ನಾರಾಯಣಗುರುಗಳು ಸಮಾನತೆಗಾಗಿ ಹೋರಾಡಿದ ಸಂತ

udp-20-narayana guru
Published on

ಉಡುಪಿ: ಶತಮಾನಗಳ ಹಿಂದೆ ಸಮಪಾಲು&-ಸಮಬಾಳ್ವೆಗಾಗಿ ಧ್ವನಿ ಎತ್ತಿದ ನಾರಾಯಣಗುರುಗಳು ಯಾವುದೇ ರಕ್ತ ಕ್ರಾಂತಿಗಳಿಲ್ಲದೆ ಶುದ್ಧ ಚಾರಿತ್ರ$್ಯ ಹಾಗೂ ಬದ್ಧತೆಗಳ ಮೂಲಕ ಸಮಾಜದಲ್ಲಿನ ಮೇಳು-ಕೀಳು ಎಂಬ ಅಂಧಕಾರವನ್ನು ಹೋಗಲಾಡಿಸಿದರು. ಅವರು ಸಮಾನತೆಗಾಗಿ ಹೋರಾಡಿದ ಮಹಾನ್​ ಸಂತ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಮಂಗಳವಾರ ಮಲ್ಪೆಯ ಸರ್ಕಾರಿ ಪಪೂ ಕಾಲೇಜಿನ ಸಭಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸತಿ ಇಲಾಖೆ ಹಾಗೂ ಬಿಲ್ಲವ ಸಮಾಜ ಸೇವಾ ಸಂಘದ ಸಂಯುಕ್ತ ಆಶ್ರಯದಲ್ಲಿ ನಡೆದ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಉದ್ಘಾಟಿಸಿ ಮಾತನಾಡಿದರು.
ಜಾತಿ ಪದ್ದತಿ, ಅಸ್ಪ್ರಶ್ಯತೆ, ಜೀತ ಪದ್ದತಿ ಹಾಗೂ ಮಹಿಳಾ ದೌರ್ಜನ್ಯ ಮುಂತಾದ ಮೂಢನಂಬಿಕೆ ನಿವಾರಣೆಗಾಗಿ ಶ್ರಮಿಸಿದ ನಾರಾಯಣ ಗುರುಗಳ ಜೀವನ ಹಾಗೂ ಹೋರಾಟ ಸರ್ವರಿಗೂ ಆದರ್ಶವಾಗಿದೆ ಎಂದರು.

ಶಾಸಕ ಯಶ್​ಪಾಲ್​ ಸುವರ್ಣ ಅಧ್ಯಕ್ಷತೆ ವಹಿಸಿ ಮಾತನಾಡಿ, ನಾರಾಯಣ ಗುರುಗಳು ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬ ಧ್ಯೇಯವಾಕ್ಯವನ್ನು ಹೊಂದಿ ಪ್ರತಿಯೊಬ್ಬರು ಸಮಾನತೆಯಿಂದ ಬದುಕಬೇಕು ಎಂಬ ಉದ್ದೇಶದಿಂದ ಸಮಾನತೆಯ ಪರಿಕಲ್ಪನೆಯನ್ನು ಜನರಲ್ಲಿ ಬಿತ್ತುವುದರೊಂದಿಗೆ ಮಾನವರೆಲ್ಲರೂ ಒಂದೇ ಎಂಬ ತತ್ವವನ್ನು ವಿಶ್ವಕ್ಕೆ ಸಾರಿದರು. ಹಿಂದುಳಿದ ವರ್ಗಗಳ ಏಳಿಗೆಯಲ್ಲಿ ಗುರುಗಳ ಪಾತ್ರ ಮಹತ್ವದ್ದಾಗಿದೆ ಎಂದರು.

ನಾರಾಯಣ ಗುರುಗಳ ಆಚಾರ-&ವಿಚಾರ ಇಂದಿನ ಯುವ ಪೀಳಿಗೆಗೆ ಮಾದರಿಯಾಗಿದ್ದು, ಅವರ ಆದರ್ಶ-ತತ್ವಗಳನ್ನು ನಮ್ಮ ಪ್ರತಿನಿತ್ಯದ ಜೀವನದಲ್ಲಿ ಆಳವಡಿಸಿಕೊಳ್ಳವುದರ ಜೊತೆಗೆ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಬೇಕು ಎಂದ ಅವರು, ವಿಧಾನಸಭೆಯಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ ಪುತ್ಥಳಿ ನಿಮಾರ್ಣಕ್ಕಾಗಿ ಈಗಾಗಲೇ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿದೆ ಎಂದರು.
ಮಂಗಳೂರು ವಿಶ್ವವಿದ್ಯಾನಿಲಯದ ಸಂಶೋಧನಾ ವಿದ್ಯಾರ್ಥಿ ಶ್ರೇಯಸ್​ ಕೋಟ್ಯಾನ್​ ಉಪನ್ಯಾಸ ನೀಡಿ ಮಾತನಾಡಿದರು.

ಈ ಸಂಧರ್ಭದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಜಯಂತಿಯ ಪ್ರಯುಕ್ತ ಅಯೋಜಿಸಿದ್ದ ಪ್ರಬಂಧ ಹಾಗೂ ಭಾಷಣ ಸ್ಪರ್ಧೆಯ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಮಲ್ಪೆ ಸೆಂಟ್ರಲ್​ ವಾರ್ಡ್​ ನಗರಸಭಾ ಸದಸ್ಯೆ ಎಡ್ಲೀನ್​ ಕರ್ಕಡ, ತಹಶೀಲ್ದಾರ್​ ಗುರುಪ್ರಸಾದ್​, ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ಎಲ್ಲಮ್ಮ, ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಗೋಪಾಲ ಸಿ ಬಂಗೇರ, ಶತಮಾನೋತ್ಸವ ಸಮಿತಿಯ ಅಧ್ಯಕ್ಷ ದಿನೇಶ್​ ಎ. ಸುವರ್ಣ, ಮಲ್ಪೆ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮುಖ್ಯೋಪಾಧ್ಯಾಯಿನಿ ಸಂಧ್ಯಾ ಮತ್ತಿತರರು ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿ, ತೇಜಸ್​ ನಿರೂಪಿಸಿದರು. ಕಾಲೇಜಿನ ಪ್ರಾಂಶುಪಾಲ ವರ್ಗೀಸ್​ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net