ನ್ಯಾನೋ ಟೆಕ್ನಾಲಜಿ ದಿನಾಚರಣೆ

sdm
Published on

ಬೆಳ್ತಂಗಡಿ: ನ್ಯಾನೋ ತಂತ್ರಜ್ಞಾನ ಕೇವಲ ಒಂದು ಕ್ಷೇತ್ರಕ್ಕೆ ಸಂಬಂಧಿಸಿದ್ದಲ್ಲ, ಅದು ರಸಾಯನಶಾಸ್ತ್ರ ಭೌತಶಾಸ್ತ್ರ ಜೀವಶಾಸ್ತ್ರ ಮತ್ತು ಎಲೆಕ್ಟ್ರಾನಿಕ್ಸ್‌ಗೆ ಸಂಬಂಧಿಸಿದ್ದು ಎಂದು ನಿಟ್ಟೆ ಎನ್.ಎ.ಎಂ.ಐ.ಟಿ ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ ಸಂತೋಷ್.ಕೆ ತಿವಾರಿ ಹೇಳಿದರು.

ಬುಧವಾರ ಎಸ್‌ಡಿಎಂ ಕಾಲೇಜಿನಲ್ಲಿ ರಾಸಾಯನಶಾಸ್ತ್ರ ವಿಭಾಗದ ಸ್ಪಟಿಕ ಸಂಘ ಆಯೋಜಿಸಿದ್ದ ನ್ಯಾನೋ ಟೆಕ್ನಾಲಜಿ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

ಪ್ರಾಂಶುಪಾಲ ಡಾ. ಬಿ.ಎ ಕುಮಾರ ಹೆಗ್ಡೆ ಅಧ್ಯಕ್ಷತೆ ವಹಿಸಿ ಮಾತನಾಡಿ, ನ್ಯಾನೋ ತಂತ್ರಜ್ಞಾನ ಇತ್ತೀಚಿನ ದಿನಗಳಲ್ಲಿ ಒಂದು ಮುಖ್ಯ ವಿಷಯ. ಬಹುಶಃ ಮುಂದಿನ ದಿನಗಳಲ್ಲಿ ನಾವು ಇದರ ಮುಖಾಂತರ ಸಸ್ಯಬೆಳೆಗಳನ್ನು ಸುಧಾರಿಸುವ ಬಗ್ಗೆ ಯೋಚಿಸಬಹುದು. ಸಸ್ಯದ ರೋಗಳನ್ನು ಗುರುತಿಸಿ ಪರಿಣಾಮಕಾರಿಯಾಗಿ ಗುಣಪಡಿಸುವ ಬಗ್ಗೆ ಯೋಚಿಸಬಹುದು. ವಿದ್ಯಾರ್ಥಿಗಳು ನ್ಯಾನೋ ತಂತ್ರಜ್ಞಾನವನ್ನು ಸೂಪರ್ ಸ್ಪೆಷಲೈಸೇಶನ್ ಆಗಿ ಆರಿಸಿಕೊಂಡು ಅಧ್ಯಯನ ಮಾಡಿದರೆ ಬಹಳಷ್ಟು ಉದ್ಯೋಗ ಅವಕಾಶಗಳು ದೊರಕುತ್ತದೆ ಎಂದರು.

ರಾಷ್ಟ್ರೀಯ ನ್ಯಾನೋ ಟೆಕ್ನಾಲಜಿ ದಿನದ ಪ್ರಯುಕ್ತ ವಿಭಾಗ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು. ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥೆ ನಂದಕುಮಾರಿ ಕೆ.ಪಿ, ವಿಭಾಗದ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ರುಚಿರ ಕಾರ್ಯಕ್ರಮ ನಿರೂಪಿಸಿ, ವಿದ್ಯಾರ್ಥಿನಿ ಶ್ರೇಯ ಎಸ್ ಭಟ್ ಸ್ವಾಗತಿಸಿ, ಗಿರೀಶ್ ಕೃಷ್ಣ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net