ಶ್ರೀ ನಂದಿಕೇಶ್ವರ ನಾಟಕ ಸಂಘದ 40ನೇ ವಾರ್ಷಿಕೋತ್ಸವ

nnnnnnnnn
Published on


ಮಂಗಳೂರು : ಮಂಗಳೂರಿನ ಶ್ರೀ ನಂದಿಕೇಶ್ವರ ನಾಟಕ ಸಂಘದ 40ನೇ ವಾರ್ಷಿಕೋತ್ಸವದ ಅಂಗವಾಗಿ ಜು.28ರಂದು ಸಾಯಂಕಾಲ 5ರಿಂದ ಕಿನ್ನಿಗೋಳಿಯ ಯುಗಪುರುಷ ಸಭಾಭವನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಮುದುಕನ ಮದುವೆ ತುಳು ಕನ್ನಡ ಮಿಶ್ರಿತ ಹಾಸ್ಯ ನಾಟಕದ ಉಚಿತ ಪ್ರದರ್ಶನ ನಡೆಯಲಿದೆ.
ಸುದ್ದಿಗೋಷ್ಠಿಯಲ್ಲಿ ಸಂಘಟಕ ಭುವನಾಭಿರಾಮ ಉಡುಪ ಮಾತನಾಡಿ ರಾಜ್ಯದಾದ್ಯಂತ ಹೆಸರುವಾಸಿಯಾಗಿರುವ ಶ್ರೀ ನಂದಿಕೇಶ್ವರ ನಾಟಕ ಸಂಘವು ದಿ. ಪಿ.ಬಿ. ರೈ ಅವರ ಸವಿನೆನಪಿಗಾಗಿ 40ನೇ ವರ್ಷದ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಮುದುಕನ ಮದುವೆ ನಾಟಕ ಆಯೋಜಿಸಿದೆ. ಡಾ.ಹರಿಕೃಷ್ಣ ಪುನರೂರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಡಾ.ಸಂಜೀವ ದಂಡಕೇರಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.
ಸಂಸ್ಥೆಯ ಸಂಚಾಲಕಿ ಶೋಭಾ ರೈ ಮಾತನಾಡಿ ‘ ದಶಕದ ಹಿಂದೆ ಮುದುಕನ ಮದುವೆ ನಾಟಕದಲ್ಲಿ ಅಭಿನಯಿಸಿದ್ದ ಬಹುತೇಕ ಕಲಾವಿದರು ಜು.28ರಂದು ನಡೆಯುವ ನಾಟಕದಲ್ಲಿ ಬಣ್ಣ ಹಚ್ಚಲಿದ್ದಾರೆ. ದೀಪಕ್ ರೈ ಪಾಣಾಜೆ, ರಾಘವೇಂದ್ರ ರೈ, ಕವಿತಾ ಚನ್ನಪಟ್ಟಣ ಪ್ರಮುಖ ಪಾತ್ರದಲ್ಲಿ ಅಭಿನಯಿಸಲಿದ್ದಾರೆ ಎಂದರು. ಸಂಚಾಲಕ ರಾಘವೇಂದ್ರ ರೈ, ಶಿಲ್ಪಾ, ಪತ್ರಕರ್ತ ಶರತ್ ಶೆಟ್ಟಿ ಕಿನ್ನಿಗೋಳಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net