

ಮುಳ್ಳೇರಿಯ: ನಾರಂಪಾಡಿ ಶ್ರೀ ಉಮಾಮಹೇಶ್ವರ ಕ್ಷೇತ್ರದಲ್ಲಿ ನಡೆಯಲಿರುವ ಪುನಃಪ್ರತಿಷ್ಠಾಪನಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕದ ವಿಜ್ಞಾಪನಾ ಪತ್ರ ಬಿಡುಗಡೆ ಹಾಗೂ ನಿಧಿ ಸಂಗ್ರಹ ಕಾರ್ಯಕ್ರಮಕ್ಕೆ ಕ್ಷೇತ್ರದಲ್ಲಿ ಭಾನುವಾರ ಚಾಲನೆ ನೀಡಲಾಯಿತು.
ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ನಿತ್ಯಾನಂದ ಶೆಣೈ ಬದಿಯಡ್ಕ ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರದ ತಂತ್ರಿ ದೇಲಂಪಾಡಿ ಗಣೇಶ ತಂತ್ರಿ ವಿಜ್ಞಾಪನಾ ಪತ್ರ ಬಿಡುಗಡೆ ಮಾಡಿದರು. ಅಗಲ್ಪಾಡಿ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದ ಆಡಳಿತ ಮೊಕ್ತೇಸರ ಎ.ಜಿ.ಶರ್ಮಾ ಕೋಳಿಕ್ಕಜೆ ನಿಧಿ ಸಂಗ್ರಹಕ್ಕೆ ಚಾಲನೆ ನೀಡಿದರು. ಅಗಲ್ಪಾಡಿ ಕ್ಷೇತ್ರದ ಸೇವಾ ಸಮಿತಿ ಅಧ್ಯಕ್ಷ ರಾಜೇಶ್ ಮಜೆಕ್ಕಾರ್, ನಾರಂಪಾಡಿ ಕ್ಷೇತ್ರದ ಸೇವಾ ಸಮಿತಿ ಅಧ್ಯಕ್ಷ ತಲೇಕ ಸುಬ್ರಹ್ಮಣ್ಯ ಭಟ್, ಹಣಕಾಸು ಸಮಿತಿ ಅಧ್ಯಕ್ಷ ಸಂಜೀವ ಶೆಟ್ಟಿ ಮೊಟ್ಟೆಕುಂಜ, ಪ್ರಧಾನ ಸಂಚಾಲಕ ಹರಿನಾರಾಯಣ ಶಿರಂತ್ತಡ್ಕ, ಉಬ್ರಂಗಳ ಶ್ರೀ ಮಹಾದೇವ ಕ್ಷೇತ್ರದ ಆಡಳಿತ ಸಮಿತಿ ಕಾರ್ಯದರ್ಶಿ ಕಿರಣ್ ಕುಣಿಕುಳ್ಳಾಯ, ಶ್ರೀಕ್ಷೇತ್ರದ ಅರ್ಚಕ ಶಂಕರನಾರಾಯಣ ಕೆದಿಲಾಯ, ಬ್ರಹ್ಮಕಲಶೋತ್ಸವ ಸಮಿತಿ ಕೋಶಾಧಿಕಾರಿ ಸೀತಾರಾಮ ಕುಂಜತ್ತಾಯ, ಕುಞಿರಾಮ ಗೋಸಾಡ ಮತ್ತಿತರರು ಉಪಸ್ಥಿತರಿದ್ದರು.
ಬ್ರಹ್ಮಕಲಶ ಸಮಿತಿ ಸದಸ್ಯರು, ವಿವಿಧ ಉಪಸಮಿತಿಗಳ ಪದಾಧಿಕಾರಿಗಳು, ಸೇವಾ ಸಮಿತಿ ಸದಸ್ಯರು, ಭಕ್ತರು ನಿಧಿ ಸಂಗ್ರಹದಲ್ಲಿ ಪಾಲ್ಗೊಂಡರು. ಸಮಿತಿ ಪ್ರಧಾನ ಕಾರ್ಯದರ್ಶಿ ಬಾಲಕೃಷ್ಣ ನಾರಂಪಾಡಿ ಸ್ವಾಗತಿಸಿದರು. ಕಾರ್ಯದರ್ಶಿ ಹರೀಶ್ ನಾರಂಪಾಡಿ ವಂದಿಸಿದರು. ರವೀಂದ್ರ ಶೆಟ್ಟಿ ಗೋಸಾಡ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಬಲಿವಾಡು ಕೂಟ ನಡೆಯಿತು.