ಮೂಲಸೌಕರ್ಯಕ್ಕೆ 7 ಕೋಟಿ ರೂ. ವೆಚ್ಚದ ಯೋಜನೆ

ನಂಜನಗೂಡು: ತಾಲೂಕಿನ ಸುತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ ಮೂಲ ಸೌಕರ್ಯಕ್ಕಾಗಿ 7 ಕೋಟಿ ರೂ. ವೆಚ್ಚದ ಸಮಗ್ರ ಅಭಿವೃದ್ಧಿ ಯೋಜನೆ ರೂಪಿಸಲಾಗಿದೆ ಎಂದು ಶಾಸಕ ಡಾ.ಎಸ್.ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.

ತ್ತೂರು ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ಶಕ್ತಿ ಪ್ರಚಾರ ಕಾರ್ಯದಲ್ಲಿ ಮಾತನಾಡಿದ ಅವರು, ಈ ಗ್ರಾಮ ಪಂಚಾಯಿತಿ ಎಲ್ಲ ಗ್ರಾಮಗಳಿಗೂ ರಸ್ತೆ, ಚರಂಡಿ, ಕುಡಿಯುವ ನೀರು ಸೇರಿದಂತೆ ಅಗತ್ಯ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ 7 ಕೋಟಿ ರೂ.ವೆಚ್ಚದ ಯೋಜನೆ ಕಾರ್ಯಗತಗೊಳಿಸಲಾಗಿದೆ. ಪಶು ಆಸ್ಪತ್ರೆ ಕೂಡ ಮಂಜೂರಾಗಿದ್ದು, ಕಟ್ಟಡ ನಿರ್ಮಾಣಕ್ಕೆ ಸೂಕ್ತ ನಿವೇಶನ ಗುರುತಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಎರಡನೇ ಹಂತದ ಒಳಚರಂಡಿ ಕಾಮಗಾರಿಯನ್ನು ಶೀಘ್ರ ಕೈಗೆತ್ತಿಕೊಳ್ಳುವುದಾಗಿ ಹೇಳಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎಸ್.ಸಿ.ಬಸವರಾಜು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಸ್ವಾಮಿ, ಗ್ರಾಪಂ ಅಧ್ಯಕ್ಷ ಪಿ.ಸೋಮಣ್ಣ, ಎಪಿಎಂಸಿ ಅಧ್ಯಕ್ಷೆ ಲಕ್ಷ್ಮಮ್ಮ, ಮುಖಂಡರಾದ ಹೊಸಕೋಟೆ ಬಸವರಾಜು, ಪಿಡಿಒ ಸುಮಾ ಇತರರಿದ್ದರು.