ಅಸ್ಪಶ್ಯತೆ ವಿರುದ್ಧ ಹೋರಾಡಿದ ದಾರ್ಶನಿಕ: ಶಾಸಕ ರಾಜೇಶ್ ನಾಯ್ಕ್ ಹೇಳಿಕೆ

sandeep
ಬಂಟ್ವಾಳ ತಾಲೂಕು ಮಟ್ಟದ 170ನೇ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯಲ್ಲಿ ಪತ್ರಕರ್ತ ಸಂದೀಪ್ ಸಾಲ್ಯಾನ್ ಉಪನ್ಯಾಸ ನೀಡಿದರು. ಶಾಸಕ ರಾಜೇಶ್ ನಾಯ್ಕ್ , ತಹಸೀಲ್ದಾರ್ ಡಿ.ಅರ್ಚನಾ ಭಟ್ ಮತ್ತಿತರರು ಉಪಸ್ಥಿತರಿದ್ದರು.
Published on

ಬಂಟ್ವಾಳ: ಬ್ರಹ್ಮಶ್ರೀ ನಾರಾಯಣ ಗುರು ಯಾರನ್ನೂ ದ್ವೇಷ ಮಾಡದೆ ಸಮಾಜದಲ್ಲಿದ್ದ ಅಸಮಾನತೆ, ಅಸ್ಪಶ್ಯತೆ ವಿರುದ್ಧ ಹೋರಾಡಿದ ಶ್ರೇಷ್ಠ ದಾರ್ಶನಿಕ. ನಾರಾಯಣ ಗುರು ಒಂದು ಸಮುದಾಯಕ್ಕೆ ಸೀಮಿತರಾದವರಲ್ಲ. ಅವರ ತತ್ವಾದರ್ಶಗಳು ಸಾರ್ವಕಾಲಿಕ. ಮುಂದಿನ ದಿನಗಳಲ್ಲಿ ಎಲ್ಲರನ್ನು ಸೇರಿಸಿಕೊಂಡು ಪ್ರತ್ಯೇಕ ಆಚರಣ ಸಮಿತಿ ಮೂಲಕ ಗುರುಗಳ ಜಯಂತಿ ಆಚರಿಸಬೇಕೆಂದು ಶಾಸಕ ರಾಜೇಶ್ ನಾಯ್ಕ್ ಹೇಳಿದರು.

ಬಂಟ್ವಾಳ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಆಶ್ರಯದಲ್ಲಿ ಬಿ.ಸಿ.ರೋಡ್ ಆಡಳಿತ ಸೌಧ ಸಭಾಂಗಣದಲ್ಲಿ ನಾರಾಯಣ ಗುರುಗಳ 170ನೇ ಜಯಂತಿ ಉದ್ಘಾಟಿಸಿ ಮಾತನಾಡಿದರು.

ಪತ್ರಕರ್ತ ಸಂದೀಪ್ ಸಾಲ್ಯಾನ್ ಉಪನ್ಯಾಸ ನೀಡಿ, ಪ್ರಸ್ತುತ ಕಾಲಘಟ್ಟದಲ್ಲಿ ಯುವ ಸಮುದಾಯಕ್ಕೆ ಗುರುಗಳ ತತ್ವ ಸಂದೇಶ ತಲುಪಿಸುವ ಅನಿವಾರ್ಯತೆ ಇದೆ. ಬದಲಾವಣೆ ಕಾಲಘಟ್ಟದಲ್ಲಿ ನಮಗರಿವಿಲ್ಲದಂತೆ ಜಾತಿ ವ್ಯವಸ್ಥೆ ಸಮಾಜದಲ್ಲಿ ಬೇರೂರುತ್ತಿದ್ದು, ಅಂತಹ ಅಸಮಾನತೆ ತೊಲಗಿಸಲು ಗುರುಗಳ ಚಿಂತನೆ ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕಾಗಿದೆ ಎಂದರು.

ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಸಂಜೀವ ಪೂಜಾರಿ, ಉಪಾಧ್ಯಕ್ಷ ಭುವನೇಶ್‌ಪಚ್ಚಿನಡ್ಕ, ಯುವವಾಹಿನಿ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷೆ ಜಯಂತಿ ವಿ.ಪೂಜಾರಿ, ಪ್ರಧಾನ ಕಾರ್ಯದರ್ಶಿ ರಮೇಶ್ ತುಂಬೆ, ಕೋಶಾಧಿಕಾರಿ ಆನಂದ ಸಾಲ್ಯಾನ್, ಕೆ.ಸಂಜೀವ ಪೂಜಾರಿ, ತಾಪಂ ಕಾರ್ಯನಿರ್ವಹಣಾಧಿಕಾರಿ ಸಚಿನ್, ಆರೋಗ್ಯಾಧಿಕಾರಿ, ಅಶೋಕ್ ರೈ, ಸಮಾಜ ಕಲ್ಯಾಣಾಧಿಕಾರಿ ಸುನೀತಾ, ಉಪನೋಂದಣಾಧಿಕಾರಿ ಕವಿತಾ ಮತ್ತಿತರ ಗಣ್ಯರು ಉಪಸ್ಥಿತರಿದ್ದರು. ಕಂದಾಯ ನಿರೀಕ್ಷಕ ಜನಾರ್ದನ ಸ್ವಾಗತಿಸಿ, ಶ್ರೀಕಲಾ ಕಾರಂತ್ ವಂದಿಸಿದರು, ಉಪತಹಸೀಲ್ದಾರ್ ನವೀನ್ ಬೆಂಜನಪದವು ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net