ಲೋಕ ಹಿತ ಕಾರ್ಯಕ್ಕೆ ಆದ್ಯತೆ : ಕೊಂಡೆವೂರು ಶ್ರೀ ಆಶೀರ್ವಚನ

New Project-1
Published on

ವಿಜಯವಾಣಿ ಸುದ್ದಿಜಾಲ ಬದಿಯಡ್ಕ

ಪ್ರತಿಯೊಬ್ಬರೂ ಲೋಕಹಿತದ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಕೊಂಡೆವೂರು ಶ್ರೀ ನಿತ್ಯಾನಂದ ಯೋಗಾಶ್ರಮದ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ ಹೇಳಿದರು.

ನಾರಂಪಾಡಿ ಶ್ರೀ ಉಮಾಮಹೇಶ್ವರ ಕ್ಷೇತ್ರದಲ್ಲಿ ನವೀಕರಣ ಪುನಃ ಪ್ರತಿಷ್ಠಾಪನೆ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಅಂಗವಾಗಿ ಸೋಮವಾರ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು.

ಬ್ರಹ್ಮಕಲಶಾಭಿಷೇಕ ಸಮಿತಿ ಅಧ್ಯಕ್ಷ ನಿತ್ಯಾನಂದ ಶೆಣೈ ಅಧ್ಯಕ್ಷತೆ ವಹಿಸಿದ್ದರು. ಆರ್‌ಎಸ್‌ಎಸ್ ಅಖಿಲ ಭಾರತೀಯ ಕುಟುಂಬ ಪ್ರಮೋದನ್ ಕಾರ್ಯಕರ್ತ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಧಾರ್ಮಿಕ ಉಪನ್ಯಾಸ ನೀಡಿದರು. ಮುಂಡೋಳು ಶ್ರೀ ಮಹಾವಿಷ್ಣು ಶ್ರೀಶಾಸ್ತಾರ ದುರ್ಗಾಪರಮೇಶ್ವರಿ ಕ್ಷೇತ್ರ ಆಡಳಿತ ಮೊಕ್ತೇಸರ ರಘುರಾಮ ಬಲ್ಲಾಳ್, ಸಾಮಾಜಿಕ ಕಾರ್ಯಕರ್ತ ಕೆ.ಶ್ರೀಕಾಂತ್, ಉದ್ಯಮಿ ಸುರೇಶ್, ಸಾಹಿತಿ ರಾಧಾಕೃಷ್ಣ ಕೆ.ಉಳಿಯತ್ತಡ್ಕ ಮಾತನಾಡಿದರು.

ನಾರಂಪಾಡಿ ಗುತ್ತು ದೈವಸ್ಥಾನದ ಬಾಲಕೃಷ್ಣ ರೈ, ಶ್ರೀ ಕ್ಷೇತ್ರ ಬ್ರಹ್ಮಕಲಶಾಭಿಷೇಕ ಸಮಿತಿ ಉಪಾಧ್ಯಕ್ಷರಾದ ವಾಸುದೇವ ಭಟ್ ಉಪ್ಪಂಗಳ, ಶಂಕರನಾರಾಯಣ ಮಯ್ಯ ಬದಿಯಡ್ಕ, ಪದ್ಮನಾಭ ಭಟ್ ಕೊರೆಕ್ಕಾನ, ನೆಕ್ರಾಜೆ ಶ್ರೀ ಸಂತಾನ ಗೋಪಾಲಕೃಷ್ಣ ಕ್ಷೇತ್ರ ಸೇವಾ ಸಮಿತಿ ಅಧ್ಯಕ್ಷ ಗಣೇಶ ವತ್ಸ ನೆಕ್ರಾಜೆ, ಬ್ರಹ್ಮಕಲಶಾಭಿಷೇಕ ಸಮಿತಿ ಪ್ರಧಾನ ಕಾರ್ಯದರ್ಶಿ ಬಾಲಕೃಷ್ಣ ನಾರಂಪಾಡಿ, ಸೇವಾ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಭಟ್ ತಲೇಕ ಮತ್ತಿತರರು ಉಪಸ್ಥಿತರಿದ್ದರು.

ಉದಯ ನಾರಂಪಾಡಿ ಪ್ರಾರ್ಥನೆಗೈದರು. ಸೀತಾರಾಮ ಕುಂಜತ್ತಾಯ ಸ್ವಾಗತಿಸಿದರು. ಹರ್ಷ ಬೆಳಿಂಜ ಕಾರ್ಯಕ್ರಮ ನಿರ್ವಹಿಸಿದರು.

ವೈದಿಕ, ಸಾಂಸ್ಕೃತಿಕ ಕಾರ್ಯಕ್ರಮ

ಶ್ರೀ ಕ್ಷೇತ್ರದಲ್ಲಿ ವಿವಿಧ ವೈದಿಕ ಕಾರ್ಯಕ್ರಮ ನಡೆಯಿತು. ಬಳಿಕ ಸಂಗೀತ ವಿದ್ಯಾಪೀಠ ವೀಣಾವಾದಿನಿ ಯೋಗೀಶ ಶರ್ಮಾ ಬಳ್ಳಪದವು ಅವರಿಂದ ಭಕ್ತಿ ಸಂಗೀತ ಕಾರ್ಯಕ್ರಮ, ರಾತ್ರಿ ಮಾವಿನಕಟ್ಟೆ ಶ್ರೀ ಅಯ್ಯಪ್ಪ ಸ್ವಾಮಿ ಯಕ್ಷಗಾನ ಕಲಾ ಸಂಘದಿಂದ ದಕ್ಷಯಜ್ಞ-ಗಿರಿಜಾ ಕಲ್ಯಾಣ ಯಕ್ಷಗಾನ ಬಯಲಾಟ ಪ್ರದರ್ಶನಗೊಂಡಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net