

ವಿಜಯವಾಣಿ ಸುದ್ದಿಜಾಲ ಮಂಗಳೂರು
ದಕ್ಷಿಣ ಕನ್ನಡ ಹಾಗೂ ಚಾಮರಾಜನಗರ ಜಿಲ್ಲೆಗಳ ಸರ್ಕಾರಿ ಹಾಗೂ ಅನುದಾನಿತ ಪ್ರಥಮ ಹಾಗೂ ದ್ವಿತೀಯ ಕಾಲೇಜು ವಿದ್ಯಾರ್ಥಗಳಿಗೆ ಒಟ್ಟು 15 ಸಾವಿರ ಪರಿಸರ ಸ್ನೇಹಿ ಹಾಗೂ ಸುರಕ್ಷಿತ ಮೈತ್ರಿ ಮುಟ್ಟಿನ ಕಪ್‌ಗಳನ್ನು ಪ್ರಾಯೋಗಿಕವಾಗಿ ವಿತರಿಸಲಾಗಿದ್ದುಘಿ, ಮುಂದಿನ ಹಂತದಲ್ಲಿ ಈ ಸೌಲಭ್ಯವನ್ನು ರಾಜ್ಯದ ಎಲ್ಲ ಜಿಲ್ಲೆಗಳಿಗೆ ವಿಸ್ತರಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಹದಿಹರೆಯದ ಹೆಣ್ಣು ಮಕ್ಕಳಲ್ಲಿ ಋತುಚಕ್ರದ ನಿರ್ವಹಣೆಗಾಗಿ ಶುಚಿ- ನನ್ನ ಮೈತ್ರಿ ಮುಟ್ಟಿನ ಕಪ್ ಯೋಜನೆಯಡಿ ನಗರದ ನೆಹರೂ ಮೈದಾನದಲ್ಲಿ ಸೋಮವಾರ ಆಯೋಜಿಸಿದ ರಾಜ್ಯ ಮಟ್ಟದ ಮೈತ್ರಿ ಮುಟ್ಟಿನ ಕಪ್ ಬೃಹತ್ ವಿತರಣಾ ಕಾರ್ಯಕ್ರಮದಲ್ಲಿ ಮುಟ್ಟಿನ ಕಪ್ ವಿತರಿಸಿ ಅವರು ಮಾತನಾಡಿದರು.
ಕಾರ್ಯಕ್ರಮದ ರಾಯಭಾರಿ ಚಲನಚಿತ್ರ ನಟಿ ಸಪ್ತಮಿ ಗೌಡ, ಆರೋಗ್ಯ ಇಲಾಖೆಯ ಆಯುಕ್ತ ರಣದೀಪ್, ನಿರ್ದೇಶಕಿ ಡಾ.ಎಂ.ಇಂದುಮತಿ, ವಿಭಾಗೀಯ ಸಹ ನಿರ್ದೇಶಕಿ ರಾಜೇಶ್ವರಿ ದೇವಿ ಎಚ್.ಆರ್., ಶಾಸಕರಾದ ಅಶೋಕ್ ಕುಮಾರ್ ರೈ, ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಮುಂತಾದವರು ಉಪಸ್ಥಿತರಿದ್ದರು.