ಕಳಸಾ-ಬಂಡೂರಿ ಅನುಷ್ಠಾನಕ್ಕೆ ಕೇಂದ್ರ ನಿರ್ಲಕ್ಷ್ಯ

blank

ನರಗುಂದ: ಮಹದಾಯಿ, ಕಳಸಾ-ಬಂಡೂರಿ ಯೋಜನೆ ಅನುಷ್ಠಾನಕ್ಕಾಗಿ ಕೇಂದ್ರ ಸರ್ಕಾರ ನಿರ್ಲಕ್ಷ್ಯ ಮಾಡುತ್ತಿದೆ. ಈಗಾಗಲೇ ರಾಜ್ಯದಿಂದ ಅನೇಕ ಬಾರಿ ಕೇಂದ್ರಕ್ಕೆ ಮನವಿ ಮಾಡಲಾಗಿದೆ. ಆದರೂ ಕೇಂದ್ರ ಸರ್ಕಾರ ಸರಿಯಾಗಿ ಉತ್ತರ ನೀಡುತ್ತಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಆರೋಪಿಸಿದರು.

ಕಳಸಾ-ಬಂಡೂರಿ ಯೋಜನೆ ಅನುಷ್ಠಾನ, ಹುತಾತ್ಮ ರೈತನ ಸ್ಮಾರಕ ಭವನ ನಿರ್ವಣಕ್ಕೆ ಆಗ್ರಹಿಸಿ ನರಗುಂದದಲ್ಲಿ ರೈತರು ನಡೆಸುತ್ತಿರುವ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಶನಿವಾರ ಭೇಟಿ ನೀಡಿ ರೈತರಿಂದ ಮನವಿ ಸ್ವೀಕರಿಸಿ ಅವರು ಮಾತನಾಡಿದರು.

ಕೇಂದ್ರ ಸರ್ಕಾರ ಉತ್ತರ ಕರ್ನಾಟಕದ ಮಹದಾಯಿ, ಕಳಸಾ- ಬಂಡೂರಿ ಯೋಜನೆ ಅನುಷ್ಠಾನ ಇನ್ನೂ ನಿರ್ಲಕ್ಷ್ಯ ಮಾಡಿದಲ್ಲಿ ಈ ಭಾಗದ ರೈತರು ಎಂದಿಗೂ ಸರ್ಕಾರವನ್ನು ಕ್ಷಮಿಸುವುದಿಲ್ಲ. ಯೋಜನೆ ತ್ವರಿತಗತಿಯಲ್ಲಿ ಅನುಷ್ಠಾನಗೊಳಿಸಬೇಕೆಂದು ಕೇಂದ್ರ ಸರ್ಕಾರಕ್ಕೆ ರಾಜ್ಯದಿಂದ ಪತ್ರ ಬರೆಯಲಾಗಿದೆ. ಆದರೆ, ಕೇಂದ್ರ ಯಾಕೆ ಹಿಂದೇಟು ಹಾಕುತ್ತಿದೆ ಎಂಬುದು ತಿಳಿಯುತ್ತಿಲ್ಲ ಕಳವಳ ವ್ಯಕ್ತಪಡಿಸಿದರು.

ಹುತಾತ್ಮ ರೈತನ ವೀರಗಲ್ಲು ಹಾಗೂ ಸ್ಮಾರಕ ಭವನ ನಿರ್ವಣಕ್ಕೆ ರೈತರು ನೀಡಿದ ಸ್ವೀಕರಿಸಿ, ಸರ್ಕಾರದಿಂದ ರೈತ ಪುತ್ಥಳಿ ಅನಾವರಣ, ಸ್ಮಾರಕ ಭವನ ನಿರ್ವಣಕ್ಕೆ ವಿಶೇಷ ಶ್ರಮ ವಹಿಸಲಾಗುವುದು. ಡಿಸೆಂಬರ್ ಅಂತ್ಯದೊಳಗಾಗಿ ಇದನ್ನು ಕಾರ್ಯರೂಪಕ್ಕೆ ತರಲಾಗುವುದು ಎಂದು ಸಚಿವ ಎಚ್.ಕೆ. ಪಾಟೀಲ ಸತ್ಯಾಗ್ರಹ ನಿರತ ರೈತರಿಗೆ ಭರವಸೆ ನೀಡಿದರು.

ಸಚಿವರ ಭರವಸೆಗೆ ಸಮ್ಮಿತಿ ವ್ಯಕ್ತಪಡಿಸಿದ ಸತ್ಯಾಗ್ರಹ ನಿರತ ರೈತರು ಅ. 13ರಿಂದ ಆಮರಣ ಉಪವಾಸ ಸತ್ಯಾಗ್ರಹ ಕೈ ಬಿಟ್ಟು ನಿತ್ಯ ಸರದಿ ಉಪವಾಸ ಕೈಗೊಳ್ಳುವ ನಿರ್ಣಯ ಕೈಗೊಂಡರು.

ಶಂಕರಪ್ಪ ಅಂಬಲಿ, ರೈತ ಸಂಘದ ತಾಲೂಕ ಅಧ್ಯಕ್ಷ ವಿಠ್ಠಲ ಜಾಧವ, ಬಸವರಾಜ ಸಾಬಳೆ, ಚನ್ನು ನಂದಿ, ನಬಿಸಾಬ್ ಕಿಲ್ಲೇದಾರ, ಬಸವರಾಜ ತಾವರೆ, ರವಿ ಒಡೆಯರ್, ಈರಣ್ಣ ಸೊಪ್ಪಿನ, ಶಂಕರಗೌಡ ಪಾಟೀಲ, ಮನೋಹರ ಹುಯಿಲಗೋಳ, ಕಲ್ಲಯ್ಯ ಮಠಪತಿ, ಈರಮ್ಮ ಮೇಟಿ, ಮೇರಿ ಸುದರ್ಶನ, ಸಿಪಿಐ ಮಂಜುನಾಥ ನಡುವಿನಮನಿ, ಇತರರು ಇದ್ದರು.

Share This Article

ಕೂಡಲೇ ಇವುಗಳನ್ನು ತಿನ್ನುವುದನ್ನು ನಿಲ್ಲಿಸದಿದ್ರೆ ನಿಮ್ಮ ವೀರ್ಯಾಣುಗಳ ಸಂಖ್ಯೆ ಕಡಿಮೆಯಾಗೋದು ಗ್ಯಾರಂಟಿ! Sperm Count

Sperm Count : ಇತ್ತೀಚಿನ ದಿನಗಳಲ್ಲಿ ಪುರುಷರಲ್ಲಿ ವೀರ್ಯಾಣುಗಳ ಸಂಖ್ಯೆ ಕಡಿಮೆಯಾಗುವುದು ಸಾಮಾನ್ಯ ಸಮಸ್ಯೆಯಾಗಿದೆ. ಇದು…

ಕ್ಯಾರೆಟ್​ ಬರ್ಫಿಗೆ ಫಿದಾ ಆಗದವರೇ ಇಲ್ಲ; ಮನೆಯಲ್ಲೇ ಮಾಡಲು ಇಲ್ಲಿದೆ ಸಿಂಪಲ್​ ವಿಧಾನ | Recipe

ಕ್ಯಾರೆಟ್​​ ಹಲ್ವಾ ಎಲ್ಲರಿಗೂ ಇಷ್ಟ, ಅದಕ್ಕಾಗಿಯೇ ಕ್ಯಾರೆಟ್ ಹಲ್ವಾವನ್ನು ಎಲ್ಲಾ ಋತುವಿನಲ್ಲೂ ಹಲವಾರು ಬಾರಿ ತಯಾರಿಸಿ…

ಆರೋಗ್ಯಕರ ಹೃದಯಕ್ಕೆ ಮೊಟ್ಟೆ ಎಷ್ಟು ಸಹಕಾರಿ ಗೊತ್ತಾ?; ನಿಮಗಾಗಿ ಹೆಲ್ತಿ ಮಾಹಿತಿ | Health Tips

ಮೊಟ್ಟೆಗಳು ಪ್ರೋಟೀನ್‌ನ ಉತ್ತಮ ಮೂಲವಾಗಿದ್ದು, ವಿಟಮಿನ್ ಬಿ, ಫೋಲೇಟ್, ಕೊಬ್ಬಿನಲ್ಲಿ ಕರಗುವ ಜೀವಸತ್ವಗಳು (ಎ, ಡಿ,…