ನಾನೂ ನಾಯಕಿ ತರಬೇತಿ ಕಾರ್ಯಾಗಾರ

28
Published on

ಸುಳ್ಯ: ಕೆವಿಜಿ ಪಾಲಿಟೆಕ್ನಿಕ್ ರಾಷ್ಟ್ರೀಯ ಸೇವಾ ಯೋಜನೆ ಹಳೇ ವಿದ್ಯಾರ್ಥಿಗಳ ಸಂಘ ಎನ್ನೆಸ್ಸೆಸ್ ಸೇವಾ ಸಂಗಮ ಟ್ರಸ್ಟ್ ದಶಮಾನೋತ್ಸವ ಅಂಗವಾಗಿ ಮಹಿಳಾ ದಿನಾಚರಣೆ ಮತ್ತು ‘ನಾನೂ ನಾಯಕಿ’ ಎಂಬ ವಿಷಯದ ಬಗ್ಗೆ ತರಬೇತಿ ಕಾರ್ಯಾಗಾರ ಮಂಡೆಕೋಲು ಗ್ರಾಪಂ, ಗ್ರಂಥಾಲಯದ ಸಹಯೋಗದೊಂದಿಗೆ ನಡೆಯಿತು.

ವ್ಯಕ್ತಿತ್ವ ವಿಕಸನ ತರಬೇತುದಾರೆ ಡಾ.ಅನುರಾಧಾ ಕುರುಂಜಿ ನಾನೂ ನಾಯಕಿ ಎಂಬ ವಿಷಯದಲ್ಲಿ ತರಬೇತಿ ನೀಡಿದರು. ಮಹಿಳೆಯರಿಗೆ, ಮಕ್ಕಳಿಗೆ ವಿವಿಧ ಸ್ಪರ್ಧೆ ನಡೆಸಲಾಯಿತು.

ಎನ್ನೆಸ್ಸೆಸ್ ಸೇವಾ ಸಂಗಮ ಟ್ರಸ್ಟ್ ಗೌರವಾಧ್ಯಕ್ಷ ಬಾಲಕೃಷ್ಣ ಬೊಳ್ಳೂರು ಉದ್ಘಾಟಿಸಿದರು. ಎನ್ನೆಸ್ಸೆಸ್ ಕಾರ್ಯಕ್ರಮಾಧಿಕಾರಿ ಚಂದ್ರಶೇಖರ ಬಿಳಿನೆಲೆ, ಗ್ರಂಥಾಲಯ ಮೇಲ್ವಿಚಾರಕಿ ಸಾವಿತ್ರಿರಾಮ್ ಕಣೆಮರಡ್ಕ, ಗ್ರಾಪಂ ಸದಸ್ಯೆ ಗೀತಾ, ಟ್ರಸ್ಟ್ ಕಾರ್ಯದರ್ಶಿ ವಿಶ್ವಕಿರಣ್ ಉಪಸ್ಥಿತರಿದ್ದರು. ಟ್ರಸ್ಟ್ ಕಾರ್ಯಕಾರಿ ಅಧ್ಯಕ್ಷ ವಿಜೇತ್ ಶಿರ್ಲಾಲ್ ಸ್ವಾಗತಿಸಿದರು. ಸಂಘಟನಾ ಕಾರ್ಯದರ್ಶಿ ಸುಜಿತ್ ಎಂ.ಎಸ್.ವಂದಿಸಿದರು. ಎನ್ನೆಸ್ಸೆಸ್ ಘಟಕ ನಾಯಕಿ ಅಪೂರ್ವ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net