21 C
Bengaluru
Thursday, January 23, 2020

ಆರೋಗ್ಯ ಕೇಂದ್ರಕ್ಕೆ ತಜ್ಞ ವೈದ್ಯರ ನೇಮಕಕ್ಕೆ ಆಗ್ರಹ

Latest News

ಮೊಕದ್ದಮೆ ಹಿಂಪಡೆಯಲು ಒತ್ತಾಯ

ಮೈಸೂರು: ಮಾನಸಗಂಗೋತ್ರಿಯಲ್ಲಿ ಎನ್‌ಆರ್‌ಸಿ, ಸಿಎಎ ವಿರೋಧಿಸಿ ನಡೆದ ಪ್ರತಿಭಟನೆ ಸಂದರ್ಭ ‘ಫ್ರೀ ಕಾಶ್ಮೀರ’ ಫಲಕ ಪ್ರದರ್ಶನಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಮೇಲೆ ಹೂಡಿರುವ ಮೊಕದ್ದಮೆ...

ವಿದ್ಯಾಭ್ಯಾಸದ ಸಂದರ್ಭ ಪ್ರತಿಭಟನೆ ಬೇಡ

ಮೈಸೂರು: ಶಿಕ್ಷಣಕ್ಕೆ ಸಂಬಂಧಿಸಿದ ಸಮಸ್ಯೆಗಳಿದ್ದಲ್ಲಿ ವಿಶ್ವವಿದ್ಯಾಲಯಗಳ ಒಳಗೆ ಬಗೆಹರಿಸಿಕೊಳ್ಳಬೇಕೇ ಹೊರತು, ವಿದ್ಯಾಭ್ಯಾಸದ ಸಂದರ್ಭದಲ್ಲಿ ಪ್ರತಿಭಟನೆಗಳಿಗೆ ಮುಂದಾಗಬಾರದು ಎಂದು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್...

ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ ಜಾರಿಗೊಳಿಸಿ

ಮೈಸೂರು: ವಿಧಾನಸಭೆ, ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಮೀಸಲಾತಿ ಜಾರಿಗೊಳಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದರು. ಕರ್ನಾಟಕ ಪ್ರದೇಶ ಮಹಿಳಾ...

ಕೇಂದ್ರದ ಬಿಜೆಪಿ ಸರ್ಕಾರ ಬಿದ್ದ ದಿನ ಪೌರತ್ವ ತಿದ್ದುಪಡಿ ಕಾಯ್ದೆಯೂ ರದ್ದಾಗುತ್ತದೆ: ನಿವೃತ್ತ ಐಎಎಸ್​ ಅಧಿಕಾರಿ ಕಣ್ಣನ್​ ಗೋಪಿನಾಥನ್​

ಧಾರವಾಡ: ಪೌರತ್ವ ತಿದ್ದುಪಡಿ ಕಾಯ್ದೆ ಇಡೀ ರಾಷ್ಟ್ರಕ್ಕೆ ಸಂಬಂಧಿಸಿದ ಹಿನ್ನೆಲೆಯಲ್ಲಿ ಎಲ್ಲ ರಾಜ್ಯಗಳಲ್ಲೂ ಹೋರಾಟ ತೀವ್ರಗೊಂಡಿದೆ ಎಂದು ನಿವೃತ್ತ ಐಎಎಸ್​ ಅಧಿಕಾರಿ ಕಣ್ಣನ್​...

ಕಾಲೇಜ್ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ

ಹಾವೇರಿ: ಇಲ್ಲಿನ ಪಿಬಿ ರಸ್ತೆಯಲ್ಲಿರುವ ಜಿಎಚ್ ಕಾಲೇಜ್​ನಲ್ಲಿ ಹೆಜ್ಜೇನು ದಾಳಿಯಿಂದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಬುಧವಾರ ಮಧ್ಯಾಹ್ನ ಸಂಭವಿಸಿದೆ.

ನಾಪೋಕ್ಲು: ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರಕ್ಕೆ ತಜ್ಞ ವೈದ್ಯರ ನೇಮಕ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಒದಗಿಸುವಂತೆ ಆಗ್ರಹಿಸಿ ಮಂಗಳವಾರ ವಿವಿಧ ಸಂಘ ಸಂಸ್ಥೆಗಳ ನೇತೃತ್ವದಲ್ಲಿ ಅಹೋರಾತ್ರಿ ಧರಣಿ ಆರಂಭಿಸಲಾಯಿತು.

ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಲಭಿಸದೆ ಮೃತಪಟ್ಟವರ ಆತ್ಮಕ್ಕೆ ಶಾಂತಿ ಕೋರಿ ಮೌನಾಚರಣೆ ಮಾಡಿ ಶ್ರದ್ಧಾಂಜಲಿ ಸಲ್ಲಿಸುವ ಮೂಲಕ ಧರಣಿಗೆ ಹಿರಿಯರಾದ ಬೊಪ್ಪೇರ ಕಾವೇರಪ್ಪ ಚಾಲನೆ ನೀಡಿದರು.

ನಂತರ ಮಾತನಾಡಿ, 27ಗ್ರಾಮಗಳನ್ನು ಒಳಪಟ್ಟಿರುವ ನಾಪೋಕ್ಲುವಿನ ಸಮುದಾಯ ಅರೋಗ್ಯ ಕೇಂದ್ರದಲ್ಲಿ 6ಜನರ ತಜ್ಞ ವೈದ್ಯರ ಕೊರತೆ ಇದೆ. ರೋಗಿಗಳು ದೂರದ ಊರುಗಳಿಗೆ ಹೋಗಬೇಕಾದ ಪರಿಸ್ಥಿತಿ ಇದೆ. ಈಗ ಇಬ್ಬರೇ ವೈದ್ಯರಿದ್ದು ನಿತ್ಯ 400ಕ್ಕಿಂತಲೂ ಹೆಚ್ಚು ರೋಗಿಗಳು ಬರುವುದರಿಂದ ಎಲ್ಲರನ್ನು ನಿಭಾಯಿಸುವುದು ಕಷ್ಟವಾಗಿದೆ. ಈ ಬಗ್ಗೆ ಹಲವು ಬಾರಿ ಸಂಬಂಧಿಸಿದವರ ಗಮನ ಸೆಳೆಯಲಾಗಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ದೂರಿದರು.

ಡಿಎಚ್‌ಒ ವಾಪಸ್: ಧರಣಿ ನಡೆಯುತ್ತಿದ್ದ ಸ್ಥಳಕ್ಕೆ ಜಿಲ್ಲಾ ಆರೋಗ್ಯಾಧಿಕಾರಿ ಭೇಟಿ ನೀಡಿ ಆಸ್ಪತ್ರೆಗೆ ವೈದ್ಯರನ್ನು ನೇಮಿಸುವ ಭರವಸೆ ನೀಡಿದರಾದರೂ ಹಿಂದೆ ನೀಡಿರುವ ಭರವಸೆ ಈಡೇರಿಸಿಲ್ಲ ಎಂದು ಅವರಿಗೆ ಪ್ರತಿಭಟನಾಕಾರರು ೇರಾವ್ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಧರಣಿ ನಿರತರನ್ನು ಮನವೊಲಿಸಲು ವಿಫಲರಾದ ಡಿಎಚ್‌ಒ ಹಿಂದಿರುಗಿದರು.

ಬಳಿಕ ಧರಣಿ ನೇತೃತ್ವ ವಹಿಸಿದ್ದ ಆರ್‌ಟಿಐ ಕಾರ್ಯಕರ್ತ ಕೆ.ಎ.ಹ್ಯಾರೀಸ್ ಬೇಡಿಕೆ ಈಡೇರುವವರೆಗೆ ಧರಣಿ ಮುಂದುರಿಸುವುದಾಗಿ ಎಚ್ಚರಿಸಿದರು.

ಗ್ರಾಪಂ ಉಪಾಧ್ಯಕ್ಷ ಕಾಳೆಯಂಡ ಸಾಬ ತಿಮ್ಮಯ್ಯ, ಮಾಜಿ ಸೈನಿಕರ ಸಂಘದ ಉಪಾಧ್ಯಕ್ಷ ಕೊಂಡೀರ ಗಣೇಶ್ ನಾಣಯ್ಯ, ಜಯಕರ್ನಾಟಕ ಸಂಘಟನೆಯ ಮಡಿಕೇರಿ ತಾಲೂಕು ಅಧ್ಯಕ್ಷ ಬಿದ್ದಾಟಂಡ ಜಿನ್ನು ನಾಣಯ್ಯ, ವಾಹನ ಚಾಲಕ ಮತ್ತು ಮಾಲೀಕರ ಸಂಘದ ಅಧ್ಯಕ್ಷ ಎಂ.ಈ.ರಜಾಕ್, ಜಕ್ರೀಯ, ಮಣವಟ್ಟೀರ ಪೊನ್ನು ಪೊನ್ನಣ್ಣ, ನಿಡುಮಂಡ ಕೃತಿ ಸೇರಿದಂತೆ ವಿವಿಧ ಸಂಘಸಂಸ್ಥೆಗಳ ಸದಸ್ಯರು, ಸಾರ್ವಜನಿಕರು ಹಾಜರಿದ್ದರು.

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...