More

    ಜೀವನ ಮೌಲ್ಯ ಸಾರುವ ರಾಮಾಯಣದ ಪಾತ್ರಗಳು

    ನಂಜನಗೂಡು: ಮಹರ್ಷಿ ವಾಲ್ಮೀಕಿ ಅವರ ರಚಿಸಿರುವ ರಾಮಾಯಣ ಗ್ರಂಥದಲ್ಲಿ ಬರುವ ಪ್ರತಿಯೊಂದು ಪಾತ್ರವೂ ಜೀವನ ಮೌಲ್ಯವನ್ನು ಸಾರುತ್ತವೆ, ಅವರ ಆದರ್ಶಗಳು ಪ್ರಾತಃಸ್ಮರಣೀಯ ಎಂದು ಶಾಸಕ ದರ್ಶನ್ ಧ್ರುವನಾರಾಯಣ ಹೇಳಿದರು.

    ತಾಲೂಕು ರಾಷ್ಟ್ರಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಶ್ರೀಕಂಠೇಶ್ವರಸ್ವಾಮಿ ದೇವಾಲಯದ ಆವರಣದಲ್ಲಿ ಶನಿವಾರ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಮಹೋತ್ಸವದಲ್ಲಿ ಮಾತನಾಡಿದರು.

    ರಾಮಾಯಣ ಗ್ರಂಥ ಸರ್ವಕಾಲಕ್ಕೂ ನಿಲುಕುವಂತಹದ್ದು. ಅಂದಿನ ಕಾಲಘಟ್ಟದಲ್ಲೇ ಮಾನವೀಯ ಮೌಲ್ಯಗಳನ್ನು ಸಮಾಜದಲ್ಲಿ ಬಿತ್ತುವ ಕಾಯಕದಲ್ಲಿ ತೊಡಗಿದ್ದ ಅವರು ಪ್ರಾತಃಸ್ಮರಣೀಯರು. ಕಳೆದ ನಾಲ್ಕು ವರ್ಷಗಳಿಂದ ವಾಲ್ಮೀಕಿ ಜಯಂತಿ ನಾನಾ ಕಾರಣಗಳಿಂದ ಸರಳವಾಗಿ ಆಚರಿಸಲಾಗುತ್ತಿತ್ತು. ನಾನು ಶಾಸಕನಾದ ಮೇಲೆ ಮೊದಲ ಬಾರಿಗೆ ವಾಲ್ಮೀಕಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಯಿತು. ಮುಂದಿನ ವರ್ಷಗಳಲ್ಲಿ ಇನ್ನೂ ಅದ್ದೂರಿಯಾಗಿ ಆಚರಿಸಲು ತಾಲೂಕಿನ ಜನತೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

    ಆಶ್ರಯ ಸಮಿತಿ ಅಧ್ಯಕ್ಷ ಡಾ.ಎಸ್.ಯತೀಂದ್ರ ಮಾತನಾಡಿ, ದೇಶದಲ್ಲಿ ಮೀಸಲಾತಿ ಜಾರಿಯಲ್ಲಿದ್ದರೂ ಪೂರ್ಣ ಪ್ರಮಾಣದಲ್ಲಿ ಸುಧಾರಣೆ ಆಗಿಲ್ಲ. ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಅನುಷ್ಠಾನಗೊಂಡಾಗ ಮಾತ್ರ ಸುಧಾರಣೆ ಸಾಧ್ಯ ಎಂಬುದನ್ನು ಮನಗಂಡಿರುವ ರಾಜ್ಯ ಸರ್ಕಾರ ಆ ನಿಟ್ಟಿನಲ್ಲಿ ಜಾತಿ ಗಣತಿಗೆ ಆದ್ಯತೆ ನೀಡಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಪರಿಣಾಮಕಾರಿ ಸುಧಾರಣೆ ತರುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕ್ರಮ ವಹಿಸಲಿದೆ ಎಂದರು.
    ಸಾಹಿತಿ ಪ್ರೊ.ಕಾಳೇಗೌಡ ನಾಗವಾರ ಮುಖ್ಯಭಾಷಣ ಮಾಡಿದರು. ಇದೇ ಸಂದರ್ಭ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ತೋರಿದ ಗಣ್ಯರನ್ನು ಗೌರವಿಸಲಾಯಿತು.

    ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ತಹಸೀಲ್ದಾರ್ ಶಿವಕುಮಾರ್ ಕಾಸ್ನೂರು, ಎಸ್ಟಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎಸ್.ಸಿ.ಬಸವರಾಜು, ತಾಲೂಕು ನಾಯಕರ ಸಂಘದ ಅಧ್ಯಕ್ಷ ಬಂಗಾರಸ್ವಾಮಿ, ಗೌರವಾಧ್ಯಕ್ಷ ಸಿ.ಚಿಕ್ಕರಂಗನಾಯ್ಕ, ಟಿಎಪಿಸಿಎಂಎಸ್ ಅಧ್ಯಕ್ಷ ಕುರಹಟ್ಟಿ ಮಹೇಶ್, ಮುಖಂಡ ಕುಂಬ್ರಹಳ್ಳಿ ಸುಬ್ಬಣ್ಣ, ಕಾಂಪೋಸ್ಟ್ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎಸ್.ಮಹದೇವಯ್ಯ, ತಾಲೂಕು ಪಂಚಾಯಿತಿ ಇಒ ಜೆರಾಲ್ಡ್ ರಾಜೇಶ್, ನಗರಸಭಾ ಸದಸ್ಯೆ ಗಾಯತ್ರಿ, ನಗರಸಭೆ ಪೌರಾಯುಕ್ತ ನಂಜುಂಡಸ್ವಾಮಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

    ಅಲಂಕೃತ ಸಾರೋಟ್‌ನಲ್ಲಿ ಪ್ರತಿಷ್ಠಾಪಿಸಲಾಗಿದ್ದ ಮಹರ್ಷಿ ವಾಲ್ಮೀಕಿ ಭಾವಚಿತ್ರದೊಂದಿಗೆ ಕಲಾತಂಡಗಳ ಆಕರ್ಷಕ ಮೆರವಣಿಗೆ ನಡೆಯಿತು. ಸರ್ಕಾರಿ ಬಾಲಕರ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು. ಮೆರವಣಿಗೆಯಲ್ಲಿ ದರ್ಶನ್ ಹೆಜ್ಜೆ ಹಾಕುವ ಮೂಲಕ ಗಮನ ಸೆಳೆದರು. ವೀರಗಾಸೆ, ಡೊಳ್ಳುಕುಣಿತ, ಪೂಜಾಕುಣಿತ, ವೀರಮಕ್ಕಳ ಕುಣಿತ ಸೇರಿದಂತೆ ನಾನಾ ಜನಪದ ಕಲಾತಂಡಗಳ ಪ್ರದರ್ಶನ ನಡೆಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts