More

    ಬಿದ್ದಾಟಂಡ ವಾಡೆ ನಾಡ್ ಮಂದ್‌ನಲ್ಲಿ ಕೋಲಾಟ

    ನಾಪೋಕ್ಲು: ಸಮೀಪದ ಬಿದ್ದಾಟಂಡ ವಾಡೆಯ ಐತಿಹಾಸಿಕ ನೂರಂಬಡ ನಾಡ್ಮಂದ್ನಲ್ಲಿ ಇತ್ತೀಚೆಗೆ ಹುತ್ತರಿ ಹಬ್ಬದ ಪ್ರಯುಕ್ತ ಕೋಲಾಟ ನಡೆಯಿತು.
    ಬೇತು ಗ್ರಾಮದ ಪ್ರಸಿದ್ಧ್ದ ಮಕ್ಕಿ ಶಾಸ್ತಾವು ದೇವಾಲಯದಿಂದ ಊರಿನ ಮುಖ್ಯಸ್ಥರು ದೇವರ ಕೋಲು, ಬೆಳ್ಳಿಯ ಕಡತಲೆ (ಖಡ್ಗ)ದೊಂದಿಗೆ ಸಾಂಪ್ರದಾಯಿಕ ಕಾಪಳ ಕಳಿ ಕೊಂಬು ಕೊಟ್ಟು ವಾಲಗ, ದುಡಿಕೊಟ್ಟ್ ಪಾಟ್ನೊಂದಿಗೆ ಬೇತು ಗ್ರಾಮದ ಕುರುಂಬರಾಟ್ ಎಂಬಲ್ಲಿ ಮೆರವಣಿಗೆಯಲ್ಲಿ ಬರುತ್ತಿದ್ದಂತೆ ನೂರಂಬಡ ಮಂದ್ನಲ್ಲಿ ಬಿದ್ದಾಟಂಡ ಕುಟುಂಬದ ಹಿರಿಯರು ಸಾಂಪ್ರದಾಯಿಕ ಉಡುಪು ಧರಿಸಿ ಸ್ವಾಗತಿಸಿದರು. ಬಳಿಕ ಹುತ್ತರಿ ಕೋಲಾಟಕ್ಕೆ ಚಾಲನೆ ದೊರಕಿತು.
    ನೂರಂಬಡ ನಾಡಿಗೆ ಸಂಬಂಧಿಸಿದಂತೆ ಬೇತು ಗ್ರಾಮದ ಮಕ್ಕಿ ಶಾಸ್ತಾವು ದೇವಾಲಯದಿಂದ ಹುತ್ತರಿ ಕೋಲಾಟಕ್ಕೆ ಚಾಲನೆ ನೀಡಲಾಗುತ್ತದೆ. ಅದರಂತೆ ನಾಪೋಕ್ಲು ಗ್ರಾಮದವರು ದುಡಿಕೊಟ್ಟ್ ಪಾಟ್ ಆಗಿ ವಾಡೆಗೆ ಬರುತ್ತಾರೆ. ಅದರಂತೆ ಮೂಟೇರಿ ಕೊಳಕೇರಿಯ ಗ್ರಾಮಸ್ಥರು ಬರುತ್ತಿದ್ದಂತೆ ಅವರನ್ನು ಬಿದ್ದಾಟಂಡ ವಾಡೆಗೆ ಬರಮಾಡಿಕೊಳ್ಳಲಾಯಿತು. ನಂತರ ಕೋಲಾಟ ನಡೆಸುವ ಮರದ ಕೆಳಗೆ ದೇವರ ಕೋಲನ್ನು ಇಟ್ಟು ಪ್ರಾರ್ಥನೆ ಸಲ್ಲಿಸಲಾಯಿತು.
    ಹುತ್ತರಿ ಕೋಲಾಟದ ಹಬ್ಬದಲ್ಲಿ ಕಾಪಳಕಳಿಗೆ ಹೆಚ್ಚು ಮಹತ್ವ ಇದೆ. ಹುತ್ತರಿ ಹಬ್ಬದಂದು ಬೇತು ಗ್ರಾಮದ ಮಕ್ಕಿ ದೇವಾಲಯಕ್ಕೆ ಅಡಗಿದ ಕೆಂಬಟ್ಟಿ ಜನಾಂಗದವರು ಕಾಪಳ ವೇಷವನ್ನು ಧರಿಸುತ್ತಾರೆ. ಮೈಗೆ ಮಸಿ ಬಳಿದು, ಅಂಗರೇ ಕೋಲು ಹಿಡಿದು ವಾದ್ಯಕ್ಕೆ ತಂಕ್ಕಂತೆ ಕುಣಿಯುತ್ತಾರೆ. ಈ ವೇಷ ಎರಡು ಮೂರು ದಿನಗಳ ಕಾಲ ಇದ್ದು ಸಾಂಪ್ರದಾಯಿಕವಾಗಿ ನಡೆದು ಬಂದಿರುತ್ತದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts