More

    ಇಡೀ ವಿಶ್ವಕ್ಕೆ ನಂದಿನಿ ಬ್ರ್ಯಾಂಡ್ ಅನ್ನು ಪರಿಚಯಿಸುತ್ತೇವೆ: ಸಿಎಂ ಸಿದ್ದರಾಮಯ್ಯ

    ಬೆಂಗಳೂರು: ಈಗಾಗಲೇ ನಮಗೆಲ್ಲಾ ತಿಳಿದಿರುವಂತೆ ಅಮೆರಿಕಾ ಮತ್ತು ವೆಸ್ಟ್​ ಇಂಡೀಸ್​ನಲ್ಲಿ ನಡೆಯಲಿರುವ ಐಸಿಸಿ ಪುರುಷರ ಟಿ20 ವಿಶ್ವಕಪ್ ಟೂರ್ನಿ ಇದೇ ಜೂನ್ 01ರಿಂದ ಪ್ರಾರಂಭವಾಗಲಿದೆ. ಇನ್ನು ಈ ಟೂರ್ನಿಯಲ್ಲಿ ಭಾಗವಹಿಸಲಿರುವ ಐರ್ಲೆಂಡ್​ ಮತ್ತು ಸ್ಕಾಟ್ಲೆಂಡ್ ಕ್ರಿಕೆಟ್ ತಂಡ ಇತ್ತೀಚೆಗಷ್ಟೇ ತಮ್ಮ ಜೆರ್ಸಿಯಲ್ಲಿ ಕರ್ನಾಟಕ ಮೂಲದ ನಂದಿನಿ ಉತ್ಪನ್ನದ ಬ್ರಾಂಡ್ ಅನ್ನು ಅಧಿಕೃತ ಪ್ರಾಯೋಜಕರು ಎಂದು ಘೋಷಿಸಿತು. ಈ ಸಂತಸದ ವಿಷಯ ಕುರಿತು ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕೆಲವು ವಿಷಯಗಳನ್ನು ಜನರೊಂದಿಗೆ ಹಂಚಿಕೊಂಡಿದ್ದಾರೆ.

    ಇದನ್ನೂ ಓದಿ: ನೀವು ಎಲ್ಲರಂತೆ ಸಾಮಾನ್ಯ ಹೆಣ್ಣುಮಗಳಲ್ಲ ಅನ್ಸಿದ್ದು ಏಕೆ?

    “ರಾಜ್ಯದ ಗುಣಮಟ್ಟದ ಹಾಲಿನ ಉತ್ಪನ್ನಗಳನ್ನು ಮತ್ತು ರೈತರ ಶ್ರಮವನ್ನು ವಿಶ್ವಕ್ಕೆ ಪರಿಚಯಿಸಲು ನಮ್ಮ ಸರ್ಕಾರ ನಿರ್ಧರಿಸಿದೆ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ, ನಮ್ಮ ನಾಡಿನ ಹೆಮ್ಮೆಯ ಬ್ರಾಂಡ್​ ಹಾಗೂ ಜನರ ಅಚ್ಚುಮೆಚ್ಚಿನ ಉತ್ಪನ್ನಗಳನ್ನು ಶೀಘ್ರವೇ ದೊಡ್ಡ ಮಟ್ಟದಲ್ಲಿ ಇಡೀ ವಿಶ್ವಕ್ಕೆ ಪರಿಚಯಿಸಲಿದ್ದೇವೆ” ಎಂದು ಹೆಮ್ಮೆಯಿಂದ ನುಡಿದರು.

    “ಮಲೇಷಿಯಾ, ವಿಯೆಟ್ನಾಂ, ಸಿಂಗಾಪುರ, ಅಮೇರಿಕಾ, ದುಬೈ, ಯುಎಇ ಮುಂತಾದ ರಾಷ್ಟ್ರಗಳಲ್ಲಿ ಹೆಸರುವಾಸಿಯಾಗಿರುವ ಕರ್ನಾಟಕದ ಹೆಮ್ಮೆಯ ನಂದಿನಿ ಸಂಸ್ಥೆ ಈಗ ಟಿ20 ವಿಶ್ವಕಪ್ ಪಂದ್ಯಕೂಟದಲ್ಲಿ ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ತಂಡಗಳ ಪ್ರಾಯೋಜಕತ್ವ ಪಡೆದಿದೆ” ಎಂದಿದ್ದಾರೆ.

    ಇದನ್ನೂ ಓದಿ: ಆರ್​ಸಿಬಿ ವಿರುದ್ಧದ ಪಂದ್ಯದಲ್ಲಿ ಬೌಲಿಂಗ್ ಮಾಡಲಿದ್ದಾರೆ ಧೋನಿ! ವಿಡಿಯೋ​ ಕಂಡ ಫ್ಯಾನ್ಸ್ ದಿಲ್ ಖುಷ್​

    “ರಾಜ್ಯದ ಉತ್ಕೃಷ್ಟ ಗುಣಮಟ್ಟದ ಹಾಲಿನ ಉತ್ಪನ್ನಗಳು ಮತ್ತು ನಾಡಿನ ರೈತರ ಶ್ರಮವೆರಡನ್ನೂ ವಿಶ್ವಕ್ಕೆ ಪರಿಚಯಿಸುವ ಸಂಕಲ್ಪ ನಮ್ಮದು. ನಂದಿನಿಯನ್ನು ಜಾಗತಿಕ ಬ್ರಾಂಡ್ ಆಗಿ ರೂಪಿಸುವಲ್ಲಿ ಇದು ಮಹತ್ವದ ಹೆಜ್ಜೆಯಾಗಲಿದೆ. ಈ ಬಾರಿ ವಿಶ್ವಕಪ್‌ನಲ್ಲಿ ರಾರಾಜಿಸಲಿದೆ ನಂದಿನಿ, ಕಂಗೊಳಿಸಲಿದೆ ಕನ್ನಡ. ಇದೊಂದು ಮೈಲಿಗಲ್ಲು ನಿಜ” ಎಂದು ಹೇಳಿದ್ದಾರೆ.

    ಅಂದು ಆರ್​ಸಿಬಿ ಪ್ಲೇಆಫ್​ ಕನಸಿನ ಬಗ್ಗೆ ವಿಲ್​ ಜ್ಯಾಕ್ಸ್​ ನುಡಿದಿದ್ದ ಭವಿಷ್ಯ ಇಂದು ನಿಜವಾಗ್ತಿದೆ! ಏನು ಗೊತ್ತೇ?

    ಇದಕ್ಕೆಲ್ಲಾ ನನಗೆ ಕ್ಯಾಮರಾ ಬೇಕಿಲ್ಲ… ವಿಚ್ಛೇದನದ ಬಗ್ಗೆ ಕಡೆಗೂ ಮೌನ ಮುರಿದ ನಟಿ ಸಂಜೀದಾ ಶೇಖ್

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts