದದಲ್ಲಿ ಹೇಳಬೇಕು ಅಂದರೆ ಅದು ಅಕ್ಕ-ತಂಗಿ ಸಂಬಂಧ. ನನಗೆ ಇಂತಹ ಬಾಂಡಿಂಗ್ ಆಗೋದು ಬಹಳ ಕಡಿಮೆ, ಆದರೆ ಇಲ್ಲಿ ಆಯ್ತು. ಸಂಗೀತಾ ಏನೇ ಇದ್ರೂ ಮುಖದ ಮೇಲೇ ಹೇಳ್ತಾರೆ. ನೀನು ಇಲ್ಲಿ ತಪ್ಪು ಮಾಡಿದೆ. ಇದು ಸರಿ ಎಂಬುದನ್ನು ನೇರವಾಗಿ ಹೇಳ್ತಾರೆ. ಅಂಥ ಕ್ರಿಟಿಕ್ ಎಲ್ಲರ ಬದುಕಿನಲ್ಲಿಯೂ ಇರಬೇಕು ಅನಿಸುತ್ತದೆ" ಎಂದು ನಮ್ರತಾ ಹೇಳಿದ್ದಾರೆ.
"ನನ್ನ ಪ್ರಕಾರ ಟಾಪ್ 3ನಲ್ಲಿ ವಿನಯ್, ಸಂಗೀತಾ ಮತ್ತು ತುಕಾಲಿ ಇರ್ತಾರೆ. ನನಗೆ ವಿನಯ್ ವಿನ್ ಆಗ್ಬೇಕು ಅಂತ ಇದೆ. ಆದರೆ ಸಂಗೀತಾ ವಿನ್ ಆಗ್ತಾರೆ ಅಂತ ನನ್ನ ಸಿಕ್ಸ್ತ್ ಸೆನ್ಸ್ ಹೇಳ್ತಿದೆ. ನನ್ನ ಪ್ರಕಾರ ಈ ಸೀಟಲ್ಲಿ ನನ್ನ ನಂತರ ಕಾರ್ತಿಕ್ ಇರುತ್ತಾರೆ" ಎಂದ ನಮ್ರತಾ ತಮ್ಮ ಅನಿಸಿಕೆ, ಅಭಿಪ್ರಾಯಗಳನ್ನು ನೇರವಾಗಿ ವ್ಯಕ್ತಪಡಿಸಿದ್ದಾರೆ.