ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು


ನಂಜನಗೂಡು: ತಾಲೂಕಿನ ದೇವರಸನಹಳ್ಳಿ ಸಮೀಪ ಅಪರಿಚಿತ ವ್ಯಕ್ತಿ ಭಾನುವಾರ ರೈಲಿಗೆ ಸಿಲುಕಿ ಮೃತಪಟ್ಟಿದ್ದಾನೆ. 65ರಿಂದ 70ರ ವಯೋಮಾನದವರಾಗಿದ್ದು, ಗುರುತು ಪತ್ತೆಯಾಗಿಲ್ಲ.
5.6 ಅಡಿ ಎತ್ತರ, ದುಂಡು ಮುಖ, ದೃಢಕಾಯ ದೇಹ, ಗೋಧಿ ಮೈಬಣ್ಣ, ಕಪ್ಪು ಬಿಳಿ ಮಿಶ್ರಿತ ತಲೆಗೂದಲು, ಗಡ್ಡ ಇದೆ. ಸಿಮೆಂಟ್ ಬಣ್ಣದ ಬಿಳಿ ಗೆರೆಯುಳ್ಳ ತುಂಬುತೋಳಿನ ಶರ್ಟ್, ಕಪ್ಪು ಬಣ್ಣದ ಪ್ಯಾಂಟ್ ಧರಿಸಿದ್ದರು. ಮೃತದೇಹವನ್ನು ಮೈಸೂರಿನ ಮೆಡಿಕಲ್ ಕಾಲೇಜಿನ ಶವಾಗಾರದಲ್ಲಿ ಇರಿಸಲಾಗಿದ್ದು ವಾರಸುದಾರರಿದ್ದಲ್ಲಿ ರೈಲ್ವೆ ಪೊಲೀಸ್ ಠಾಣೆ ಅಥವಾ ಎಎಸ್‌ಐ ರಮೇಶ್ ಮೊಬೈಲ್: 7625073250 ಸಂಪರ್ಕಿಸಬಹುದಾಗಿದೆ.

Leave a Reply

Your email address will not be published. Required fields are marked *